ಶನಿವಾರ, ನವೆಂಬರ್ 30, 2024
ಬಳ್ಳಾರಿ: ಗ್ರಾಪಂಗಳಲ್ಲಿ ತೆರವಾದ ಸ್ಥಾನಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಜಿಲ್ಲೆಯ ಬಳ್ಳಾರಿ, ಸಿರುಗುಪ್ಪ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಸಲಾಗಿದ್ದು, ಹೊಸದಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
*ಪಟ್ಟಿ:*
*ಬಳ್ಳಾರಿ ತಾಲ್ಲೂಕು:*
ಕಪ್ಪಗಲ್ಲು ಗ್ರಾಪಂ-ಅವಿರೋಧವಾಗಿ ಈಶ್ವರಮ್ಮ(ಸಾಮಾನ್ಯ) ಆಯ್ಕೆ.
ರ‍್ರಗುಡಿ ಗ್ರಾಪಂ-ಅವಿರೋಧವಾಗಿ ಪಾರ್ವತಮ್ಮ(ಅನುಸೂಚಿತ ಜಾತಿ) ಮತ್ತು ಅಪ್ಪನಗೌಡರ ಬಸವನಗೌಡ(ಸಾಮಾನ್ಯ) ಆಯ್ಕೆ.
ಬಿ.ಬೆಳಗಲ್ಲು ಗ್ರಾಪಂ-ಅವಿರೋಧವಾಗಿ ರ‍್ರಿಸ್ವಾಮಿ(ಅನುಸೂಚಿತ ಜಾತಿ) ಆಯ್ಕೆ.
*ಕುರುಗೋಡು:*
ಕಲ್ಲುಕಂಭ ಗ್ರಾಪಂ: ಅವಿರೋಧವಾಗಿ ಗೌರಮ್ಮ(ಅನುಸೂಚಿತ ಪಂಗಡ ಮಹಿಳೆ) ಮತ್ತು ನಾಗಮ್ಮ(ಸಾಮಾನ್ಯ ಮಹಿಳೆ) ಆಯ್ಕೆ.
ದಮ್ಮೂರು ಗ್ರಾಪಂ: ಚುನಾವಣೆ ಮೂಲಕ ಭೂದೇವಿ.ವೈ(ಸಾಮಾನ್ಯ) ಆಯ್ಕೆ.
*ಸಿರುಗುಪ್ಪ:*
ತಾಳೂರು ಗ್ರಾಪಂ: ಅವಿರೋಧವಾಗಿ ಆಲರವಿ ರುದ್ರಪ್ಪ(ಅನುಸೂಚಿತ ಜಾತಿ) ಆಯ್ಕೆ.
ಕೆಂಚನಗುಡ್ಡ ಗ್ರಾಪಂ: ಅವಿರೋಧವಾಗಿ ದೊಡ್ಡ ಹುಲಿಗೆಮ್ಮ(ಅನುಸೂಚಿತ ಜಾತಿ ಮಹಿಳೆ) ಆಯ್ಕೆ.
ಕೆ.ಸುಗೂರು ಗ್ರಾಪಂ: ಅವಿರೋಧವಾಗಿ ಲಕ್ಷö್ಮಮ್ಮ(ಅನುಸೂಚಿತ ಜಾತಿ) ಆಯ್ಕೆ.
*ಕಂಪ್ಲಿ:*
ಸಣಾಪುರ ಗ್ರಾಪಂ: ಅವಿರೋಧವಾಗಿ ಎಸ್.ನೆಟ್ಟಿಕಲ್ಲಪ್ಪ(ಅನುಸೂಚಿತ ಜಾತಿ) ಆಯ್ಕೆ.
ಎಮ್ಮಿಗನೂರು ಗ್ರಾಪಂ: ಅವಿರೋಧವಾಗಿ ತ್ರಿವೇಣಿ(ಸಾಮಾನ್ಯ) ಮತ್ತು ಪಿ.ನೀಲಾವತಿಪ(ಸಾಮಾನ್ಯ ಮಹಿಳೆ) ಆಯ್ಕೆ.
ದೇವಲಾಪುರ ಗ್ರಾಪಂ: ಅವಿರೋಧವಾಗಿ ಶಿವಗಂಗಮ್ಮ ಉಪ್ಪಾರಹಳ್ಳಿ(ಸಾಮಾನ್ಯ ಮಹಿಳೆ) ಆಯ್ಕೆ.
ಮೆಟ್ರಿ ಗ್ರಾಪಂ: ಅವಿರೋಧವಾಗಿ ಗುಂಡಪ್ಪ(ಅನುಸೂಚಿತ ಪಂಗಡ) ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
--------------
ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮುಗಿದ ಯಾವುದೇ ಔಷಧಿ ಬಳಸುತ್ತಿಲ್ಲ: ಡಾ.ಆರ್.ಅಬ್ದುಲ್ಲಾ ಸ್ಪಷ್ಟನೆ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮೀರಿದ ಯಾವುದೇ ಔಷಧಿಗಳನ್ನು ಸಾರ್ವಜನಿಕರಿಗೆ ವಿತರಣೆಯಾಗುತ್ತಿಲ್ಲ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಾಟ್ಸಾಫ್ ಗ್ರೂಪ್‌ಗಳಲ್ಲಿ ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮೀರಿದ ಔಷಧಿಗಳನ್ನು ವಿತರಿಸಲಾಗುತ್ತಿದ್ದು, ಅದರಲ್ಲೂ ಟ್ರೊಮೊಡೊಲ್ ಹೈಡ್ರೋಕ್ಲೋರಿಡ್ (50ಮಿ.ಲಿ) ಇಂಜೆಕ್ಷನ್ ಕೊಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆಯಂತೆ, ಡಾ.ಅಬ್ದುಲ್ಲಾ ಅವರು ಶನಿವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಔಷಧಿ ದಾಸ್ತಾನು ವಿಭಾಗ, ಇಂಜೆಕ್ಷನ್ ನೀಡುವ ಸ್ಥಳ ಮತ್ತು ವೈದ್ಯರು ರೋಗಿಗಳನ್ನು ಪರೀಕ್ಷಿಸುವ ಸ್ಥಳ ಪರಿಶೀಲಿಸಿದಾಗ ಯಾವುದೇ ಅವಧಿ ಮೀರಿದ ಔಷಧಿಗಳನ್ನು ನೀಡಿರುವ ಕುರಿತು ಮತ್ತು ದಾಸ್ತಾನು ವಿತರಣೆ ಮಾಡಿರುವ ಕುರಿತು ಯಾವುದೇ ದಾಖಲಾತಿಗಳಲ್ಲಿ ನಮೂದಾಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹೆಸರು ಉಲ್ಲೇಖ ಮಾಡಿರುವ ಔಷಧಿಯು ಪ್ರಸ್ತುತ ಅವಧಿ ಮೀರದೇ ಇರುವುದು ಕಂಡುಬAದಿದೆ, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನಗತ್ಯವಾಗಿ ತಪ್ಪು ಮಾಹಿತಿ ನೀಡುವ ಇಂತಹ ಸುಳ್ಳು ಸುದ್ದಿಗಳನ್ನು ನಂಬಬಾರದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ತಪ್ಪು ಮಾಹಿತಿ ಒದಗಿಸಬಾರದು.
ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಔಷಧಿ ಪಡೆಯುವಂತೆ ಮತ್ತು ಯಾವುದೇ ಅನುಮಾನವಿಲ್ಲದೇ ವೈದ್ಯರು ಸೂಚಿಸುವ ಔಷಧಿ ತೆಗೆದುಕೊಳ್ಳಲು ತಿಳಿಸಿದ್ದಾರೆ ಮತ್ತು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವವರ ಬಗ್ಗೆ ತಕ್ಷಣವೇ ಮಾಹಿತಿ ನೀಡಲು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ಜವಳಿ, ಪ್ರಸೂತಿ ತಜ್ಞರಾದ ಡಾ.ಆಶಿಯಾ ಬೇಗಮ್, ಔಷಧಿ ಅಧಿಕಾರಿ ಶೇಷಗಿರಿ ದಾನಿ, ಪ್ರಕಾಶ್, ಶ್ರೀನಿವಾಸರೆಡ್ಡಿ ಮುಂತಾದವರು ಹಾಜರಿದ್ದರು.
-----------
ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ಪರವಾನಗಿ ಪಡೆಯಬೇಕು ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ.
ನಗರ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು, ಮಹಾನಗರ ಪಾಲಿಕೆ ಕಾರ್ಯಾಲಯದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು.
ಸಾರ್ವಜನಿಕರ ಸ್ಥಳಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಬಳಸಿದ್ದಲ್ಲಿ ಅಂತವರ ವಿರುದ್ಧ ದಂಡ ವಿಧಿಸಲಾಗುವುದು ಹಾಗೂ ಉದ್ದಿಮೆದಾರರು ಪರವಾನಗಿ ಪಡೆಯದೇ ಇತರೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ.
------------
ಕುಡುತಿನಿ: ನೋಂದಣಿಗೆ ಅರ್ಜಿ ಆಹ್ವಾನ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಕುಡುತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮ್ಯಾನುವಲ್ ಸ್ಕಾö್ಯವೆಂಜರ್‌ಗಳ ಮರು ಸಮೀಕ್ಷೆ ಕೈಗೊಳ್ಳಲಾಗಿದ್ದು, ಪಟ್ಟಣದಲ್ಲಿ ವಾಸಿಸುವ ಅನೈರ್ಮಲ್ಯ ಶೌಚಾಲಯಗಳ ಹಾಗೂ ಮ್ಯಾನುವಲ್ ಸ್ಕಾö್ಯವೆಂಜರ್‌ಗಳ ಕಾರ್ಮಿಕರಿದ್ದಲ್ಲಿ ಸ್ವಯಂ ಪ್ರೇರಿತರಾಗಿ ಡಿ.07ರೊಳಗಾಗಿ ಪಟ್ಟಣ ಪಂಚಾಯಿತಿ ಕಚೇರಿಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಕುಡುತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಬಳ್ಳಾರಿ ಮಹಾನಗರ ಪಾಲಿಕೆ: ಅರ್ಜಿ ಆಹ್ವಾನ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಾಘವೇಂದ್ರ ಕಾಲೋನಿ 2ನೇ ಹಂತ, ರಾಮಯ್ಯ ಕಾಲೋನಿ ಹಾಗೂ ಸೊಂತ ಲಿಂಗಣ್ಣ ಕಾಲೋನಿ ಪ್ರದೇಶದಲ್ಲಿರುವ ಪಾರ್ಕ್ಗಳನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿತವಾದ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಮಹನಾಗರ ಪಾಲಿಕೆ ಕಚೇರಿ ತಿಳಿಸಿದೆ.
ಆಸಕ್ತ ಮಹಿಳಾ ಸ್ವಸಹಾಯ ಸಂಘಗಳು ಮಹಾನಗರಪಾಲಿಕೆಯ ವಲಯ ಕಚೇರಿ –2 ರಲ್ಲಿನ ಡೇ-ನಲ್ಮ್ ಶಾಖೆಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದುಕೊಂಡು, ಡಿ.13ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಪ್ರಸ್ತಾವನೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ –2ರ ಡೇ-ನಲ್ಮ್ ಶಾಖೆಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
----------
ಡಿ.03 ರಂದು ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ; ಜಾಗೃತಿ ಜಾಥ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ) :
ಜಿಲ್ಲಾ ಕೇಂದ್ರದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಡಿ.03 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಚಾಲನೆ ನೀಡುವರು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಅಧಿಕಾರಿ ಅವರು ತಿಳಿಸಿದ್ದಾರೆ.
-----------
ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರಿಶೀಲನೆ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ ಮೆಣಸಿನಕಾಯಿ ಬೆಳೆಗೆ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟ, ಬೂದಿ ರೋಗ, ಹಣ್ಣು ಕೋಳೆ ರೋಗ, ಮತ್ತು ಎಲೆ ಮುಟುರು ರೋಗ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗ ಶಾಸ್ತçದ ಹಿರಿಯ ವಿಜ್ಞಾನಿ ಡಾ.ಪಾಲಯ್ಯ, ಕೀಟ ಶಾಸ್ತçಜ್ಞರಾದ ಡಾ.ಆನಂದ ಕುಮಾರ್ ಹಾಗೂ ತೋಟಗಾರಿಕೆ ಇಲಾಖೆಯಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯಾ ಯರಗಲ್ ಮತ್ತು ರೂಪನಗುಡಿ ರೈತ ಸಂಪರ್ಕ ಕೇಂದ್ರ ಪ್ರವೀಣ್ ಕುಮಾರ್ ನಾಯ್ಕ ಒಳಗೊಂಡ ತಂಡವು ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಕಕ್ಕಬೇವಿನಹಳ್ಳಿ, ಶಂಕರಬAಡೆ, ಇಬ್ರಾಹಿಂಪುರ ಮತ್ತು ರೂಪನಗುಡಿ ಜೊತೆಗೆ ಇತರೆ ಸುತ್ತ ಮುತ್ತ ಹಳ್ಳಿಗಳಿಗೆ ಭೇಟಿ ಕೊಟ್ಟು ಮೆಣಸಿನಕಾಯಿ ಬೆಳೆಯ ರೋಗ ಮತ್ತು ಕೀಟ ಅತೋಟಿಗಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಸಲಹೆ ನೀಡಿದರು.
-----------
ನೀರಾವರಿ ಸಲಹಾ ಸಮಿತಿ ವೇಳಾಪಟ್ಟಿಯಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಬಿಡುಗಡೆ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನ 122ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಹಿಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ಈ ಕೆಳಗಿನಂತೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆದ ಶಿವರಾಜ ಎಸ್.ತಂಗಡಗಿ ಅವರು ತಿಳಿಸಿದ್ದಾರೆ.
*ವೇಳಾಪಟ್ಟಿ:*
*ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ:*
ಡಿ.01 ರಿಂದ 15 ರವರೆಗೆ 1500 ಕ್ಯೂಸೆಕ್‌ನಂತೆ, ಡಿ.16 ರಿಂದ 31 ರವರೆಗೆ 2000 ಕ್ಯೂಸೆಕ್‌ನಂತೆ, 2025ರ ಜ.01 ರಿಂದ 31 ರವರೆಗೆ 3800 ಕ್ಯೂಸೆಕ್‌ನಂತೆ, ಫೆ.01 ರಿಂದ 28 ರವರೆಗೆ 3800 ಕ್ಯೂಸೆಕ್‌ನಂತೆ, ಮಾ.01 ರಿಂದ 31 ರವರೆಗೆ 3800 ಕ್ಯೂಸೆಕ್‌ನಂತೆ ಮತ್ತು ಕುಡಿಯುವ ನೀರಿಗಾಗಿ ಏ.01 ರಿಂದ 10 ರವರೆಗೆ 1650 ಕ್ಯೂಸೆಕ್‌ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
*ಎಡದಂಡೆ ವಿಜಯನಗರ ಕಾಲುವೆ:*
2025ರ ಏ.11 ರಿಂದ ಮೇ.10 ರವರೆಗೆ 150 ಕ್ಯೂಸೆಕ್‌ನಂತೆ ವಿತರಣಾ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
*ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ:*
ಡಿ.01 ರಿಂದ 10 ರವರೆಗೆ ನೀರು ನಿಲುಗಡೆ, ಡಿ.11 ರಿಂದ 31 ರವರೆಗೆ 800 ಕ್ಯೂಸೆಕ್‌ನಂತೆ, 2025ರ ಜ.01 ರಿಂದ 10 ರವರೆಗೆ ನೀರು ನಿಲುಗಡೆ ಮತ್ತು ಜ.11 ರಿಂದ 31 ರವರೆಗೆ 800 ಕ್ಯೂಸೆಕ್‌ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
*ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ:*
ಡಿ.01 ರಿಂದ 15 ರವರೆಗೆ 400 ಕ್ಯೂಸೆಕ್‌ನಂತೆ, ಡಿ.16 ರಿಂದ 31 ರವರೆಗೆ 600 ಕ್ಯೂಸೆಕ್‌ನಂತೆ, 2025ರ ಜ.01 ರಿಂದ 31 ರವರೆಗೆ 650 ಕ್ಯೂಸೆಕ್‌ನಂತೆ, ಫೆ.01 ರಿಂದ 28 ರವರೆಗೆ 650 ಕ್ಯೂಸೆಕ್‌ನಂತೆ ಮತ್ತು ಮಾ.01 ರಿಂದ 31 ರವರೆಗೆ 700 ಕ್ಯೂಸೆಕ್‌ನಂತೆ ಮತ್ತು ಕುಡಿಯುವ ನೀರಿಗಾಗಿ ಏ.01 ರಿಂದ ಮೇ.31 ರವರೆಗೆ 100 ಕ್ಯೂಸೆಕ್‌ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
*ರಾಯ ಬಸವಣ್ಣ ಕಾಲುವೆ:*
ಡಿ.10 ರಿಂದ 2025ರ ಜ.10 ರವರೆಗೆ ನೀರು ನಿಲುಗಡೆ ಮತ್ತು 2025ರ ಜ.11 ರಿಂದ ಮೇ 31 ರವರೆಗೆ 250 ಕ್ಯೂಸೆಕ್‌ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
*ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ:*
ಡಿ.01 ರಿಂದ 25 ಕ್ಯೂಸೆಕ್‌ನಂತೆ ಅಥವಾ ಜಲಾಶಯದ ನೀರಿನ ಮಟ್ಟ 1585 ಅಡಿಗಳವರೆಗೆ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
*ರೈತರಲ್ಲಿ ಮನವಿ:*
ತುಂಗಭದ್ರಾ ಜಲಾಶಯದಲ್ಲಿ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು.
ರೈತರು ಅನಧೀಕೃತವಾಗಿ ನೀರು ಪಡೆದು ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು, ರೈತರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಡಿ.01 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.30(ಕರ್ನಾಟಕ ವಾರ್ತೆ):
ನಗರದ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ವರ್ಗಾವಣೆ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿ.01 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-6 ಫೀಡರ್ ಮಾರ್ಗದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀ ನಗರ, ರೇಣುಕಾ ನಗರ, ಭಗತ್ ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್‌ಪಿ ವೃತ್ತ, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಶುಕ್ರವಾರ, ನವೆಂಬರ್ 29, 2024
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ ಸುವರ್ಣ ಕನ್ನಡ ರಾಜ್ಯೋತ್ಸವ; ಅದ್ದೂರಿ ಮೆರವಣಿಗೆ-ಹಬ್ಬದ ವಾತಾವರಣ ಸೃಷ್ಠಿ | ಕನ್ನಡ ನಾಡಿನಲ್ಲಿ ಜನಿಸುವುದೇ ಪುಣ್ಯ: ಡಾ.ಜಯಕರ್.ಎಸ್.ಎಂ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಶ್ರೀಮಂತ ಸಂಸ್ಕೃತಿ, ಮನಸೂರೆಗೊಳ್ಳುವ ಕಲೆ, ಭೌಗೋಳಿಕ ವಿಶೇಷತೆ ಹಾಗೂ ವೈವಿಧ್ಯತೆಯಿಂದ ಕೂಡಿದ ಕನ್ನಡ ನಾಡಿನಲ್ಲಿ ಜನಿಸುವುದೇ ಪುಣ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಜಯಕರ ಎಸ್.ಎಂ ಅವರು ಹೇಳಿದರು.
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮAದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸುವರ್ಣ ಕರ್ನಾಟಕ ಸಂಭ್ರಮ-ಕರ್ನಾಟಕ ರಾಜ್ಯೋತ್ಸವ-69 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕದ ಪ್ರದೇಶಗಳಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗದಲ್ಲಿ ಪ್ರಾದೇಶಿಕವಾರು ಮಾತನಾಡುವ ಭಾಷೆ ಶೈಲಿ, ಆಚಾರ-ವಿಚಾರ, ಉಡುಗೆ-ತೊಡುಗೆ ಬದಲಾವಣೆಗೊಳ್ಳುತ್ತದೆ. ಎಲ್ಲೇ ಇದ್ದರೂ ನಾವಾಡೋ ಮಾತು, ಉಸಿರಾಡೋ ಗಾಳಿ, ನಮ್ಮ ನಡೆ-ನುಡಿಯಲ್ಲೂ ಕನ್ನಡತವನ್ನು ಮೈಗೂಡಿಸಿಕೊಂಡು ವೈವಿಧ್ಯತೆಯಲ್ಲೂ ಏಕತೆಯನ್ನು ಎತ್ತಿಹಿಡಿಯಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಉದಯಗೊಂಡು 69 ವರ್ಷ ಕಳೆಯಿತು. ಈ ಮೊದಲು ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿದ್ದ ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ಮರು ನಾಮಕರಣ ಮಾಡಿದ 50 ವರ್ಷದ ಸಂಭ್ರಮದಲ್ಲಿ ನಾವಿದ್ದೇವೆ ಎಂದರು.
ಕನ್ನಡ ನಾಡಿನ ಜನರು ಇತರೆ ಭಾಗಗಳಿಗೆ ಹೋದರೂ ಕನ್ನಡವನ್ನು ಸಂಭ್ರಮಿಸುವ ಗುಣ ಹೊಂದಿದ್ದಾರೆ. ಐತಿಹಾಸಿಕ ಹಿನ್ನೆಲೆ ಹೊಂದಿದ ಕನ್ನಡ ಸಂಸ್ಕೃತಿಯನ್ನು ಉನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಕನ್ನಡಾಭಿಮಾನಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ನಾಡಿನ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅವರು ಮಾತನಾಡಿ, ಕನ್ನಡ ಭಾಷೆಗೆ ಅವಿರತ ಇತಿಹಾಸವಿದೆ. ಅನೇಕ ಶಾಸನ, ಸಾಹಿತ್ಯ, ವಚನ, ಕೃತಿ, ಲೇಖನಗಳನ್ನು ಕೊಡುಗೆ ನೀಡುವಲ್ಲಿ ಕನ್ನಡ ಮೇರುಸ್ಥಾನ ಹೊಂದಿದ್ದು, ಕನ್ನಡದ ಇತಿಹಾಸವನ್ನು ಅರಿತು ಗೌರವಿಸಬೇಕು ಎಂದು ಹೇಳಿದರು.
ವೈವಿಧ್ಯಮಯ ನಾಡು, ಸರ್ವ ಜನಾಂಗದ ಶಾಂತಿಯ ತೋಟವಾದ ಕನ್ನಡ ನಾಡಿನಲ್ಲಿ ಜಾತಿ-ಧರ್ಮದ ಎಲ್ಲೆ ಮೀರಿ ಜೀವಿಸಲಾಗುತ್ತಿದ್ದು, ಕನ್ನಡಿಗರು ಪರಿಷ್ಕೃತ ಗುಣ ಬೆಳೆಸಿಕೊಳ್ಳಬೇಕು ಎಂದರು.
ಕನ್ನಡವನ್ನು ಕಟ್ಟಿ ಬೆಳೆಸಲು ಶ್ರಮಿಸಿದ ಆದಿಕವಿ ಪಂಪ, ಕುಮಾರವ್ಯಾಸ, ಬಸವಣ್ಣ, ಅಲ್ಲಮಪ್ರಭು, ಪುರಂದರ ದಾಸ, ಕನಕದಾಸ, ಕುವೆಂಪು, ದ.ರಾ.ಬೇಂದ್ರೆ, ಸೇರಿದಂತೆ ಕನ್ನಡ ಭಾಷೆ-ಸಾಹಿತ್ಯ ಏಳಿಗೆಗೆ ಕೊಡುಗೆ ನೀಡಿದ ಅನೇಕ ಮಹನೀಯರನ್ನು ಸ್ಮರಿಸಬೇಕಿರುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಎಂದು ಹೇಳಿದರು.
ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ಪ್ರತಿ ವಿದ್ಯಾರ್ಥಿಯು ಸಂಸ್ಕಾರ ಹೊಂದಿರುತ್ತಾರೆ. ವಿವಿಯಲ್ಲಿ ಶೀಘ್ರವೇ ಕನ್ನಡ ಅಧ್ಯಯನ ವಿಭಾಗಕ್ಕೆ ಪೂರ್ಣಕಾಲಿಕ ಅಧ್ಯಾಪಕರುಗಳ ನೇಮಕಕ್ಕೆ ಮುತುವರ್ಜಿ ವಹಿಸಬೇಕು ಎಂದು ಒತ್ತಾಯಿಸಿದರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರು ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಉದಯಿಸಿರುವ ಈ ಭಾಗ ಪವಿತ್ರ ಭೂಮಿಯಾಗಿದ್ದು, ಕಲೆ, ಸಾಹಿತ್ಯ, ಸಮಾಜಕ್ಕೆ ಅಪಾರ ಕೊಡುಗೆ ನೀಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಯುವ ಪೀಳಿಗೆಯು ಹೆಚ್ಚಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ತಪ್ಪು ಪ್ರಯೋಗವಾದಲ್ಲಿ ಧ್ವನಿ ಎತ್ತುವ ಕೆಲಸ ನಿರ್ವಹಿಸಿ, ಕನ್ನಡ ಭಾಷೆ-ಸಾಹಿತ್ಯ ಬಲಿಷ್ಠಗೊಳಿಸುವ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಕನ್ನಡ ಭಾಷೆ, ಸಾಹಿತ್ಯ, ಜಾನಪದ ಸೊಗಡಿನ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಕನ್ನಡ ಕೀಳರಿಮೆ ಭಾವನೆ ತ್ಯಜಿಸಿ ಸಮ ಸಮಾಜದ ಚಿಂತನೆ ಬೆಳೆಸಿಕೊಂಡು, ಕನ್ನಡತನವನ್ನು ಉಳಿಸಿ-ಬೆಳೆಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಗಣ್ಯರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಗೀತಾ ತಂಡದ ಗೀತೆಗಳು ಕನ್ನಡಾಭಿಮಾನಿಗಳಿಗೆ ಇಂಪು ನೀಡಿತು.
*ಸಂಭ್ರಮ-ಸಡಗರದ ಮೆರವಣಿಗೆ:*
ಸುವರ್ಣ ಕರ್ನಾಟಕ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ-69 ಕಾರ್ಯಕ್ರಮ ಅಂಗವಾಗಿ ಏರ್ಪಡಿಸಿದ್ದ ಅದ್ದೂರಿ ಮೆರವಣಿಗೆಯು ತಾಯಿ ಭುವನೇಶ್ವರಿಯ ರಥದೊಂದಿಗೆ ಕುಂಭ ಹೊತ್ತ ಮಹಿಳೆಯ ಸಮ್ಮುಖದಲ್ಲಿ ವಿವಿಧ ಕಲಾತಂಡಗಳ ವಾದ್ಯಗಳ ಮೂಲಕ ರಾಜ್ಯದ 31 ಜಿಲ್ಲೆಗಳ ಸಂಸ್ಕೃತಿ, ವಿಶೇಷತೆ ಒಳಗೊಂಡ ಮಾಹಿತಿ ಕೈಪಿಡಿಯ ಚಿತ್ರಣ ಹಿಡಿದು, ಬುಲೆಟ್ ಬೈಕ್‌ಗಳ ಕಲರವದಿಂದ ವಿವಿಯ ಆವರಣದಲ್ಲಿ ಸಾಗಿಬಂದ ಮೆರವಣಿಗೆಯು ಸಂಭ್ರಮ-ಸಡಗರಕ್ಕೆ ಸಾಕ್ಷಿಯಾಯಿತು. ವಿವಿಧ ಕಲಾ ತಂಡಗಳಿAದ ಜಾನಪದ ಕಲೆಗಳ ಪ್ರದರ್ಶನಕ್ಕೆ ಮೆರವಣಿಗೆಯು ಮೆರಗು ತಂದಿತು.
ಈ ಸಂದರ್ಭದಲ್ಲಿ ವಿವಿಯ ಕುಲಪತಿಗಳಾದ ಪ್ರೊ.ಎಂ.ಮುನಿರಾಜು, ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಬಳ್ಳಾರಿಯ ಲೋಹಿಯಾ ಪ್ರಕಾಶನದ ಪ್ರಕಾಶಕ ಸಿ.ಚನ್ನಬಸವಣ್ಣ, ಕುಲಸಚಿವರಾದ ಎಸ್.ಎನ್ ರುದ್ರೇಶ್, ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓಲೇಕಾರ್, ಹಣಕಾಸು ಅಧಿಕಾರಿಗಳಾದ ನಾಗರಾಜ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ.ರಾಬರ್ಟ್ ಜೋಸ್, ಸಿಂಡಿಕೇಟ್ ಸದಸ್ಯರಾದ ಪೀರ್ ಬಾಷಾ, ಶಿವಕುಮಾರ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ವಿಭಾಗದ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-----------
ಬಳ್ಳಾರಿ ಮಹಾನಗರ ಪಾಲಿಕೆ: ವಿವಿಧ ಸೌಲಭ್ಯಗಳಿಗೆ ಪಾವತಿಸುವ ಶುಲ್ಕ ರಸೀದಿ, ಚಲನ್‌ಗಳ ನೈಜತೆ ದೃಢೀಕರಣಗೊಳಿಸಿಕೊಳ್ಳಲು ಸೂಚನೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪಾವತಿಸುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ಶುಲ್ಕ, ಎಸ್‌ಡಬ್ಲೂö್ಯಎಂ ಶುಲ್ಕ, ನಮೂನೆ-2 ಶುಲ್ಕ, ಹಕ್ಕು ಬದಲಾವಣೆ ಶುಲ್ಕ, ಉದ್ದಿಮೆ ಪರವಾನಿಗೆ/ನವೀಕರಣ ಶುಲ್ಕ, ಕಟ್ಟಡ ಪರವಾನಿಗೆ ಶುಲ್ಕ, ಜನನ-ಮರಣ ಪ್ರಮಾಣ ಪತ್ರ ಶುಲ್ಕ ಹಾಗೂ ಇತ್ಯಾದಿ ಶುಲ್ಕಗಳನ್ನು ಪಾವತಿಸುವಾಗ ವಲಯ ಅಥವಾ ಪಾಲಿಕೆಯ ನೌಕರರಿಂದ ಪಡೆದ ರಶೀದಿ, ಚಲನ್‌ಗಳ ನೈಜತೆಯನ್ನು ‘ಬಳ್ಳಾರಿ ಒನ್’ ಮತ್ತು ಮಹಾನಗರ ಪಾಲಿಕೆಯ ಲೆಕ್ಕ ಶಾಖೆಯಿಂದ ದೃಢೀಕರಣಗೊಳಿಸಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯು ತಿಳಿಸಿದೆ.
ಪಾಲಿಕೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿ ತೆರಿಗೆ ಹಾಗೂ ಇನ್ನೀತರೆ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿದಲ್ಲಿ ನಗರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.
-----------
ಡಿ.03 ರಂದು ವಿಶ್ವ ವಿಕಲಚೇತನರ ದಿನಾಚರಣೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಿಸಲಾಗುವುದು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಆದ ರಾಜೇಶ್.ಎನ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್., ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ.ಹೆಚ್.ಎA ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
---------
ಕಕರಸಾ ನಿಗಮ: ಡಿ.02 ರಂದು ‘ಫೋನ್ ಇನ್ ಕಾರ್ಯಕ್ರಮ’
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಕುಂದು ಕೊರತೆಗಳನ್ನು ಆಲಿಸಲು ಡಿ.02 ರಂದು ಮಧ್ಯಾಹ್ನ 3.30 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ “ಪೋನ್ ಇನ್ ಕಾರ್ಯಕ್ರಮ” ಏರ್ಪಡಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದುಕೊರತೆ, ಸಮಸ್ಯೆಗಳಿದ್ದಲ್ಲಿ ಮೊ.7760992152, 6366423885 ಗೆ ಕರೆ ಮಾಡಿ ತಿಳಿಸಬಹುದು.
ಬಳ್ಳಾರಿ ವಿಭಾಗದ ವ್ಯಾಪ್ತಿಯಲ್ಲಿ ಪ್ರತಿ ತಿಂಗಳ ಒಂದನೇ ಸೋಮವಾರದಂದು ಬಳ್ಳಾರಿ, ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳಿಗೆ ಸಂಬAಧಿಸಿದAತೆ ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು-ಕೊರತೆಗಳನ್ನು ಆಲಿಸಲು ‘ಪೋನ್ ಇನ್ ಕಾರ್ಯಕ್ರಮ’ ಆಯೋಜಿಸಲಾಗುತ್ತಿದೆ.
ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು ಕೊರತೆಗಳಿದ್ದಲ್ಲಿ ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಪ್ರಯಾಣಿಕರು “ಪೋನ್ ಇನ್ ಕಾರ್ಯಕ್ರಮ”ವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಭತ್ತ ಕಟಾವಿಗೆ ಪ್ರತಿ ಗಂಟೆಗೆ ರೂ.2,300 ಬಾಡಿಗೆ ನಿಗದಿ; ಹೆಚ್ಚಿನ ದರ ಪಡೆದರೆ ಕಠಿಣ ಕ್ರಮ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ ರೂ.2,300 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 91,225 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಈಗಾಗಲೇ ಹಲವು ಕಡೆ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಶೇ.95 ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಪ್ರಯುಕ್ತ ಜಿಲ್ಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ.
ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ರೂ.2,500 ರಿಂದ ರೂ.3,000 ಗಳವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ರೈತರಿಂದ ದೂರುಗಳು ಕೇಳಿ ಬಂದಿರುತ್ತವೆ.
ಈಗಾಗಲೇ ರೈತ ಮುಖಂಡರು ಮತ್ತು ಭತ್ತ ಕಟಾವು ಯಂತ್ರದ ಮಾಲೀಕರೊಂದಿಗೆ ಸಭೆ ನಡೆಸಿದ್ದು, ಅಂದಾಜು ರೂ.2300 ಗಳಿಗೆ ದರ ನಿಗದಿಪಡಿಸಿ ಕೊಡಲು ಕೋರಿರುತ್ತಾರೆ.
ಹಾಗಾಗಿ ಜಿಲ್ಲೆಯಲ್ಲಿರುವ ಭತ್ತ ಕಟಾವು ಯಂತ್ರದ ಮಾಲೀಕರು ರೂ.2,300 ದರಕ್ಕೆ ಮೀರದಂತೆ ಭತ್ತ ಕಟಾವು ಮಾಡಬೇಕು. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
---------
ಬಿ.ಡಿ.ಹಳ್ಳಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾ.ಸಂತೋಷ ಹೆಗ್ಡೆ | ಶೈಕ್ಷಣಿಕ ಪ್ರಗತಿಗೆ ಪೂರಕವಾದ ಅನ್ವೇಷಣೆ ಹೆಚ್ಚಾಗಲಿ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಶೈಕ್ಷಣಿಕ ಪ್ರಗತಿಗೆ ಪೂರಕವಾದ ಹೊಸ ಅನ್ವೇಷಣೆಗಳು ಹೆಚ್ಚಾಗಬೇಕು ಎಂದು ಕರ್ನಾಟಕ ನಿವೃತ್ತ ಲೋಕಾಯುಕ್ತರು ಹಾಗೂ ಸುಪ್ರೀಂ ಕೋರ್ಟ್ನ ವಿಶ್ರಾಂತ ನ್ಯಾಯಾಧೀಶರಾದ ಸಂತೋಷ ಹೆಗ್ಡೆ ಅವರು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಮೋಕಾದ ಭೈರದೇವನಹಳ್ಳಿಯ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಗುರುವಾರ ಭೇಟಿ ನೀಡಿದ ಅವರು, ಶಾಲೆಯಲ್ಲಿ ಚಿಕ್ಕಮಗಳೂರಿನ ಯುವಸ್ಪೂರ್ತಿ ಅಕಾಡೆಮಿ ಮತ್ತು ಬಿ.ಡಿ.ಹಳ್ಳಿ ಮೊರಾರ್ಜಿ ಮಾದರಿ ವಸತಿ ಶಾಲೆ ಇವರ ವತಿಯಿಂದ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರವಾಗಿದೆ. ಶಾಲೆಯಲ್ಲಿ ಉತ್ತಮ ವಿಜ್ಞಾನ ಪ್ರಯೋಗಾಯಲವಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳಿಂದ ವಿಜ್ಞಾನದ ಪ್ರಯೋಗಗಳನ್ನು ಮಂಡಿಸಿ ಚರ್ಚಿಸಿದರು. ಶಾಲೆಯ ವಾತಾವರಣ ಕಂಡು ಹರ್ಷ ವ್ಯಕ್ತಪಡಿಸಿದರು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕಲ್ಪನಾ ಅವರು, ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳಿಗೆ ಏಕೆ ಬೇಗ ಶಿಕ್ಷೆಯಾಗುತ್ತಿಲ್ಲ ಮತ್ತು ತಂತ್ರಜ್ಞಾನ ಮುಂದುವರೆದರೂ ರೈತರಿಗೆ ಮತ್ತು ಸಾಮಾನ್ಯ ಜನರಿಗೆ ಸರಿಯಾಗಿ ಸಮಯಕ್ಕೆ ಏಕೆ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ನಿವೃತ್ತ ನ್ಯಾಯಾಧೀಶರನ್ನು ಪ್ರಶ್ನಿಸಿದರು.
ಇನ್ನೋರ್ವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ವಿದ್ಯಾಶ್ರೀ ಅವರು, ಮೀಸಲಾತಿಯನ್ನು ಸಂವಿಧಾನದಲ್ಲಿ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ಸೀಮಿತವಾಗಿದೆಯೇ? ಎಂದು ಪ್ರಶ್ನಿಸಿದರು.
ಹೀಗೆ ಹಲವಾರು ವಿದ್ಯಾರ್ಥಿಗಳು ಸುಮಾರು ಪ್ರಶ್ನೆಗಳನ್ನು ಕೇಳಿದರು. ಬಳಿಕ ನಿವೃತ್ತ ನ್ಯಾಯಾಧೀಶರಾದ ಸಂತೋಷ ಹೆಗ್ಡೆ ಅವರು ಮಕ್ಕಳ ಪ್ರಶ್ನೆಗಳನ್ನು ಆಲಿಸುತ್ತಾ ಪ್ರಸ್ತುತ ದಿನಮಾನಗಳಲ್ಲಿರುವ ಪರಿಸ್ಥಿತಿಗಳ ಆಧಾರವಾಗಿಟ್ಟುಕೊಂಡು ಸವಿವರವಾಗಿ ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳಾದ ತರುಣ್ ಕುಮಾರ್.ಎಸ್.ಕೆ ಮತ್ತು ಸವಿತಾ.ಕೆ.ಎಂ ಅವರನ್ನು ಗಣ್ಯರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಬಿಡಿ ಹಳ್ಳಿ ಗ್ರಾಪಂ ಸದಸ್ಯ ಹೊನ್ನಾರೆಡ್ಡಿ, ಯುವಸ್ಪೂರ್ತಿ ಅಕಾಡೆಮಿಯ ಅಧ್ಯಕ್ಷ ಸುಂದರೇಶ್, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯ ಅಧಿಕಾರಿ, ಬಸವರಾಜ ಬನ್ನಿಹಟ್ಟಿ, ಬಿಡಿ ಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ವೀರಾರೆಡ್ಡಿ, ಬಿಡಿ ಹಳ್ಳಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರಾದ ಅನುಸೂಯ.ಕೆ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು, ಮತ್ತೀತರರು ಉಪಸ್ಥಿತರಿದ್ದರು.
---------
ಬಳ್ಳಾರಿ ಮಹಾನಗರ ಪಾಲಿಕೆ: ವಸತಿ ಸೌಲಭ್ಯಕ್ಕಾಗಿ ಆಯ್ಕೆಯಾದ ಫಲಾನುಭವಿಗಳು ಕೂಡಲೇ ಮನೆ ಕಟ್ಟಡ ಪೂರ್ಣಗೊಳಿಸಿಕೊಳ್ಳುವಂತೆ ಸೂಚನೆ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2010-11 ರಿಂದ 2018-19ನೇ ಸಾಲಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ನಗರ ವಸತಿ ಯೋಜನೆಗಳಡಿ ವಸತಿ ಸೌಲಭ್ಯಕ್ಕಾಗಿ ಆಯ್ಕೆಯಾಗಿರುವ ಫಲಾನುಭವಿಗಳು ಕೂಡಲೇ ತಮ್ಮ ಮನೆಯ ಕಟ್ಟಡವನ್ನು ಪೂರ್ಣಗೊಳಿಸಿಕೊಳ್ಳುವಂತೆ ಮಹಾನಗರ ಪಾಲಿಕೆಯು ಸೂಚಿಸಿದೆ.
ಈಗಾಗಲೇ ಹಲವಾರು ಬಾರಿ ನೋಟಿಸ್ ಜಾರಿ ಮಾಡಲಾಗಿದ್ದು, ಫಲಾನುಭವಿಗಳು ಮನೆಯ ಕಟ್ಟಡವನ್ನು ಡಿ.05ರೊಳಗಾಗಿ ಪೂರ್ಣಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಈಗಾಗಲೇ ಬಿಡುಗಡೆಯಾಗಿರುವ ಪೂರ್ಣ ಪ್ರಮಾಣದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಹಿಂದುರಿಗಿಸಲು ಬೆಂಗಳೂರು ರಾಜೀವ್‌ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯು ಫಲಾನುಭವಿಗಳಿಗೆ ತಿಳಿಸಿ ನೋಟಿಸ್ ಜಾರಿ ಮಾಡುವಂತೆ ತಿಳಿಸಿದೆ.
ಹಾಗಾಗಿ ವಿವಿಧ ನಗರ ವಸತಿ ಸೌಲಭ್ಯಕ್ಕಾಗಿ ಆಯ್ಕೆಯಾದ ಫಲಾನುಭವಿಗಳು ಮನೆಯ ಕಟ್ಟಡವನ್ನು ಹಂತ ಹಂತವಾಗಿ ನಿರ್ಮಾಣ ಮಾಡಿಕೊಂಡು ಮಹಾನಗರಪಾಲಿಕೆಯ ಆಶ್ರಯ ಶಾಖೆಯ ಗಮನಕ್ಕೆ ತರಬೇಕು.
ಇಲ್ಲವಾದಲ್ಲಿ, ರಾಜ್ಯ ಮತ್ತು ಕೇಂದ್ರ ಸಹಾಯಧನ ಬಿಡುಗಡೆ ಆಗುವುದಿಲ್ಲ. ಇದಕ್ಕೆ ಮಹಾನಗರ ಪಾಲಿಕೆ ಹೊಣೆಯಾಗಿರುವುದಿಲ್ಲ ಮತ್ತು ಮನೆ ರದ್ದು ಮಾಡಲು ಸರ್ಕಾರಕ್ಕೆ ನಿಯಮಾನುಸಾರ ಶಿಫಾರಸ್ಸು ಮಾಡಲಾಗುವುದು ಎಂದು ಬಳ್ಳಾರಿ ಮಹಾನಗರ ಪಾಲಿಕೆಯು ಪ್ರಕಟಣೆ ತಿಳಿಸಿದೆ.
---------
ಡಿ.02 ರಂದು ‘ಬಾಲ್ಯವಿವಾಹ, ಪೋಕ್ಸೋ, ಆರ್‌ಟಿಇ ಕಾಯ್ದೆ ಹಾಗೂ ಮಕ್ಕಳ ರಕ್ಷಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ‘ಬಾಲ್ಯವಿವಾಹ, ಪೋಕ್ಸೋ, ಆರ್.ಟಿ.ಐ ಕಾಯ್ದೆ ಹಾಗೂ ಮಕ್ಕಳ ರಕ್ಷಣೆ’ ಕುರಿತು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಡಿ.02 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಲಾಲಪ್ಪ.ಎ.ಕೆ., ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಾಣಾಧಿಕಾರಿ ರಾಮಕೃಷ್ಣ ನಾಯಕ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮÃ ಮೈದೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳ ಯೂನಿಸೇಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ.ಕೆ.ರಾಘವೇಂದ್ರ ಭಟ್ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------
ಡಿ.30 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಫೀಡರ್ 1 ರ ಹೆಚ್ಚುವರಿ ವಿದ್ಯುತ್ ಪರಿವರ್ತಕ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಡಿ.30 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ನಗರದ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿ ನಗರ, ಕೆ.ಇ.ಬಿ ಕ್ವಾಟರ್ಸ್, ಭಗತ್‌ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ನಗರದ ಉಮಾಶಂಕರ್ ಕಾಲೋನಿಯ 1ನೇ ಕ್ರಾಸ್‌ನ ಹುಲಿಗೆಮ್ಮ ಗುಡಿ ಹತ್ತಿರದ ನಿವಾಸಿ ಗಂಗಾಧರ ಎನ್ನುವ 34 ವರ್ಷದ ವ್ಯಕ್ತಿಯು ನ.22 ರಂದು ಕಾಣೆಯಾಗಿರುವ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ಅಗಲಮುಖ, ಗೋಧಿ ಮೈಬಣ್ಣ, ಕಪ್ಪು ತಲೆ ಕೂದಲು, ದುಂಡನೇಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಟುನೀಲಿ ಬಣ್ಣದ ತುಂಬುತೋಳಿನ ಅಂಗಿ, ಬ್ರೌನ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವ್ಯಕ್ತಿಯು ಕನ್ನಡ, ಹಿಂದಿ, ತೆಲುಗು, ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ 9480803045, 9480803091 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಗುರುವಾರ, ನವೆಂಬರ್ 28, 2024
ವಿವಿಧೆಡೆ ಸಹಾಯಕ ಸಸ್ಯ ಸಂರಕ್ಷಣಾಧಿಕಾರಿಗಳು ಭೇಟಿ; ಮೆಣಸಿನಕಾಯಿ ತಾಕುಗಳ ಪರಿಶೀಲನೆ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮೆಣಸಿನಕಾಯಿ ಬೆಳೆಯನ್ನು ಬಾಧಿಸಿದ್ದ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟ ಮತ್ತು ಬಳ್ಳಾರಿ, ಕುರುಗೋಡು, ಕಂಪ್ಲಿ ತಾಲ್ಲೂಕುಗಳಲ್ಲಿ ಬೂದಿ ರೋಗ, ಹಣ್ಣು ಕೋಳೆ ರೋಗ ಹಾಗೂ ಎಲೆ ಮುಟುರು ರೋಗ ಲಕ್ಷಣಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಪ್ರಾದೇಶಿಕ ಕೇಂದ್ರಿಯ ಸಮಗ್ರ ಸಸ್ಯಪೀಡೆ ನಿರ್ವಹಣಾ ಕೇಂದ್ರದ ಸಹಾಯಕ ಸಸ್ಯ ಸಂರಕ್ಷಣಾಧಿಕಾರಿಗಳಾದ ಡಾ.ಜಯಸಿಂಹ.ಜಿ.ಟಿ ಮತ್ತು ಡಾ.ವಿನಯ್ ಜೆ.ಯು ಅವರು ಬಳ್ಳಾರಿ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳ ರೈತರ ಮೆಣಸಿನಕಾಯಿ ಬೆಳೆಗಳ ತಾಕನ್ನು ಬುಧವಾರ ಪರಿಶೀಲಿಸಿದರು.
ಬಳಿಕ ಮಾತನಾಡಿದ ಡಾ.ಜಯಸಿಂಹ.ಜಿ.ಟಿ ಅವರು ಬಳ್ಳಾರಿ ತಾಲ್ಲೂಕಿನಲ್ಲಿ 16,038 ಹೆಕ್ಟರ್, ಕುರುಗೋಡು ತಾಲ್ಲೂಕಿನಲ್ಲಿ 15,847 ಹೆಕ್ಟರ್ ಮತ್ತು ಕಂಪ್ಲಿ ತಾಲ್ಲೂಕಿನಲ್ಲಿ 1,720 ಹೆಕ್ಟರ್ ಪ್ರದೇಶದಲ್ಲಿ ಮೆಣಸಿನಕಾಯಿ ಬಿತ್ತನೆಯಾಗಿದ್ದು, ಒಟ್ಟು 33,605 ಹೆಕ್ಟರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯಲಾಗಿದೆ. ರೈತರು ರೋಗ ಮತ್ತು ಕೀಟ ಹತೋಟಿಗೆ ತೋಟಗಾರಿಕೆ ಇಲಾಖೆಯಿಂದ ನೀಡಲಾಗುತ್ತಿರುವ ಸೂಕ್ತ ಕ್ರಮ ಅನುಸರಿಸಬೇಕು ಎಂದು ಅವರು ಹೇಳಿದರು.
ಹಾಲಿ ಥಿಪ್ಸ್ ನುಸಿಯ ಹಾವಳಿ ಶೇ.50 ಕ್ಕಿಂತ ಅಧಿಕ ಪ್ರದೇಶದಲ್ಲಿ ಕಂಡುಬAದಿದ್ದು, ಕೀಟದ ಹಾವಳಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು. ಎಲೆಗಳಲ್ಲಿ ಬೂದು ಬಣ್ಣದ ಮಚ್ಚೆ ರೋಗ ಕಂಡುಬAದಲ್ಲಿ 1 ಗ್ರಾಂ ಕಾರ್ಬಂಡೈಜಿಮ್ ಅಥವಾ 3 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಒಂದು ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೇಕು. ರೋಗ ಲಕ್ಷಣಗಳು ಕಡಿಮೆಯಾಗದ್ದಿದಲ್ಲಿ ಇದೆ ಸಿಂಪರಣೆಯನ್ನು 15 ದಿನಗಳ ಅಂತರದಲ್ಲಿ ಎರಡು ಬಾರಿ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಇಲ್ಲವೇ 1 ಗ್ರಾಂ ಂzoxಥಿsಣಡಿobiಟಿ 23% Sಖಿ ರೋಗ ನಾಶಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದು. ಊexಚಿಛಿoಟಿಚಿzoಟe 2% Sಅ ರೋಗ ನಾಶಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದು ಎಂದು ವಿವರಿಸಿದರು.
ಡಾ.ವಿನಯ್ ಜೆ.ಯು ಅವರು ಮಾತನಾಡಿ, ಹಣ್ಣುಗಳ ಮೇಲೆ ವೃತ್ತಾಕಾರದ ತಗ್ಗಾದ ಕಪ್ಪನೆಯ ಚುಕ್ಕೆಗಳು ಕಾಣಿಸಿಕೊಳ್ಳುತ್ತಿದ್ದು, ಒಳಗಿನ ಬಣ್ಣವು ಗುಲಾಬಿ ವರ್ಣದಿಂದ ಕೂಡಿರುತ್ತದೆ. ಆ ಮೇಲೆ ಕಪ್ಪಾಗುತ್ತವೆ. ಮೆಣಸಿನಕಾಯಿ ಬೆಳೆಗೆ ತುದಿ ಸಾಯುವ ರೋಗ, ಹಣ್ಣು ಕೋಳೆಯುವ ರೋಗ ಹಾಗೂ ಬೂದಿ ರೋಗಗಳು ಕಂಡು ಬಂದಾಗ 1 ಗ್ರಾಂ ಕಾರ್ಬಂಡೈಜಿಮ್ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ 15 ದಿನಗಳ ಅಂತರದಲ್ಲಿ ನಾಲ್ಕು ಸಾರಿ ಸಿಂಪಡಿಸಬೇಕು ಎಂದು ತಿಳಿಸಿದರು.
*ಎಲೆ ಮುಟುರು ರೋಗ:*
ಹಳದಿ ಮಿಶ್ರಿತ ಹಸಿರು ಭಾಗವನ್ನು ಎಲೆಯಲ್ಲಿ ಕಾಣಬಹುದು. ಎಲೆಗಳು ವಕ್ರಾಕಾರದ ಅಥವಾ ಮುಟುರು ಎಲೆಗಳನ್ನು ಕಾಣಬಹುದು. ಆ ಮೇಲೆ ಗಿಡಗಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಮುಟುರು ರೋಗದ ಬಾಧೆ ತಡೆಗಟ್ಟಲು ಶೇ.0.5 ರ ಬೆಳ್ಳೊಳ್ಳಿ, ಹಸಿಮೆಣಿಸಿಕಾಯಿ, ಸೀಮೆ ಎಣ್ಣೆ ಕಷಾಯವನ್ನು ಬೇವು ಜನ್ಯ ಕೀಟನಾಶಕದೊಂದಿಗೆ (2.5 ಮಿ.ಲೀ ಪ್ರತಿ ಲೀಟರ್ ನೀರಿಗೆ) ಬೆರಸಿ ಅವಶ್ಯವಿದ್ದಾಗ ಸಿಂಪರಣೆ ಮಾಡಬೇಕು.
ಕೀಟನಾಶಕಗಳದ 0.3 ಮಿ.ಲೀ. ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅಥವಾ 0.2 ಗ್ರಾಂ. ಥಯೋಮೆಥಾಕ್ಸಾಮ್ 25 ಡಬ್ಲೂö್ಯ.ಜಿ ಅಥವಾ 1.0 ಮಿ.ಲೀ ಫಿಪ್ರೋನಿಲ್ 5 ಎಸ್.ಸಿ ಅಥವಾ 1.0 ಗ್ರಾಂ. ಡಯಾಫೆನ್‌ಥಯೂರಾನ್ 50 ಡಬ್ಲೂö್ಯ. ಪಿ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಎಲ್ಲಾ ಅಥವಾ ಅಗತ್ಯವಿರುವ ನಿರ್ವಹಣಾ ಕ್ರಮಗಳನ್ನು ಪಾಲಿಸಿಕೊಂಡು ರೈತರು ಸಕಾಲದಲ್ಲಿ ಮೆಣಸಿನಕಾಯಿ ಬೆಳೆಗೆ ಔಷಧಿಗಳನ್ನು ಸೂಕ್ತ ರೀತಿಯಲ್ಲಿ ಸಿಂಪಡಿಸಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ಅವರು ಹೇಳಿದರು
ಈ ವೇಳೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ರೈತರು, ಮತ್ತೀತರರು ಇದ್ದರು.
------------
ಡಿ.02 ರಂದು ಜಿಲ್ಲಾ ಮಟ್ಟದ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರುಗಳಿಗೆ ಜಿಲ್ಲಾ ಮಟ್ಟದ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಡಿ.02 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜ್ (ಪ್ರೌಢ ಶಾಲಾ ವಿಭಾಗ) ನಲ್ಲಿ ಏರ್ಪಡಿಸಲಾಗಿದೆ.
*ಪ್ರಬಂಧ ಸ್ಪರ್ಧೆಯ ವಿಷಯಗಳು:*
ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ: ಪ್ರಾಥಮಿಕ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ, ಕಲಿಕಾ ಚೇತರಿಕೆ ಉಪಕ್ರಮದ ಸಾಧಕ ಬಾಧÀಕಗಳು, ಗುರುಕುಲ ಪದ್ದತಿ-ಒಂದು ಚಿಂತನೆ.
ಪ್ರೌಢಶಾಲಾ ಶಿಕ್ಷಕರಿಗಾಗಿ: ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸಮುದಾಯದ ಪಾತ್ರ, ರಾಷ್ಟಿçÃಯ ನೂತನ ಶಿಕ್ಷಣ ನೀತಿ, 21ನೇ ಶತಮಾನದ ಶೈಕ್ಷಣಿಕ ಸವಾಲುಗಳು.
*ಚಿತ್ರಕಲಾ ಸ್ಪರ್ಧೆಯ ವಿಷಯಗಳು:*
ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ: ಗ್ರಾಮೀಣ ಉದ್ಯೋಗಗಳು, ಸರ್ಕಾರದ ಪ್ರೋತ್ಸಾಹದಾಯಕ ಕಾರ್ಯಕ್ರಮಗಳು, ಸ್ವಚ್ಚ ಭಾರತ.
ಪ್ರೌಢಶಾಲಾ ಶಿಕ್ಷಕರಿಗಾಗಿ: ಕಲಿಕಾ ಸ್ನೇಹಿ ಪರಿಸರ, ಯುದ್ದದಿಂದ ಉಂಟಾಗುವ ದುಷ್ಪರಿಣಾಮಗಳು, ಸ್ವಚ್ಚ ಭಾರತ ಅಭಿಯಾನದಲ್ಲಿ ಶಿಕ್ಷಕರ ಪಾತ್ರ.
ಸ್ಪರ್ಧೆಗೆ ತಾಲೂಕು ಮಟ್ಟದಲ್ಲಿ ನಡೆದ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕರುಗಳು ತಪ್ಪದೇ ಭಾಗವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮಾದೇವಿ.ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಬಾಲ್ಯವಿವಾಹ ಜಾಗೃತಿ ಮೂಡಿಸಿ: ನ್ಯಾ.ರಾಜೇಶ್.ಎನ್ ಹೊಸಮನೆ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಬಾಲ್ಯವಿವಾಹ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಬಾಲ್ಯವಿವಾಹ ಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ - 1098, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಶ್ರೀ ಮೇಧಾ ಡಿಗ್ರಿ ಕಾಲೇಜು, ರೀಚ್ ಸಂಸ್ಥೆ ಇವರ ಸಹಯೋಗದಲ್ಲಿ ನಗರದ ಕೋಟೆ ಪ್ರದೇಶದ ಶ್ರೀಮೇಧ ಡಿಗ್ರಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯವಿವಾಹವು ಬಾಲ್ಯವಿವಾಹ ನಿಷೇಧ ಕಾಯ್ದೆ–2006 ಹಾಗೂ ಪೋಕ್ಸೋ ಕಾಯ್ದೆ ಅನ್ವಯ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಇದ್ದು, ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ವಿನೋದ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, “ಬಾಲ್ಯವಿವಾಹ ಮುಕ್ತ ಭಾರತ” ಅಭಿಯಾನದಡಿ ಶೂನ್ಯ ಸಂಖ್ಯೆಗೆ ತರಬೇಕಾದಲ್ಲಿ ಕೇವಲ ಅಧಿಕಾರಿಗಳು, ಸಂಘ ಸಂಸ್ಥೆಗಳು ಮಾತ್ರ ಪ್ರಯತ್ನ ಮಾಡಿದರೆ ಸಾಲದು ಸಮುದಾಯ ಭಾಗವಹಿಸುವಿಕೆ ಹಾಗೂ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ತಾವು ಕಾನೂನು ವೃತ್ತಿಜೀವನದಲ್ಲಿ ಇಂತಹ ಪ್ರಕರಣಗಳನ್ನು ನಿಭಾಯಿಸಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಅತೀ ಅವಶ್ಯಕವಿದೆ. ಬಾಲ್ಯವಿವಾಹ ನಿಲ್ಲಿಸುವುದು ಮತ್ತು ಮಕ್ಕಳ ಗ್ರಾಮ ಸಭೆಗಳನ್ನು ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಇದೇ ವೇಳೆ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಬಳಿಕ ಬಾಲ್ಯವಿವಾಹ ನಿಷೇಧಿಸಲಾಗಿದೆ-ಎಚ್ಚರ ಎನ್ನುವ ಪೋಸ್ಟರ್ ಅನಾವರಣಗೊಳಿಸಿದರು. ಈಶ್ವರ್ ಎಲ್.ಪಿ.ಓ ಅವರು ಬಾಲ್ಯವಿವಾಹದಿಂದ ಸಮಾಜದಲ್ಲಿ ಆಗುವ ದುಷ್ಪರಿಣಾಮಗಳು ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಶ್ರೀಮೇಧಾ ಡಿಗ್ರಿ ಕಾಲೇಜಿನ ಪ್ರಾಚಾರ್ಯರಾದ ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಕಲಾವತಿ ಸೇರಿದಂತೆ ಶ್ರೀ ಮೇಧಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-----------
ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ | ಉತ್ತರ ಕರ್ನಾಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ.ಖಾದರ್
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್‌ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕಾನೂನು ಸಚಿವರು, ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.
---------
ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನಲ್ಲಿ ಮುಂಗಾರು ಋತುವಿನ ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.
*ಬೆಲೆ: *
ಭತ್ತ ಕ್ವಿಂಟಾಲ್‌ಗೆ ರೂ.2300, ರಾಗಿ ಕ್ವಿಂಟಾಲ್‌ಗೆ ರೂ.4290, ಬಿಳಿ ಜೋಳ(ಮಾಲ್ದಂಡಿ) ಕ್ವಿಂಟಾಲ್‌ಗೆ ರೂ.3421, ಬಿಳಿಜೋಳ (ಹೈಬ್ರಿಡ್ ) ಕ್ವಿಂಟಾಲ್‌ಗೆ ರೂ.3371 ನಂತೆ ಖರೀದಿಸಲು ನಿಗದಿಯಾಗಿರುತ್ತದೆ.
*ಖರೀದಿ ಕೇಂದ್ರ:*
ಜಿಲ್ಲೆಯಲ್ಲಿ ಬಳ್ಳಾರಿಯ ಎಪಿಎಂಸಿ, ಮೋಕಾ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಕರೂರು ಮತ್ತು ಹಚ್ಚೋಳ್ಳಿ ಸೇರಿದಂತೆ ಒಟ್ಟು 08 ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲು ಸಂಬAಧಪಟ್ಟ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ. ಖರೀದಿ ಕೇಂದ್ರ ಮತ್ತು ಉಗ್ರಾಣ ಕೇಂದ್ರಗಳಿಗೆ ಗ್ರೇಡರ್‌ಗಳನ್ನು ನೇಮಿಸಿಕೊಳ್ಳಲಾಗಿದ್ದು, ತರಬೇತಿ ಕಾರ್ಯ ಪ್ರಾರಂಭವಾಗಿದೆ. ಗೋಣಿಚೀಲ, ಸಾಗಾಣಿಕೆ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ.
ನೋಂದಣಿಗೆ ಎನ್‌ಐಸಿ ತಂತ್ರಾAಶವನ್ನು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮುಂದಿನ ಮೂರು ದಿನಗಳೊಗಾಗಿ ಎಲ್ಲಾ ಖರೀದಿ ಕೇಂದ್ರಗಳನ್ನು ಚಾಲನೆಗೊಳಿಸಿ, ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಪದವಿ ವಿದ್ಯಾರ್ಥಿಗಳಿಗೆ ನೆರವಾದ ನರೇಗಾ ಯೋಜನೆ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಉಪ್ಪಾರ ಹೊಸಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಪದವಿ ಶಿಕ್ಷಣಕ್ಕೆ ಹಣ ಹೊಂದಿಸಲು ಪರಿತಪಿಸುತ್ತಿದ್ದ ಬಡಕುಟುಂಬದ ವಿದ್ಯಾರ್ಥಿಗಳಿಗೆ ನರೇಗಾ ಕೈಹಿಡಿದಿದೆ. ಶುಲ್ಕ ಕಟ್ಟಲು ಉದ್ಯೋಗಖಾತ್ರಿ ಯೋಜನೆ ನೆರವಾಗಿದ್ದು, ಶಿಕ್ಷಣ ಮುಂದುವರಿಸಲು ಭರವಸೆ ಮೂಡಿಸಿದೆ.
ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಳ್ಳಿ ಗ್ರಾಮದ ವಿದ್ಯಾರ್ಥಿ ಹುಸೇನಪ್ಪ ತನ್ನ ಪದವಿ ಶಿಕ್ಷಣಕ್ಕಾಗಿ ನೀಡಬೇಕಾದ ಶುಲ್ಕದ ಕುರಿತು ಮನೆಯವರಿಗೆ ತಿಳಿಸದೇ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಯಲ್ಲಿ ಕಳೆದ ಮೂರು ವರ್ಷಗಳಿಂದ ತನ್ನ ರಜಾದಿನಗಳಲ್ಲಿ ಕೆಲಸ ಮಾಡುತ್ತಿದ್ದು, ಪಾಲಕರ ಸಹಾಯ ಪಡೆಯದೇ ತಾನೇ ದುಡಿದು ತನ್ನ ದಾಖಲಾತಿ, ಪುಸ್ತಕ ಖರೀದಿ, ಬಸ್‌ಪಾಸ್ ವ್ಯವಸ್ಥೆಗೆ ನರೇಗಾ ಕೂಲಿ ಹಣವನ್ನು ಬಳಸಿಕೊಂಡಿದ್ದಾರೆ.
ಬಿಎ ತೃತೀಯ ವರ್ಷದಲ್ಲಿ ಓದುತ್ತಿರುವ ಹುಸೇನಪ್ಪ ಕೆಲಸಕ್ಕೂ ಸೈ, ಓದಿನಲ್ಲೂ ಸೈ ಎನಿಸಿಕೊಂಡಿದ್ದು, ಕೂಲಿಕಾರರ ಜೊತೆಗೂಡಿ ನರೇಗಾದಡಿ ಕೈಗೊಂಡ ನಾಲಾ ಸುಧಾರಣೆ ಕಾಮಗಾರಿ ಕೆಲಸಕ್ಕೆ ಹೋಗುವ ಮೂಲಕ ಇತರರಿಗೆ ಮಾದರಿಯಾಗಿದ್ದಾನೆ.
ಹುಸೇನಪ್ಪನ ಮನೆಯವರು ಮೂಲ ಕೃಷಿ ಕುಟುಂಬವಾಗಿದ್ದು, ಜಮೀನಲ್ಲಿ ಬೆಳೆದ ದವಸ ಧಾನ್ಯದಿಂದ ಜೀವನ ನಡೆಸುತ್ತಿದ್ದಾರೆ. ಮನೆಯಲ್ಲಿ ತಂದೆ, ತಾಯಿ, ತಮ್ಮ ಅಜ್ಜಿ ವಾಸಿಸುತ್ತಿದ್ದಾರೆ. ಸಹೋದರ ಪಿಯುಸಿ ಓದುತ್ತಿದ್ದು, ಆತನ ಶಿಕ್ಷಣಕ್ಕೂ ನರೇಗಾ ಕೂಲಿ ಹಣ ಉಪಯೋಗಿಸಲಾಗುತ್ತಿದೆ. ಇವರ ಮನೆಯಲ್ಲಿ ಮೂವರು ಕೆಲಸಕ್ಕೆ ಹೋಗುತ್ತಿದ್ದು, ಕುಟುಂಬ ನಿರ್ವಹಣೆಗೆ ಉದ್ಯೋಗ ಖಾತ್ರಿ ನೆರವಾಗಿದೆ.
ಉಪ್ಪಾರ ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾದಡಿ ಸುಮಾರು 50 ಕ್ಕೂ ಹೆಚ್ಚು ಪದವೀಧರ, ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ. ರಜಾ ದಿನಗಳಲ್ಲಿ ಯೋಜನೆಯಡಿ ಕೆಲಸ ಮಾಡಿ ತಂದೆ ತಾಯಿಗೆ ಹೊರೆಯಾಗದೇ ತಮ್ಮ ವಿದ್ಯಾಭ್ಯಾಸದ ಖರ್ಚನ್ನು ತಾವೇ ಸಂಪಾದಿಸುತ್ತಾರೆ.
*ಕೋಟ್:1*
ಕಳೆದ ವರ್ಷವಷ್ಟೇ ನನ್ನ ಪದವಿ ವಿದ್ಯಾಭ್ಯಾಸ ಮುಗಿಯಿತು. ರಜೆ ಸಮಯದಲ್ಲಿ ನರೇಗಾ ಕೆಲಸಕ್ಕೆ ಹೋಗುತ್ತಿದ್ದೆ. ಬಂದ ಹಣದಿಂದ ನನ್ನ ಪದವಿ ವಿದ್ಯಾಭ್ಯಾಸದ ವೇಳೆ ಕಾಲೇಜು ಫೀಸ್, ಪುಸ್ತಕ ಮತ್ತು ಬಸ್‌ಪಾಸ್‌ಗಾಗಿ ವ್ಯಯಿಸಿದ್ದೆ. ಮನೆಯಲ್ಲಿ ಹಣ ಕೇಳುತ್ತಿರಲಿಲ್ಲ.
- ಹುಸೇನಪ್ಪ, ಉಪ್ಪಾರ-ಹೊಸಳ್ಳಿ ಗ್ರಾಮ ನಿವಾಸಿ.
*ಕೋಟ್:2*
ಗ್ರಾಮ ಪಂಚಾಯತ್‌ಗಳು ಜನಸ್ನೇಹಿಯಾಗಿದ್ದು, ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಗೆ ವರದಾನವಾಗಿದೆ. ಸರ್ಕಾರದ ನಿರ್ದೇಶನದಂತೆ ಗ್ರಾಪಂನಿAದ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಕಾಲಕಾಲಕ್ಕೆ ವಾರ್ಡ್ಸಭೆ, ಗ್ರಾಮಸಭೆಗಳ ಮೂಲಕ ಜನರಿಗೆ ಮಾಹಿತಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ.
- ನಾಗಮಣಿ ಅತ್ತಳ್ಳಿ, ಗ್ರಾಪಂ ಪಿಡಿಒ, ಉಪ್ಪಾರ-ಹೊಸಳ್ಳಿ ಗ್ರಾಪಂ.
-----------
ಕ್ರೀಡೆಯಿAದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ದೈನಂದಿನ ಜೀವನದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆ ಎಂಬುದು ಕೇವಲ ಆಟದ ಸಂದರ್ಭವಲ್ಲದೇ, ತಂಡ ನಿರ್ವಹಣೆ, ಪರಿಶ್ರಮ ಹಾಗೂ ಶಿಸ್ತಿನ ಕ್ರಮವಾಗಿದೆ. ಪ್ರತಿನಿತ್ಯ 30 ರಿಂದ 40 ನಿಮಿಷಗಳ ಕಾಲ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯು ಉತ್ತಮ ಆರೋಗ್ಯ ರೂಪಿಸಿಕೊಳ್ಳುವ ಪ್ರಮುಖ ಆಯಾಮವಾಗಿದೆ ಎಂದರು.
ಪ್ರತಿವರ್ಷದAತೆ ಈ ವರ್ಷವೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಂತಸ ತಂದಿದೆ. ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಹಗಲು-ಇರುಳು ಎನ್ನದೇ ಕರ್ತವ್ಯನಿರತರಾಗಿರುತ್ತಾರೆ. ತಮ್ಮ ಕೆಲಸಗಳ ಒತ್ತಡವನ್ನು ನಿಗ್ರಹಿಸಿಕೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಪ್ರತಿಯೊಬ್ಬ ಕ್ರೀಡಾಪಟುವು ಕ್ರೀಡೆಯಲ್ಲಿ ತಮ್ಮ ಎಲ್ಲಾ ಮಾನಸಿಕ ಒತ್ತಡಗಳನ್ನು ಮರೆತು, ವಿವಿಧ ಆಟಗಳಲ್ಲಿ ಮಜ್ಞರಾಗಿ ಪಾಲ್ಗೊಳ್ಳುವ ಮೂಲಕ ಕ್ರೀಡೆಗಳಲ್ಲಿ ಉತ್ಸುಕತೆಯಿಂದ ಭಾಗವಹಿಸಬೇಕು ಎಂದು ಶುಭ ಹಾರೈಸಿದರು.
*ವಿವಿಧ ತಂಡ:*
ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024ರಲ್ಲಿ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ಪ್ರತ್ಯೇಕವಾಗಿ ಕ್ರಿಕೇಟ್, ವಾಲಿಬಾಲ್, ಕಬ್ಬಡ್ಡಿ, ಟೇಬಲ್ ಟೆನ್ನಿಸ್, ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಹಗ್ಗ ಜಗ್ಗಾಟ ಹಾಗೂ ಗುಂಡು ಹಾರಿಸುವ (ಫೈರಿಂಗ್) ಕ್ರೀಡೆಗಳನ್ನು ಆಯೋಜಿಸಿದ್ದು, ತುಂಗಾ ಡಿಎಆರ್ ತಂಡ, ಕೋಟೆ ಬಳ್ಳಾರಿ ನಗರ ತಂಡ, ದುರ್ಗಾ ಮಹಿಳಾ ತಂಡ, ವೇದಾವತಿ ಸಿರುಗುಪ್ಪ ತಂಡ, ಸ್ಕಂದಗಿರಿ ತೋರಣಗಲ್ಲು ತಂಡ, ಸಂಸ್ಕೃತಿ ಲಿಪಿಕ ಸಿಬ್ಬಂದಿ ವರ್ಗ ತಂಡ ಸೇರಿ ಆರು ತಂಡಗಳಿAದ 120ಕ್ಕೂ ಹೆಚ್ಚಿನ ಕ್ರೀಡಾಪಟುಳು ಭಾಗವಹಿಸಿದ್ದರು.
*ಆಕರ್ಷಕ ಪಥ ಸಂಚಲನ:*
ಜಿಲ್ಲಾ ಪೊಲೀಸ್ ವಾರ್ಷಿಕ-2024 ಕ್ರೀಡಾಕೂಟದಲ್ಲಿ ಆರು ತಂಡಗಳ ಬಾವುಟಗಳೊಂದಿಗೆ ಕ್ರೀಡಾಪಟುಗಳ ಪಥ ಸಂಚಲನವು ಆಕರ್ಷಕವಾಗಿತ್ತು ಹಾಗೂ ಕ್ರೀಡಾಜ್ಯೋತಿಯೊಂದಿಗೆ ಮೈದಾನದಲ್ಲಿ ಸಂಚರಿಸಿ, ವೇದಿಕೆಯ ಮುಂಭಾಗ ತಲುಪಿ ನಿರ್ಗಮನಗೊಂಡಿತು. ಇದೇ ವೇಳೆ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್.ಎನ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
----------
ಬಳ್ಳಾರಿ ಜಿಲ್ಲಾಮಟ್ಟದ ಯುವಜನೋತ್ಸವ: ಡಿ.02 ರಂದು ವಿವಿಧ ಸ್ಪರ್ಧೆಗಳು
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಹಮ್ಮಿಕೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಯುವಜನ ಸೇವೆ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗ್ರೇಸಿ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟç ಮಟ್ಟದ ಯುವಜನೋತ್ಸವವನ್ನು ಪ್ರತಿ ವರ್ಷ ಜನವರಿ ಮಾಹೆಯಲ್ಲಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಜೇತ ಸ್ಪರ್ಧಾಳುಗಳ ತಂಡವನ್ನು ಕಳುಹಿಸುವ ಸಲುವಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ಹಾಗಾಗಿ 2024-25ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಡಿ.02 ರಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಫುಟ್‌ಬಾಲ್ ಕ್ರೀಡಾಂಗಣದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗುತ್ತಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು 15 ರಿಂದ 29 ವರ್ಷ ವಯೋಮಾನದೊಳಗಿನ ಯುವಜನರನ್ನು ಮಾತ್ರ ಸಂಬAಧಿಸಿದ ದಾಖಲೆಗಳನ್ನು ಆಧರಿಸಿ ಪರಿಗಣಿಸಲಾಗುವುದು. ಕಾರ್ಯಕ್ರಮದಲ್ಲಿ ಮೇಲೆ ತಿಳಿಸಿದ ವಯೋಮಿತಿಯೊಳಗಿನ ಯುವಜನರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
*ಸ್ಪರ್ಧೆಗಳ ವಿವರ:*
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ವಿಷಯಾಧಾರಿತ ಸ್ಪರ್ಧೆಗಳು (ವರ್ಕಿಂಗ್ ಮಾಡೆಲ್) ವೈಯಕ್ತಿಕ ಮತ್ತು ಗುಂಪು, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ತಂಡ ಹಾಗೂ ವೈಯಕ್ತಿಕ ಜನಪದ ನೃತ್ಯ (1+4=5ಜನರು), ಜನಪದ ಗೀತೆ (1+4=5ಜನರು), ಗುಂಪು (10 ಜನರು), ಜೀವನ ಕೌಶಲ್ಯ ವಿಭಾಗದಲ್ಲಿ ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ಕವಿತೆ (1000 ಪದಗಳಿಗೆ ಮೀರದಂತೆ) ಬರೆಯುವ ಮತ್ತು ಕಥೆ ಬರೆಯುವ ಸ್ಪರ್ಧೆ ಇರುತ್ತದೆ.
ಚಿತ್ರಕಲೆ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆ ವೈಯಕ್ತಿಕ, ಆಯ್ದ ವಿಷಯಗಳ ಬಗ್ಗೆ 3 ನಿಮಿಷಗಳ (ರಾಷ್ಟç ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಕನ್ನಡ ಭಾಷೆಯನ್ನು ಸೀಮಿತಗೊಳಿಸಿ) ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 2 ರಂದು ಬೆಳಿಗ್ಗೆ 8.30 ಗಂಟೆಗೆ ಬಿಡಿಎಎ ಫುಟ್‌ಬಾಲ್ ಕ್ರೀಡಾಂಗಣದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದ್ದು, 15 ರಿಂದ 29 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಳ್ಳಬಹುದು.
ಭಾಗವಹಿಸುವ ಆಸಕ್ತರು ತಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪುಸ್ತಕದ ನಕಲು ಪ್ರತಿಯೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
*ವಿಶೇಷ ಸೂಚನೆ:*
ವಿಜೇತ ತಂಡ ಮತ್ತು ವೈಯಕ್ತಿಕ ಸ್ಪರ್ಧೆ ವಿಜೇತರಿಗೆ ನಿಯಮಾನುಸಾರ ನಗದು ಪುರಸ್ಕಾರ ನೀಡಲಾಗುವುದು (ಒಟ್ಟು 60 ಸಾವಿರ ನಗದು ಬಹುಮಾನ) ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ಹಾಗೂ ಪ್ರಯಾಣ ಭತ್ಯೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕ್ರೀಡಾ ಇಲಾಖೆಯ ರತಿಕಾಂತ್ ಮೊ.8971238689, ನೆಹರು ಯುವ ಕೇಂದ್ರದ ಮೊಂಟು ಪತಾರ್ ಮೊ.9049487027 ಮತ್ತು ರಾಘವೇಂದ್ರ ಮೊ.8762013096, ಹನುಮಯ್ಯ ಮೊ.9972333623, ವಿಭಾಗೀಯ ಸಂಚಾಲಕರು ಮಂಜುನಾಥ ಗೊಂಡಬಾಳ ಮೊ.9448300070 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ. ಗ್ರೇಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಐವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಕಾರ್ಮಿಕ ಇಲಾಖೆ ವತಿಯಿಂದ ಸಿರುಗುಪ್ಪ ಪಟ್ಟಣದ ಬಳ್ಳಾರಿ ರಸ್ತೆ, ಆದೋನಿ ರಸ್ತೆ, ಸಿಂಧನೂರು ರಸ್ತೆ, ದೇಶನೂರು ಹಾಗೂ ಪಟ್ಟಣದ ಪ್ರಮುಖ ರಸ್ತೆಗಳಲ್ಲಿನ ಮಂತಾದ ಸ್ಥಳಗಳಲ್ಲಿರುವ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಪಂಚರ್‌ಶಾಪ್ ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ ಐವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ PAN-India Rescue and Rehabilitation Compaign ಅಂಗವಾಗಿ ವಿವಿಧ ಇಲಾಖೆಗಳ ಜೊತೆಗೂಡಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿ ನೇಮಕವಾದ ನಿರೀಕ್ಷಕರ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಶಾಲೆಗಳಿಗೆ ಮರು ದಾಖಲಿಸಲಾಗಿದೆ.
ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಸಿರುಗುಪ್ಪ ಗ್ರೇಡ್-2 ತಹಶೀಲ್ದಾರರಾದ ಸತ್ಯಮ್ಮ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಗಜೇಂದ್ರ, ಕಾರ್ಮಿಕ ನಿರೀಕ್ಷಕರಾದ ರಮೇಶ್, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೋಹನ್ ಕಾಳಪ್ಪ, ಸಿರುಗುಪ್ಪ ನಗರಸಭೆಯ ಮೇಲ್ವಿಚಾರಕ ವೆಂಕಟೇಶ, ಸಿರುಗುಪ್ಪ ಗ್ರಾಮ ಲೆಕ್ಕಾಧಿಕಾರಿಗಳಾದ ಪರಮೇಶ್ವರಪ್ಪ, ಗಾಳಪ್ಪ, ಗೋಳಪ್ಪ ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಉಮೇಶ್, ಕಾರ್ಮಿಕ ಇಲಾಖೆ ಸಿಬ್ಬಂದಿ ಹನುಂತಪ್ಪ, ಚೈಲ್ಡ್ಲೈನ್ ಸಿಬ್ಬಂದಿ ಚಂದ್ರಕಳ ಹಾಜರಿದ್ದರು.
------------
ಬುಧವಾರ, ನವೆಂಬರ್ 27, 2024
ಮನೆ-ಮನ ಬೆಳಗುತ್ತಿರುವ ಗೃಹಜ್ಯೋತಿ; ನೋಂದಣಿಗೆ ಇನ್ನೂ ಅವಕಾಶ
ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡು ಒಂದು ವರ್ಷ ಪೂರೈಸಿದ್ದು, ಜಿಲ್ಲೆಯಲ್ಲಿ ಈವರೆಗೂ ಬರೋಬ್ಬರಿ 170.08 ಕೋಟಿ ರೂಪಾಯಿಗೂ ಅಧಿಕ ಉಚಿತ ವಿದ್ಯುತ್ ನೀಡಲಾಗಿದೆ. ಜಿಲ್ಲೆಯಲ್ಲಿ 2.80 ಲಕ್ಷ ಗ್ರಾಹಕ ಕುಟುಂಬಗಳು ಈ ಯೋಜನೆ ಲಾಭ ಪಡೆದುಕೊಂಡಿದ್ದಾರೆ. ಅರ್ಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಳ್ಳಲು ಇನ್ನೂ ಅವಕಾಶವಿದೆ.
ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಆರಂಭವಾಗಿ ಒಂದು ವರ್ಷ, ಮೂರು ತಿಂಗಳು ಕಳೆದಿವೆ. ಜಿಲ್ಲೆಯಲ್ಲಿ ಒಟ್ಟಾರೆ 2.80 ಲಕ್ಷ ಕುಟುಂಬಗಳು ನೋಂದಣಿಯಾಗಿ ಯೋಜನೆ ಲಾಭ ಪಡೆದುಕೊಂಡಿವೆ. ಎಲ್ಲಾ ಕುಟುಂಬಗಳಿಗೆ ಶೂನ್ಯ ಬಿಲ್ ಬಂದಿದೆ. ಉಳಿದ ಕುಟುಂಬಗಳ ಉಚಿತ ಅರ್ಹತೆಗಿಂತ ಹೆಚ್ಚು ವಿದ್ಯುತ್ ಬಳಸಿದ್ದಲ್ಲಿ ಹಣ ಪಾವತಿಸಿವೆ.
ರಾಜ್ಯ ಸರ್ಕಾರವು ಚುನಾವಣೆಯಲ್ಲಿ ನೀಡಿದ ಆಶ್ವಾಸನೆಯಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆಯನ್ನು 2023 ಆಗಸ್ಟ್ನಿಂದ ಆರಂಭಿಸಿತು. ಕಳೆದ ವರ್ಷ ಜೂನ್ 18 ರಿಂದ ನೋಂದಣಿ ಅವಕಾಶ ನೀಡಿತ್ತು.
*ಎಷ್ಟು ಯೂನಿಟ್ ಉಚಿತ?:*
ಗೃಹ ವಿದ್ಯುತ್ ಗ್ರಾಹಕರು ಕಳೆದ ಒಂದು ವರ್ಷದಲ್ಲಿ ಮಾಸಿಕ ಬಳಸಿದ ಸರಾಸರಿ ಯೂನಿಟ್‌ಗೆ ಶೇಕಡಾ 10 ರಷ್ಟು ಹೆಚ್ಚುವರಿ ಯೂನಿಟ್ ಉಚಿತವಾಗಿರುತ್ತದೆ. ಅದಕ್ಕಿಂತ ಹೆಚ್ಚು ಬಳಸುವ ವಿದ್ಯುತ್‌ಗೆ ದರ ಪಾವತಿಸಬೇಕಾಗುತ್ತದೆ.
*ಗೃಹಜ್ಯೋತಿ ಯೋಜನೆ ಅಂಕಿ ಅಂಶಗಳು:*
ಜಿಲ್ಲೆಯಲ್ಲಿ ಒಟ್ಟು 3,02892 ಅರ್ಹ ಗ್ರಾಹಕರಿದ್ದು, ಅದರಲ್ಲಿ ಈವರೆಗೆ (ಅ.31 ರ ವರೆಗೆ) 2,80,282 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 22,610 ಗ್ರಾಹಕರು ನೋಂದಾತಯಿಸಲು ಬಾಕಿಯಿದ್ದಾರೆ. ಸರ್ಕಾರವು 2023ರ ಆಗಸ್ಟ್ನಿಂದ 2024ರ ಅಕ್ಟೋಬರ್ ವರೆಗೆ ಒಟ್ಟು 170.08 ಕೋಟಿ ರೂ. ಪಾವತಿಸಿದೆ.
*ತಾಲ್ಲೂಕುವಾರು ನೋಂದಾಯಿಸಿಕೊAಡ ಗ್ರಾಹಕರ ಮಾಹಿತಿ:*
ಬಳ್ಳಾರಿ: 1,50,450
ಕಂಪ್ಲಿ: 14,783
ಕುರುಗೋಡು: 19,151
ಸಂಡೂರು: 49,043
ಸಿರುಗುಪ್ಪ: 2763
*ನೋಂದಾಯಿಸಲು ಬಾಕಿ ಇರುವ ಗ್ರಾಹಕರು:*
ಬಳ್ಳಾರಿ: 14,435
ಕಂಪ್ಲಿ: 312
ಕುರುಗೋಡು: 1,425
ಸಂಡೂರು: 3,675
ಸಿರುಗುಪ್ಪ: 2,763
*ಇಂದಿಗೂ ನೋಂದಣಿ ಅವಕಾಶ:*
ಇಂದಿಗೂ ಗೃಹಜ್ಯೋತಿ ಯೋಜನೆಯ ನೋಂದಣಿಗೆ ಅವಕಾಶವಿದೆ. ಮನೆ ಬದಲಾವಣೆ ಮಾಡಿಕೊಳ್ಳುವವರು, ಹೊಸ ಮನೆ ಕಟ್ಟುವವರು ಕೂಡ ನೋಂದಣಿ ಮಾಡಿಕೊಳ್ಳಬಹುದು. ಅವರಿಗೆ ನಿಯಮಗಳಂತೆ ನಿಗದಿತ ಯೂನಿಟ್‌ಗಳು ಮಾತ್ರ ಉಚಿತ ಇರುತ್ತವೆ.
ಈ ವರ್ಷದ ಆಗಸ್ಟ್ ತಿಂಗಳಿಗೆ ಗೃಹಜ್ಯೋತಿಗೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಇಂಧನ ಇಲಾಖೆಯು ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊAದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದು ಎಂದು ತಿಳಿಸಿದೆ.
*ಡಿ-ಲಿಂಕ್ ಮಾಡುವುದು ಹೇಗೆ?:*
ಗ್ರಾಹಕರು ಆನ್‌ಲೈನ್ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.
ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್ ಸಂಖ್ಯೆ ಜೊತೆ ಲಿಂಕ್ ಆಗಿರುವ ಆರ್‌ಆರ್ ನಂಬರ್‌ನ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಪಡೆಯಲು ಯಾವುದೇ ಆಧಾರ್ ಜೊತೆ ಲಿಂಕ್ ಆಗಿರದ ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬಹುದು. ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
*ಕೋಟ್-1:*
ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, 500 ರಿಂದ 600 ರೂ. ವರೆಗೆ ವಿದ್ಯುತ್ ಬಿಲ್ ಪಾವತಿ ಮಾಡುತ್ತಿದ್ದೆವು. ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾದ ಬಳಿಕ ಕಳೆದ ಒಂದು ವರ್ಷದಿಂದ ಶೂನ್ಯ ಮೊತ್ತದ ವಿದ್ಯುತ್ ಬಿಲ್ ಪಾವತಿ ಮಾಡುತ್ತಿದ್ದೇವೆ.
- ನುಂಕೇಶ್.ಹೆಚ್, ಸಂಡೂರು ಪಟ್ಟಣ.
*ಕೋಟ್-2:*
ಗೃಹ ಜ್ಯೋತಿ ನೋಂದಣಿಗೂ ಮುನ್ನ 1000 ರಿಂದ 1200 ರೂ. ಅಸುಪಾಸು ವಿದ್ಯುತ್ ಬಿಲ್ ಪಾವತಿಸುತ್ತಿದ್ದೆ. ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಡಿ ಈಗ ಸೊನ್ನೆ ಮೊತ್ತದ ಬಿಲ್ ಬರುತ್ತಿದೆ. ಒಮ್ಮೊಮ್ಮೆ 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದಲ್ಲಿ ಕೇವಲ 150 ರಿಂದ 200 ರೂ. ಬಿಲ್ ಬರುತ್ತಿದೆ. ಮುಂಚೆ ಬರುತ್ತಿದ್ದ ಬಿಲ್‌ಗಿಂತ ಕಡಿಮೆ ಹಣ ಪಾವತಿಸುತ್ತಿದ್ದು, ಉಳಿತಾಯದ ಹಣವನ್ನು ದಿನಸಿ-ಸಾಮಾನುಗಳಿಗೆ ವ್ಯಯಿಸುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ತುಂಬಾ ಅನುಕೂಲವಾಗುತ್ತಿದೆ.
- ಲಕ್ಷಣ.ಎಸ್ ಭಂಡಾರಿ, ಅಂಬೇಡ್ಕರ್ ನಗರ ನಿವಾಸಿ, ಬಳ್ಳಾರಿ.
-----------
ಬಳ್ಳಾರಿ: ಜಿಲ್ಲಾ ನ್ಯಾಯಾಲಯದಲ್ಲಿ ‘ಸಂವಿಧಾನ ದಿನ’ ಆಚರಣೆ ಸಂವಿಧಾನದಿAದ ಸದೃಢ ಪ್ರಜಾಪ್ರಭುತ್ವ: ನ್ಯಾಯಾಧೀಶೆ ಕೆ.ಜಿ.ಶಾಂತಿ
ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ಸಂವಿಧಾನವು ದೇಶದ ಬೆನ್ನೆಲುಬು ಇದ್ದಂತೆ. ವಿಶ್ವದ ಎಲ್ಲಾ ಸಂವಿಧಾನಗಳಿಗಿAತಲೂ ಶ್ರೇಷ್ಠ, ಲಿಖಿತ ಹಾಗೂ ಅತ್ಯಂತ ಬಲಿಷ್ಠ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು, ಸಂವಿಧಾನದಿAದ ಸದೃಢ ಪ್ರಜಾಪ್ರಭುತ್ವ ಹೊಂದಲು ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದ ವಿಸಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಸಂವಿಧಾನ ಪ್ರಸ್ತಾವನೆ ಬೋಧಿಸಿ ಅವರು ಮಾತನಾಡಿದರು.
ಭಾರತ ಸಂವಿಧಾನವು 1948ರ ನವೆಂಬರ್ 26 ರಂದು ಅಂಗೀಕಾರಗೊAಡು, 1950ರ ಜನವರಿ 26ರಂದು ಅನುಷ್ಠಾನಗೊಳಿಸಲಾಯಿತು. ಸ್ವಾತಂತ್ರೊö್ಯÃತ್ಸವದ ಬಳಿಕ ಸಂವಿಧಾನ ರಚಿಸಲು 389 ಸದಸ್ಯರನ್ನು ಒಳಗೊಂಡ ಕರಡು ಸಮಿತಿ ರಚನೆ ಮಾಡಿ, ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 2 ವರ್ಷ 11 ತಿಂಗಳು 17 ದಿನಗಳ ಕಾಲ ಕೈಬರಹದಿಂದ ಸುದೀರ್ಘ ಸಂವಿಧಾನ ತಯಾರಾಗುತ್ತದೆ. ಅದರಲ್ಲಿ 1,17,369 ಪದಗಳು ಹೊಂದಿದೆ ಎಂದು ಅವರು ತಿಳಿಸಿದರು.
ಮೊದಲು ಸಂವಿಧಾನ ಜಾರಿಗೊಂಡಾಗ 395 ವಿಧಿಗಳು, 22 ಭಾಗ, 12 ಅನುಸೂಚಿಗಳನ್ನು ಹೊಂದಿದ್ದು, ಮೂಲ ಸಂವಿಧಾನ ಪ್ರತಿಗಳನ್ನು ಸಂಸತ್‌ನ ಗ್ರಂಥಾಲಯದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. ಪ್ರಸ್ತುತ 470 ವಿಧಿಗಳು, 25 ಭಾಗ, 12 ಅನುಸೂಚಿಗಳನ್ನು ಹೊಂದಿರುತ್ತದೆ ಎಂದು ಮಾಹಿತಿ ನೀಡಿದರು.
ಆಶೋತ್ತರ ಪೂರಕವಾದ ಸಂವಿಧಾನ ನೀಡಲು ಪ್ರಮುಖ ಪಾತ್ರ ವಹಿಸಿದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅವರ ಸಮಿತಿಯನ್ನು ಈ ದಿನ ಸ್ಮರಿಸಬೇಕಿದೆ. ಸಂವಿಧಾನದ ಹಕ್ಕು ಮತ್ತು ಜವಾಬ್ದಾರಿಗಳನ್ನು ಅರಿತುಕೊಂಡು ಉತ್ತಮ ಜೀವನ ನಡೆಸಬೇಕು ಎಂದು ತಿಳಿಸಿದರು.
ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ದೇಶವಾಗಿದ್ದು, ಜಾತಿ, ಧರ್ಮ, ಎಲ್ಲೆ ಮೀರಿ ನಾವೆಲ್ಲರೂ ಒಂದು ಎನ್ನುವ ಸಂಕಲ್ಪ ತೊಡಬೇಕಲ್ಲದೆ ಪ್ರತಿಯೊಬ್ಬ ನಾಗರೀಕರು ರಾಷ್ಟçದ ಏಕತೆ ಮತ್ತು ಅಖಂಡತೆ ಉಳಿಸಿಕೊಳ್ಳಲು ಶ್ರಮಿಸಬೇಕಿದೆ ಎಂದು ಹೇಳಿದರು.
ಜಿಲ್ಲಾ ನ್ಯಾಯಾಲದ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು ಅವರು ಮಾತನಾಡಿ, ಸಂವಿಧಾನವು ಹಲವಾರು ಮಹನೀಯರ ಶ್ರಮ ಹಾಗೂ ದಶಕಗಳ ನಿರಂತರ ಹೋರಾಟದ ಪ್ರತಿಫಲದಿಂದ ದೊರೆತ್ತಿದ್ದು, ಇತರೆ ದೇಶಗಳ ಸಂವಿಧಾನಗಳ ಅವಲೋಕಿಸಿ ಬಹುದೊಡ್ಡದಾದ ಸಂವಿಧಾನ ರಚಿಸಲ್ಪಟ್ಟಿದೆ ಎಂದು ಹೇಳಿದರು.
ಕರ್ನಾಟಕ ಮೂಲದ ಬೆಣಗಲ್ ನರಸಿಂಹ ರಾವ್ ಅವರು ಕರಡು ಸಮಿತಿಯಿಂದ ಸಂವಿಧಾನ ರಚನೆಯಾಗುವ ಸಂದರ್ಭದಲ್ಲಿ ಕಾನೂನು ಸಲಹೆಗಾರರಾಗಿದ್ದು, ಹೆಮ್ಮೆಯ ವಿಚಾರ. ಸಂವಿಧಾನ ಉಳಿಸಿ-ಬೆಳೆಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ, ಎಫ್‌ಟಿಎಸ್‌ಸಿ-1 ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ರಾಘವೇಂದ್ರ ಗೌಡ, ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ಪ್ರಮೋದ್, ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಾಸುದವ ಗುಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಸೇರಿದಂತೆ ಇತರೆ ನ್ಯಾಯಾಧೀಶರು, ಅಧಿಕಾರಿಗಳು-ಸಿಬ್ಬಂದಿಗಳು, ಮತ್ತೀತರರು ಉಪಸ್ಥಿತರಿದ್ದರು.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)










































