ಗುರುವಾರ, ಡಿಸೆಂಬರ್ 5, 2024

ಡಿ.06 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ

ಬಳ್ಳಾರಿ,ಡಿ.05(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಡಿ.06 ರಂದು ಬೆಳಿಗ್ಗೆ 09 ಗಂಟೆಗೆ ನಗರದ 1ನೇ ಗೇಟ್ ಹತ್ತಿರ ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮತ್ತು ಪುಷ್ಪನಮನ ಮಾಡುವ ಮೂಲಕ ಪೂಜೆ ಸಲ್ಲಿಸಲಾಗುವುದು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ದಲಿತ ಸಂಘ-ಸAಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ದಲಿತ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ