ಮಂಗಳವಾರ, ನವೆಂಬರ್ 19, 2024
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ನ.19(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಕುರೇಕುಪ್ಪ ಗ್ರಾಮದ ನಿವಾಸಿ ಹಾಗೂ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತಿದ್ದ ಕವಲಿ ಬಸವರಾಜ ಎನ್ನುವ 28 ವರ್ಷದ ಯುವಕ ಅ.19 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಅವರು ಮನವಿ ಮಾಡಿದ್ದಾರೆ.
*ಯುವಕನ ಚಹರೆ:*
ಎತ್ತರ ಅಂದಾಜು 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಆರೆಂಜ್ ಬಣ್ಣದ ತುಂಬು ತೋಳಿನ ಟೀ-ಶರ್ಟ್, ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಯುವಕನು ಕನ್ನಡ ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ಯುವಕನ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ