ಬುಧವಾರ, ನವೆಂಬರ್ 20, 2024

ನ.21 ರಂದು ಗಣಿತ ಕಲಿಕಾ ಆಂದೋಲನ-ಜಿಲ್ಲಾ ಮಟ್ಟದ ವಿಚಾರ ಸಂಕಿರಣ

ಬಳ್ಳಾರಿ,ನ.20(ಕರ್ನಾಟಕ ವಾರ್ತೆ): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಅಕ್ಷರ ಫೌಂಡೇಷನ್ ಇವರ ಸಂಯುಕ್ತಾಶ್ರಯದಲ್ಲಿ ನ.21 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಪ್ರದೇಶದಲ್ಲಿನ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಗಣಿತ ಕಲಿಕಾ ಆಂದೋಲನ-ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಉದ್ಘಾಟಿಸುವರು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧ್ಯಕ್ಷತೆ ವಹಿಸುವರು. ಅಕ್ಷರ ಫೌಂಡೇಷನ್‌ನ ಕಾರ್ಯಾಚರಣೆ ಮತ್ತು ಸಮುದಾಯ ಅಭಿವೃದ್ಧಿಯ ಮುಖ್ಯಸ್ಥರಾದ ಶಂಕರ್ ನಾರಾಯಣ ಜೆ.ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಶಾಲಾ ಶಿಕ್ಷಣ ಇಲಾಖೆಯ ಆಡಳಿತದ ಉಪನಿರ್ದೇಶಕರಾದ ಉಮಾದೇವಿ, ಶಾಲಾ ಶಿಕ್ಷಣ ಇಲಾಖೆಯ ಅಭಿವೃದ್ಧಿಯ ಉಪನಿರ್ದೇಶಕರಾದ ಓ.ಆರ್ ಪ್ರಕಾಶ, ಬಳ್ಳಾರಿಯ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಎಂ.ಬಸಪ್ಪ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ, ಬಳ್ಳಾರಿ ತಾಲ್ಲೂಕಿನ ರ‍್ರಗುಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಚಾರ ಗೋಷ್ಠಿ ನಡೆಸುವರು. ಕಾರ್ಯಕ್ರಮದಲ್ಲಿ ಉತ್ತಮ ಫಲಿತಾಂಶ ಪಡೆದ ಜಿಲ್ಲೆಯಲ್ಲಿನ 25 ಶಾಲೆಗಳು ಮತ್ತು 25 ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸಿ ಅಭಿನಂದಿಸಲಾಗುವುದು ಮತ್ತು ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳ ಬಳ್ಳಾರಿ ಜಿಲ್ಲೆ ವರದಿ ಮತ್ತು ಗಣಿತ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ