ಸೋಮವಾರ, ನವೆಂಬರ್ 25, 2024
ಡಿ.15 ರಂದು ಕೃಷಿಕ ಸಮಾಜದ ಚುನಾವಣೆ
ಬಳ್ಳಾರಿ,ನ.25(ಕರ್ನಾಟಕ ವಾರ್ತೆ):
ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕು ಕೃಷಿಕ ಸಮಾಜದ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿಗೆ ಚುನಾವಣೆ ಘೋಷಣೆಯಾಗಿದ್ದು, ಡಿ.15ರಂದು ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ದಯಾನಂದ.ಎA ಅವರು ತಿಳಿಸಿದ್ದಾರೆ.
ನ.30 ರಿಂದ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬಳ್ಳಾರಿ ಮತ್ತು ಕುರುಗೋಡು ರೈತ ಸಂಪರ್ಕ ಕೇಂದ್ರಗಳಲ್ಲಿ ನಾಮಪತ್ರ ವಿತರಣೆ ಮಾಡಲಾಗುವುದು.
ಪ್ರತಿ ತಾಲ್ಲೂಕು ಕಾರ್ಯಕಾರಿ ಸಮಿತಿ 15 ಸದಸ್ಯ ಸ್ಥಾನಗಳಿದ್ದು, ಕೃಷಿಕ ಸಮಾಜದ ಅಜೀವ ಸದಸ್ಯರು ತಮ್ಮ ಉಮೇದುವಾರಿಕೆಯ ನಾಮಪತ್ರವನ್ನು 7 ದಿನಗಳ ಮುಂಚಿತವಾಗಿ ರೂ.250 ಠೇವಣೆಯ ಮೂಲ ರಶೀದಿ ಹಾಗೂ ಪಹಣಿಯೊಂದಿಗೆ ಚುನಾವಣಾಧಿಕಾರಿಗೆ ಅರ್ಜಿ ಮೂಲಕ ನಾಮಪತ್ರ ಸಲ್ಲಿಸಬೇಕು.
ನಾಮಪತ್ರ ಸಲ್ಲಿಸಲು ಡಿಸೆಂಬರ್-06 ರ ಬೆಳಿಗ್ಗೆ 11 ರಿಂದ ಸಂಜೆ 3 ರವರೆಗೆ ಸಮಯ ನಿಗದಿಪಡಿಸಲಾಗಿದೆ. ಡಿಸೆಂಬರ್-15 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಮತ ಏಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ದಯಾನಂದ.ಎA ಹಾಗೂ ಅವರ ಮೊ.8277934294 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ