ಗುರುವಾರ, ನವೆಂಬರ್ 21, 2024

ಸಾರ್ವಜನಿಕ ಗ್ರಂಥಾಲಯ ಇಲಾಖೆ; ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ವತಿಯಿಂದ ಪುಸ್ತಕ ಆಯ್ಕೆಗಾಗಿ 2024ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಗೊಂಡ ಯಾವುದೇ ಭಾಷೆಯ ಪುಸ್ತಕಗಳ ಆಯ್ಕೆಗಾಗಿ ಅರ್ಹ ಆಸಕ್ತ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿಯ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ತಿಳಿಸಿದ್ದಾರೆ. ಆಸಕ್ತರು ಪುಸ್ತಕಗಳನ್ನು ಬೆಂಗಳೂರಿನ ಕಬ್ಬನ್ ಉದ್ಯಾನವನ ಬಳಿಯ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ 2025 ರ ಜನವರಿ 1, ಸಂಜೆ 5.30 ರೊಳಗಾಗಿ ನೋಂದಣಿ ಮಾಡಿಸಬೇಕು. ಆ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೊರ ರಾಜ್ಯಗಳಲ್ಲಿ 2024 ರಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗುವ ಯಾವುದೇ ಭಾಷೆಯ ಪುಸ್ತಕಗಳನ್ನು ಆಹ್ವಾನಿಸಿದೆ. ಆಯಾ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಕೇಂದ್ರ, ಆಯಾ ರಾಜ್ಯ ಸರ್ಕಾರಗಳಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ನೋಂದಣಿ ಪ್ರಮಾಣ ಪತ್ರದ ನಕಲು ಪತ್ರದ ಪ್ರತಿಯೊಂದಿಗೆ ಮತ್ತು ಆ ಪುಸ್ತಕದ ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಒಂದು ಪ್ರತಿಯನ್ನು 2025ರ ಜನವರಿ 2, ಸಂಜೆ 5.30 ಒಳಗಾಗಿ ಸಲ್ಲಿಸಬೇಕು. ತಡವಾಗಿ ಸಲ್ಲಿಸುವ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಮರು ಮುದ್ರಣಗೊಳ್ಳುವ ಪುಸ್ತಕಗಳ ಕುರಿತು, ನೋಂದಣಿ ಮತ್ತು ನಿಬಂಧನೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖಾ ಅಂತರ್ಜಾಲ ತಿತಿತಿ.ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್ ಅಥವಾ ದೂ:080-22864990, 22867358 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ