ಗುರುವಾರ, ನವೆಂಬರ್ 28, 2024
ಐವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ನ.28(ಕರ್ನಾಟಕ ವಾರ್ತೆ):
ಕಾರ್ಮಿಕ ಇಲಾಖೆ ವತಿಯಿಂದ ಸಿರುಗುಪ್ಪ ಪಟ್ಟಣದ ಬಳ್ಳಾರಿ ರಸ್ತೆ, ಆದೋನಿ ರಸ್ತೆ, ಸಿಂಧನೂರು ರಸ್ತೆ, ದೇಶನೂರು ಹಾಗೂ ಪಟ್ಟಣದ ಪ್ರಮುಖ ರಸ್ತೆಗಳಲ್ಲಿನ ಮಂತಾದ ಸ್ಥಳಗಳಲ್ಲಿರುವ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಪಂಚರ್‌ಶಾಪ್ ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ ಐವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ PAN-India Rescue and Rehabilitation Compaign ಅಂಗವಾಗಿ ವಿವಿಧ ಇಲಾಖೆಗಳ ಜೊತೆಗೂಡಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿ ನೇಮಕವಾದ ನಿರೀಕ್ಷಕರ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಶಾಲೆಗಳಿಗೆ ಮರು ದಾಖಲಿಸಲಾಗಿದೆ.
ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಸಿರುಗುಪ್ಪ ಗ್ರೇಡ್-2 ತಹಶೀಲ್ದಾರರಾದ ಸತ್ಯಮ್ಮ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಗಜೇಂದ್ರ, ಕಾರ್ಮಿಕ ನಿರೀಕ್ಷಕರಾದ ರಮೇಶ್, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೋಹನ್ ಕಾಳಪ್ಪ, ಸಿರುಗುಪ್ಪ ನಗರಸಭೆಯ ಮೇಲ್ವಿಚಾರಕ ವೆಂಕಟೇಶ, ಸಿರುಗುಪ್ಪ ಗ್ರಾಮ ಲೆಕ್ಕಾಧಿಕಾರಿಗಳಾದ ಪರಮೇಶ್ವರಪ್ಪ, ಗಾಳಪ್ಪ, ಗೋಳಪ್ಪ ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಉಮೇಶ್, ಕಾರ್ಮಿಕ ಇಲಾಖೆ ಸಿಬ್ಬಂದಿ ಹನುಂತಪ್ಪ, ಚೈಲ್ಡ್ಲೈನ್ ಸಿಬ್ಬಂದಿ ಚಂದ್ರಕಳ ಹಾಜರಿದ್ದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ