ಶುಕ್ರವಾರ, ಅಕ್ಟೋಬರ್ 18, 2024
ಶಸ್ತಾçಸ್ತçಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಸಂಡೂರು ವಿಧಾನಸಭೆ ಉಪಚುನಾವಣೆ-2024ರ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಭಾರತೀಯ ಶಸ್ತಾçಸ್ತç ಕಾಯ್ದೆ 1959 ಕಲಂ (4), ಕಲಂ (21) ಮತ್ತು ಕಲಂ 24-ಎ(1) ರಡಿ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಶಸ್ತಾçಸ್ತçದಾರರ ಶಸ್ತಾçಸ್ತç (ಫೈರ್ ಆರ್ಮ್ಸ್)ಗಳನ್ನು (ರಾಷ್ಟಿçÃಕೃತ ಬ್ಯಾಂಕ್‌ಗಳು, ರಿಸರ್ವ್ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ ಬ್ಯಾಂಕ್‌ಗಳ ಸೆಕ್ಯೂರಿಟಿ ಗಾರ್ಡ್ಗಳ ಆಯುಧಗಳನ್ನು ಹೊರತುಪಡಿಸಿ) ತಕ್ಷಣದಿಂದಲೇ ಸಂಬAಧಪಟ್ಟ ಪೊಲೀಸ್ ಠಾಣೆಯಲ್ಲಿ ನ.25 ರ ವರೆಗೆ ಠೇವಣಿ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಂಡೂರು ತಾಲ್ಲೂಕು, ವೇಣಿ ವೀರಾಪುರ, ಕುಡತಿನಿ (ಬಳ್ಳಾರಿ ತಾಲ್ಲೂಕು), ತಿಮ್ಮಲಾಪುರ, ಏಳುಬೆಂಚಿ (ಕುರುಗೋಡು ತಾಲ್ಲೂಕು) ವ್ಯಾಪ್ತಿಯ ಶಸ್ತಾçಸ್ತçದಾರರು ತಮ್ಮ ಶಸ್ತಾçಸ್ತçಗಳನ್ನು ಸಂಬAಧಪಟ್ಟ ಪೊಲೀಸ್ ಠಾಣೆಯಲ್ಲಿ ರವರೆಗೆ ಠೇವಣಿ ಮಾಡಬೇಕು.
*ಸೂಚನೆ:*
ಸಾರ್ವಜನಿಕರು ಪಡೆದ ‘ಪರವಾನಗಿ ಪಡೆದ ಶಸ್ತಾçಸ್ತçಗಳ ಠೇವಣಿ’ ಯಿಂದ ವಿನಾಯಿತಿ ಪಡೆಯಲು ಬಯಸುವವರು ಅ.22 ರೊಳಗಾಗಿ ತಮ್ಮ ಮನವಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ಸಾರ್ವಜನಿಕರಿಂದ ಸ್ವೀಕೃತವಾದ ಮನವಿಗಳನ್ನು “ಸ್ಕಿçÃನಿಂಗ್ ಕಮಿತಿ” ಯಲ್ಲಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಕಮಿಟಿಯ ನಿರ್ಣಯವು ಅಂತಿಮವಾಗಿರುತ್ತದೆ.
ಸಿ.ಆರ್.ಪಿ.ಸಿ ಕಾಯ್ದೆ 1973 ಕಲಂ 144 ರಡಿ ಯಾವುದೇ ಶಸ್ತಾçಸ್ತç ಪರವಾನಿಗೆದಾರರು ತಮ್ಮ ಶಸ್ತಾçಸ್ತçವನ್ನು ಚುನಾವಣೆ ಸ್ಥಳ ಮತ್ತು ಸಾರ್ವಜನಿಕ ಸ್ಥಳದಲ್ಲಿ ಹೊತ್ತೊಯ್ಯುವುದು ಮತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ