ಸೋಮವಾರ, ಡಿಸೆಂಬರ್ 9, 2024
ಡಿ.10 ರಂದು ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ ಅಂಗವಾಗಿ ಜಾಗೃತಿ ಜಾಥಾ
ಬಳ್ಳಾರಿ,ಡಿ.09(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೀಡ್ಸ್ ಸಂಸ್ಥೆ, ಶಾಲಾ (ಪದವಿ ಪೂರ್ವ) ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ ಅಂಗವಾಗಿ ಡಿ.10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯ ಆವರಣದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಜಾಥಾಗೆ ಚಾಲನೆ ನೀಡುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ವಕೀಲರ ಸಂಘದ ಪಿ.ರಾಮಬ್ರಹ್ಮಂ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಹಾಗೂ ಜಿಲ್ಲಾ ನ್ಯಾಯಾಲಯ ಸಂಕೀಣದ ಎಲ್ಲಾ ನ್ಯಾಯಾಧೀಶರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ