ಶುಕ್ರವಾರ, ನವೆಂಬರ್ 22, 2024
ಬಳ್ಳಾರಿ; ವಿಶ್ವ ವಿಕಲಚೇತನರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ | ವಿಶೇಷಚೇತನರು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು: ಎಡಿಸಿ ಮಹಮ್ಮದ್ ಝುಬೇರ್
ಬಳ್ಳಾರಿ,ನ.22(ಕರ್ನಾಟಕ ವಾರ್ತೆ):
ಸಾಮಾನ್ಯ ಮಕ್ಕಳಂತೆ ವಿಶೇಷ ಚೇತನ ಮಕ್ಕಳೂ ಕೂಡ ಕ್ರೀಡಾಕೂಟಗಳಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ನಾವೆಲ್ಲರೂ ಸದಾವಕಾಶ ಕಲ್ಪಿಸಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವÀ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನಗರದ ವಿಮ್ಸ್ ಕ್ರೀಡಾಂಗಣದಲ್ಲಿ ಜಿಲ್ಲೆಯ ವಿಕಲಚೇತನರಿಗೆ ಶುಕ್ರವಾರ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಲಚೇತನ ಕ್ರೀಡಾಪಟುಗಳು ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಕ್ರೀಡೆಗಳಲ್ಲಿ ಭಾಗವಹಿಸಲು ವಿಶೇಷ ಪ್ರೋತ್ಸಾಹ ನೀಡುವುದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಬೇಕು. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ, ಸೋಲೇ ಗೆಲುವಿನ ಮೆಟ್ಟಿಲು, ಎಂದು ಕ್ರೀಡಾ ಪಟುಗಳಿಗೆ ಆರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಎನ್.ಸಿ.ಸಿ 34 ಬೆಟಾಲಿಯನ್‌ನ ಗ್ರೂಪ್ ಕಮಾಂಡರ್ ಕರ್ನಲ್ ಪುನಿತ್ ಲೆಹಲ್, ಮಹಾನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಹರ್ಷದ್ ಅಲಿ, ಚೆಂಗಾರೆಡ್ಡಿ ಬುದ್ದಿಮಾಂದ್ಯ ಮಕ್ಕಳ ಶಾಲೆಯ ಮುಖ್ಯಗುರುಗಳಾದ ಚಂದ್ರಶೇಖರ್, ಅನುಗ್ರಹ ಬುದ್ದಿಮಾಂದ್ಯ ಮಕ್ಕಳ ಸಂಸ್ಥೆಯ ಮುಖ್ಯಸ್ಥ ಸಿಸ್ಟರ್ ಲಿನೆಟ್ ಫರ್ನಾಂಡಿಸ್, ಡಾ.ಭೀಮಾ ಬುದ್ದಿಮಾಂದ್ಯ ಮಕ್ಕಳ ಸಂಸ್ಥೆಯ ಮುಖ್ಯಸ್ಥ ಮಹೇಶ್ ಹೆಚ್.ಎಂ., ಮುಖ್ಯ ಶಿಕ್ಷಕರಾದ ವಿರುಪಾಕ್ಷ, ದೊಡ್ಡ ಬಸವೇಶ್ವರ ಬುದ್ದಿಮಾಂದ್ಯ ಮಕ್ಕಳ ಶಾಲೆಯ ಮುಖ್ಯ ಶಿಕ್ಷಕರಾದ ಗೀತಾ, ನವಜೀವನ ಸಂಸ್ಥೆಯ ಎಸ್ಥರ್, ನವತಾರೆ ಅಂಗವಿಕರ ಒಕ್ಕೂಟದ ಅಧಕ್ಷ ಸಾದಿಕ್, ಬಾಕಿದ್ ಪದಾಧಿಕಾರಿಗಳು, ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಶಿಕ್ಷಕ ರವಿ.ಸಿ.ಕೆ., ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಮುಖ್ಯಸ್ಥ ನಾಗೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿ ವರ್ಗ, ಬಳ್ಳಾರಿ ಜಿಲ್ಲೆಯ ಎಂ.ಆರ್.ಡಬ್ಲೂö್ಯ, ಯು,ಆರ್.ಡಬ್ಲೂö್ಯ ವಿ.ಆರ್.ಡಬ್ಲೂö್ಯ ಕಾರ್ಯಕರ್ತರು ಹಾಗೂ ವಿವಿಧ ಅಂಗವಿಕಲತೆಯ ಸುಮಾರು 500 ಕ್ಕೂ ಜನ ವಿಶೇಷಚೇತನರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ಗಣ್ಯರನ್ನು ಸ್ವಾಗತಿಸಿದರು. ವಿಶ್ವ ಭಾರತಿ ಕಲಾ ನಿಕೇತನ ಮತ್ತು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಗುರುಮೂರ್ತಿ ಕೆ.ಹೆಚ್ ನಿರೂಪಿಸಿದರು. ಸ್ಮೆöÊಲ್ ಸಂಸ್ಥೆಯ ಅಧ್ಯಕ್ಷ ಉಮಾಪತಿಗೌಡ್ರು ವಂದಿಸಿದರು.
ಇದೇ ಸಂದರ್ಭದಲ್ಲಿ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಎಲ್ಲಾ ವಿಶೇಷ ಚೇತನರಿಗೆ ಕ್ಯಾಪ್ ಮತ್ತು ಟೀ-ಶರ್ಟ್ ವಿತರಿಸಲಾಯಿತು.
ಕ್ರಿಕೆಟ್, ಗುಂಡು ಎಸೆತ, ರನ್ನಿಂಗ್ ರೇಸ್, ಬೈಕ್ ರೇಸ್, ಕೇನ್ ರೇಸ್, ಜಾವಲಿನ್ ಥ್ರೋ, ಮ್ಯೂಜಿಕಲ್ ಚೇರ್, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಜಾನಪದ ಗೀತೆ, ಭಾವಗೀತೆ, ಫ್ಯಾನ್ಸಿ ಡ್ರೆಸ್, ಚಿತ್ರಕಲೆ, ಮುಂತಾದ ಸ್ಫರ್ಧೆಗಳಲ್ಲಿ ಭಾಗವಹಿಸಿ ವಿಕಲಚೇತನರು ಕಾರ್ಯಕ್ರಮ ಯಶಸ್ವಿಗೊಳಿಸಿದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ