ಮಂಗಳವಾರ, ನವೆಂಬರ್ 19, 2024
ನ.21 ರಂದು 122ನೇ ನೀರಾವರಿ ಸಲಹಾ ಸಮಿತಿ ಸಭೆ
ಬಳ್ಳಾರಿ,ನ.19(ಕರ್ನಾಟಕ ವಾರ್ತೆ):
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 122ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನ.21 ರಂದು ಮಧ್ಯಾಹ್ನ 03.30 ಗಂಟೆಗೆ ಬೆಂಗಳೂರಿನ ವಿಕಾಸಸೌಧದ 4ನೇ ಮಹಡಿಯ ಕೊಠಡಿ ಸಂಖ್ಯೆ 419ರ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲಾಗುತ್ತದೆ.
ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ಅಧ್ಯಕ್ಷತೆ ವಹಿಸುವರು ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ