ಸೋಮವಾರ, ನವೆಂಬರ್ 4, 2024
ನ.08 ರಂದು ಸಾರಿಗೆ ಅದಾಲತ್
ಬಳ್ಳಾರಿ,ನ.04(ಕರ್ನಾಟಕ ವಾರ್ತೆ):
ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ನ.08 ರಂದು ಸಂಜೆ 04.30 ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂದುಕೊರತೆಗಳಿರುವ ಸಾರ್ವಜನಿಕರು ಅರ್ಜಿ ಸಲ್ಲಿಸುವ ಮೂಲಕ ಕುಂದುಕೊರತೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಸಾರ್ವಜನಿಕರು ಸಾರಿಗೆ ಅದಾಲತ್‌ನ ಉಪಯೋಗ ಪಡೆದುಕೊಳ್ಳುವ ಮೂಲಕ ಬಾಕಿ ಇರುವ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ