ಸೋಮವಾರ, ನವೆಂಬರ್ 25, 2024

ಕೃಷಿ ಬೆಳೆಗಳಿಗೆ ವಿಮೆ ಮಾಡಿಕೊಳ್ಳಲು ಸೂಚನೆ

ಬಳ್ಳಾರಿ,ನ.25(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ನೋಂದಣಿ: ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.16 ಕೊನೆಯ ದಿನ. ಕಡಲೆ ಬೆಳೆಗೆ ಡಿ.31 ಕೊನೆಯ ದಿನವಾಗಿದೆ. ಬೆಳೆಗಳ ವಿಮೆ ನೋಂದಣಿಗೆ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತಿಗಳಿಗೆ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು. ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಸಂಪರ್ಕಿಸಬಹುದು. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿಗೆ (7996453241) ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ.ಎA ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ