ಮಂಗಳವಾರ, ನವೆಂಬರ್ 19, 2024
ಬಾಲಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ನ.19(ಕರ್ನಾಟಕ ವಾರ್ತೆ):
ನಗರದ ಕಂಟೋನ್‌ಮೆAಟ್ ಪ್ರದೇಶದ ಸರ್ಕಾರಿ ಬುದ್ದಿಮಾಂದ್ಯ ಬಾಲಕರ ಬಾಲ ಮಂದಿರದ 15 ವರ್ಷದ ಆಕಾಶ್ ಪ್ರಭಕರ ಕಂಬ್ಳೆ ಎನ್ನುವ ಬುದಿಮಾಂದ್ಯ ಬಾಲಕ ನ.14ರಂದು ಬಾಲಕರ ಬಾಲಮಂದಿರದ ಸಿಬ್ಬಂದಿ ಕಣ್ತಪ್ಪಿಸಿ ಕಾಣೆಯಾಗಿದ್ದು, ಅಪ್ರಾಪ್ತ ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಕೌಲ್‌ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ಬಾಲಕನ ಚಹರೆ:
ಎತ್ತರ ಅಂದಾಜು 5.1 ಅಡಿ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟೀ-ಶರ್ಟ್, ನೀಲಿ ಬಣ್ಣದ ಬರ್ಮೋಡ ಧರಿಸಿರುತ್ತಾನೆ. ಬಾಲಕನು ಹಿಂದಿ ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ಅಪ್ರಾಪ್ತ ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಕೌಲ್‌ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿ.ಐ ಮೊ.9480803047 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ