ಗುರುವಾರ, ನವೆಂಬರ್ 21, 2024

ವಿವಿಧೆಡೆ ದಾಳಿ; ನಾಲ್ವರು ಬಾಲ ಕಾರ್ಮಿಕರ ರಕ್ಷಣೆ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ಕಾರ್ಮಿಕ ಇಲಾಖೆ ವತಿಯಿಂದ ಬಳ್ಳಾರಿ ನಗರದ ಸುಧಾಕ್ರಾಸ್, ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಐಸ್‌ಕ್ರೀಮ್ ಪಾರ್ಲರ್, ಮಟನ್ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಬುಧವಾರ ಆಕಸ್ಮಿಕ ದಾಳಿ ನಡೆಸಿ ನಾಲ್ವರು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಹಾಗೂ ಪಾನ್-ಇಂಡಿಯಾ ರೆಸ್ಕೂö್ಯ ಅಂಡ್ ರಿಹಾಬಿಲೇಷನ್ ಕ್ಯಾಂಪೇನ್ ಅಂಗವಾಗಿ ಟಾಸ್ಕ್ಫೋರ್ಸ್ ಸಮಿತಿ ರಚಿಸಿ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರ ರಕ್ಷಣೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಬಳ್ಳಾರಿ ತಾಲ್ಲೂಕು ಗ್ರೇಡ್-2 ತಹಶೀಲ್ದಾರ ಮಂಜುನಾಥ ಅವರ ನೇತೃತ್ವದ ತಾಲ್ಲೂಕು ಟಾಸ್ಕ್ಫೋರ್ಸ್ ಸಮಿತಿಯ ಅಧಿಕಾರಿಗಳ ತಂಡದೊAದಿಗೆ ಸಭೆ ನಡೆಸಿ, ಆಕಸ್ಮಿಕ ದಾಳಿ ಮಾಡಲಾಗಿದ್ದು, ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ. ನಂತರ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿ ಸಂಬAಧಿಸಿ ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್, ಹಿರಿಯ ಕಾರ್ಖಾನೆ ನಿರೀಕ್ಷಕ ವರುಣ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ನರಸಪ್ಪ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಭಾಷಾ, ಮಕ್ಕಳ ಸಹಾಯವಾಣಿ ಮತ್ತು ಚೈಲ್ಡ್ ಲೈನ್ ಸಿಬ್ಬಂದಿಗಳಾದ ಚಂದ್ರಕಳ, ನಿಲೋಫಿಯಾ, ರಿಚ್ ಸ್ವಯಂಸೇವಾ ಸಂಸ್ಥೆ ಸಿಬ್ಬಂದಿ ಹಾಗೂ ಇತರರು ಇದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ