ಗುರುವಾರ, ನವೆಂಬರ್ 21, 2024

ನ.23, 24 ರಂದು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ; ವಿಶೇಷ ಅಭಿಯಾನ ಕಾರ್ಯಕ್ರಮ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ಚುನಾವಣೆ ಆಯೋಗ ಬೆಂಗಳೂರು ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ 2025ರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು, ನ.23 ಮತ್ತು 24 ರಂದು ಬಳ್ಳಾರಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಆಯಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಹಾಜರಿದ್ದು, ನಮೂನೆ 6, 6ಎ, 7 ಮತ್ತು 8 ಅರ್ಜಿಗಳನ್ನು ಪಡೆಯಲಾಗುತ್ತದೆ ಎಂದು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಾಣಾಧಿಕಾರಿ ಹಾಗೂ ತಹಶೀಲ್ದಾರರಾದ ಗುರುರಾಜ ಅವರು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ