ಮಂಗಳವಾರ, ಡಿಸೆಂಬರ್ 24, 2024

ಜ.06 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಜ.06 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ರೈಲ್ವೆ ಸ್ಟೇಷನ್ ಎದುರುಗಡೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ದಾಖಲೆ ಪರಿಶೀಲನೆಗೆ ಹಾಜರಾಗಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯ ವೆಬ್‌ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ