ಬುಧವಾರ, ನವೆಂಬರ್ 20, 2024

ಮಕ್ಕಳ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜನೆ

ಬಳ್ಳಾರಿ,ನ.20(ಕರ್ನಾಟಕ ವಾರ್ತೆ): ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಮಕ್ಕಳು ಶಿಕ್ಷಣ ತರಬೇತಿಗಳ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಭವನ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ “ಮಕ್ಕಳ ದಿನಾಚರಣೆ” ಕಾರ್ಯಕ್ರಮ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಸ್ಫರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ವಿನೋದ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಲ್ಲಿ ವಿವಿಧ ಕಲೆಗಳ ಪ್ರತಿಭೆ ಅಡಗಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಹೊರತರುವ ಕೆಲಸವಾಗಬೇಕಿದೆ ಎಂದು ಅವರು ಅಭಿಪ್ರಾಯ ಪಟ್ಟರು. ನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತಿçÃಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತಿçÃಯ ಸಂಗೀತ, ಹಿಂದೂಸ್ತಾನಿ ಶಾಸ್ತಿçÃಯ ಸಂಗೀತ, ಸುಗಮ ಸಂಗೀತ, ವಾದ್ಯ ಕಲೆಗಳಾದ ವಾದ್ಯ ಸಂಗೀತ, ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ. ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆ, ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ವಿವಿಧ ಪ್ರಕಾರ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ತೀರ್ಪುಗಾರರಾಗಿ ಹನುಮಂತ ಬಿ.ವಿ., ಪಲ್ಲವಿ ಕೆ.ಪಿ.ಎಸ್., ವೀಣಾ, ಗಂಗಣ್ಣ ಅವರು ಇದ್ದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಲಾಲಪ್ಪ ಎ.ಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ವೇದಾವತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಮಂಜುನಾಥ, ಗಂಗಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ 135 ಮಕ್ಕಳು ಭಾಗವಹಿಸಿದ್ದರು. ವಿಜೇತರಾದ ಮಕ್ಕಳಿಗೆ ಗಣ್ಯರು ಪ್ರಶಸ್ತಿ ಪತ್ರ ನೀಡಿದರು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. *ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಕ್ಕಳ ವಿವರ:* *ಸೃಜನಾತ್ಮಕ ಪ್ರದರ್ಶನ ಕಲೆ:* ಶಾಸ್ತಿçÃಯ ನೃತ್ಯ: ಪೀಪಲ್ಸ್ ಟ್ರೀ ಶಾಲೆಯ ವಿದ್ಯಾರ್ಥಿನಿ ಹಾರಿಕ ಜೇಕ್ಕ-ಪ್ರಥಮ ಹಿಂದೂಸ್ಥಾನಿ ಶಾಸ್ತಿçÃಯ ಸಂಗೀತ: ಸೇಂಟ್ ಪೀರ‍್ಸ್ ಶಾಲೆಯ ವಿದ್ಯಾರ್ಥಿನಿ ಗೌರಿ ಸುಜನಾ-ದ್ವಿತೀಯ ಜಾನಪದ ನೃತ್ಯ: ಸರ್ಕಾರಿ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿನಿ ಚೈತ್ರಾ-ತೃತೀಯ. *ವಾದ್ಯ ಕಲೆ ವಿಭಾಗ:* ಕೊಳಲು: ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ವೀರ ಪಂಚಾಕ್ಷರಿ-ಪ್ರಥಮ ಡೊಳ್ಳು: ಸರ್ಕಾರಿ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿನಿ ಲಕ್ಷಿö್ಮ- ದ್ವಿತೀಯ ಹರ‍್ಮೋನಿಯಂ: ನಂದಿ ಶಾಲೆಯ ವಿದ್ಯಾರ್ಥಿ ಇಂದ್ರಾಜ್ ರೆಡ್ಡಿ-ತೃತೀಯ. *ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ: * ಜೆ.ಸಿ.ಬಿ.ಯಂತ್ರ: ಸರ್ಕಾರಿ ಬಾಲಕರ ಬಾಲಮಂದಿರದ ವಿದ್ಯಾರ್ಥಿ ಕುಮಾರ ಸ್ವಾಮಿ-ಪ್ರಥಮ ನವಗ್ರಹ: ಅಂಬೇಡ್ಕರ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿ ಭಾವನ-ದ್ವಿತೀಯ ರಾಕೆಟ್: ಸರ್ಕಾರಿ ಬಾಲಕರ ಬಾಲಮಂದಿರದ ವಿದ್ಯಾರ್ಥಿ ಪವನ-ತೃತೀಯ. *ಚಿತ್ರಕಲೆ ವಿಭಾಗ:* ಸರ್ಕಾರಿ ಬಾಲಕರ ಬಾಲಮಂದಿರದ ವಿದ್ಯಾರ್ಥಿ ತಿಪ್ಪಣ್ಣ-ಪ್ರಥಮ ಸರ್ಕಾರಿ ಬಾಲಕರ ಬಾಲಮಂದಿರದ ವಿದ್ಯಾರ್ಥಿನಿ ದೇವಮ್ಮ-ದ್ವಿತೀಯ ಎಮ್.ಎ.ಕೆ. ಅಜಾದ್ ಶಾಲೆಯ ವಿದ್ಯಾರ್ಥಿನಿ ಅಖಿಲ-ತೃತೀಯ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ