ಶುಕ್ರವಾರ, ನವೆಂಬರ್ 22, 2024

ಸಿರುಗುಪ್ಪ: ನ.23 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.22(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ನ.23 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಹಚ್ಚೋಳ್ಳಿ, ಕುಡುದರಹಾಳು, ರಾವಿಹಾಳು, ಬಿ.ಎಂ.ಸೂಗೂರು, ಬೀರಳ್ಳಿ, ದೇಶನೂರು, ಕೆಂಚನಗುಡ್ಡ, ಬಾಗೇವಾಡಿ, ಬಗ್ಗೂರು, ರಾರಾವಿ, ಕುರುವಳ್ಳಿ, ಕೆ.ಸೂಗೂರು, ಕೆ.ಬೆಳಗಳ್ ಮತ್ತು ಅರಳಿಗನೂರು ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾಗೂ ಸಿರುಗುಪ್ಪ ನಗರದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ. ನಿರ್ವಹಣೆ ಕಾರ್ಯ ಮುಗಿಯುವವರೆಗೂ ಅಥವಾ ಮುಗಿದ ತಕ್ಷಣ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಚಾಲನೆ ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಮಾರ್ಗಗಳ ಹತ್ತಿರ ಯಾವುದೇ ತರಹದ ಕೆಲಸಗಳನ್ನು ಮಾಡಬಾರದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ