ಗುರುವಾರ, ನವೆಂಬರ್ 21, 2024

ಅನಾಮಧೇಯ ಮೃತದೇಹ ಪತ್ತೆ; ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ನಗರದ ಹಳೇ ಬಸ್ ನಿಲ್ದಾಣದ ಹತ್ತಿರ ಅಸ್ವಸ್ಥನಾಗಿ ಬಿದಿದ್ದ ಸುಮಾರು 55-60 ವಯಸ್ಸಿನ ಅನಾಮಧೇಯ ವ್ಯಕ್ತಿಯನ್ನು ಅಂಬ್ಯುಲೆನ್ಸ್ ಮೂಲಕ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ನ.14 ರಂದು ಮೃತ ಪಟ್ಟಿದ್ದು, ಮೃತನ ಶವವನ್ನು ವಿಮ್ಸ್ ಚಿತಗಾರ ಕೋಣೆಯಲ್ಲಿ ಇರಿಸಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಗಾಂಧಿ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಮೃತನ ಚಹರೆ: ಎತ್ತರ 5.4 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ ಕೂದಲು, ಬಿಳಿ ಬಣ್ಣದ ಗಡ್ಡ, ಮೀಸೆ ಇರುತ್ತದೆ. ಮೃತನ ಮೈಮೇಲೆ ಹಳದಿ ಮತ್ತು ಬಿಳಿ ಬಣ್ಣದ ತುಂಬು ತೋಳಿನ ಚೆಕ್ಸ್ ಶರ್ಟ್, ಒಂದು ಕಪ್ಪು ಬಣ್ಣದ ಬರ್ಮೋಡ ಇರುತ್ತದೆ. ಮೇಲ್ಕಂಡ ಚಹರೆ ಗುರುತುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ: 08392-258100 ಅಥವಾ ಗಾಂಧಿನಗರ ಪೊಲೀಸ್ ಠಾಣೆಯ ದೂ:08392-272192, ಪಿಐ ಮೊ:9480803046 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ