ಶುಕ್ರವಾರ, ನವೆಂಬರ್ 15, 2024

ನ.16 ರಂದು ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜನಜಾಗೃತಿ ಜಾಥ ಹಾಗೂ ಬೀದಿ ನಾಟಕದ ಮುಖಾಂತರ ಜಾಗೃತಿ ಕಾರ್ಯಕ್ರಮ

ಬಳ್ಳಾರಿ,ನ.15(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಇವರ ಸಹಯೋಗದೊಂದಿಗೆ ನ.16 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜನಜಾಗೃತಿ ಜಾಥ ಹಾಗೂ ಬೀದಿ ನಾಟಕದ ಮುಖಾಂತರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಉದ್ಘಾಟನೆ ಮಾಡುವರು. ಜಿಲ್ಲಾಧಿಕಾರಿ ಹಾಗೂ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮÃ ಮೈದೂರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ, ಹಿರಿಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ ಚಂದ್ರಕಾAತ ನಂದರೆಡ್ಡಿ, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಕಾರ್ಮಿಕ ನಿರೀಕ್ಷಕರಾದ ರಮೇಶ್, ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ