ಗುರುವಾರ, ಅಕ್ಟೋಬರ್ 31, 2024
ಮೀನುಗಾರಿಕೆ ಇಲಾಖೆ: ಮತ್ಸö್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸö್ಯವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸö್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ.
ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸö್ಯವಾಹಿನಿ ವಾಹನಗಳನ್ನು ನೀಡಲಾಗುತ್ತದೆ.
ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು.
ಅರ್ಜಿ ಸಲ್ಲಿಸಲು ನ.11 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8722574158, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.7204911897, ಬಳ್ಳಾರಿ ಮೀನುಗಾರಿಕೆ ಉಪ ನಿರ್ದೇಶಕರ ಮೊ.9449593156 ಗೆ ಸಂರ್ಪಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ