ಶನಿವಾರ, ಡಿಸೆಂಬರ್ 7, 2024

ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಅಭಿಯಾನ | ನಿಕ್ಷಯ್ ವಾಹನಕ್ಕೆ ಚಾಲನೆ | ಕ್ಷಯರೋಗ-ಭಯಭೀತರಾಗದಿರಿ; ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಡಿ.07(ಕರ್ನಾಟಕ ವಾರ್ತೆ): ಕ್ಷಯರೋಗದ ಲಕ್ಷಣ ಕಂಡುಬAದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೆ ಚಿಕಿತ್ಸೆ ಪಡೆದು ಗುಣಮುಖರಾಗಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯರು ಆರೋಗ್ಯವೇ ಮಹಾಭಾಗ್ಯ ಎಂದಿದ್ದಾರೆ. ಮೊದಲೆಲ್ಲ ಕ್ಷಯರೋಗ ಎಂದರೆ ಜನ ಸಾಮಾನ್ಯರಲ್ಲಿ ಆತಂಕ ಮೂಡುತಿತ್ತು. ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಧೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ರಾಜೇಶ್.ಎನ್ ಹೊಸಮನೆ ಅವರು ಮಾತನಾಡಿ, ಕ್ಷಯರೋಗವು ಸಾಂಕ್ರಾಮಿಕ ರೋಗವಾಗಿದೆ. ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯೊಡನೆ ಪ್ರತಿಯೊಬ್ಬರೂ ಪಣತೊಡಬೇಕಿದೆ ಎಂದರು. ತAತ್ರಜ್ಞಾನ ಅಭಿವೃದ್ಧಿಗೊಂಡು ಆರೋಗ್ಯ ಕ್ಷೇತ್ರದಲ್ಲೂ ಆವರಿಸಿಕೊಂಡಿದೆ. ಮೊಬೈಲ್ ಎಕ್ಸ್-ರೇ ಸೇರಿದಂತೆ ಇತರೆ ಕಾರ್ಯತಂತ್ರಗಳ ಸದುಪಯೋಗ ಪಡೆದುಕೊಂಡು, ಸಮಯಕ್ಕನುಗುಣವಾಗಿ ಸುಸ್ಥಿರ ಆರೊಗ್ಯ ಹೊಂದಿಕೊಳ್ಳಬಹುದು ಎಂದು ಹೇಳಿದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಈ ದಿನ ದೇಶದ್ಯಾದಂತ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆಯನ್ನು 300 ಜಿಲ್ಲೆಗಳಲ್ಲಿ 100 ದಿನಗಳ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕ್ಷಯಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬ ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದರು. ಜಿಲ್ಲೆಯಲ್ಲಿ ಕ್ಷಯರೋಗ ಪ್ರಕರಣ ಜಾಸ್ತಿ ಇದ್ದು, ನಿಯಂತ್ರಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಖಾಸಗಿ ಸಂಸ್ತೆಯ ಸಹಭಾಗಿತ್ವದಲ್ಲಿ ಹಲವಾರು ಕಾರ್ಯಕ್ರಮ ನಡೆಯುತ್ತಾಲಿದ್ದು, ಮುಂಬರುವ ದಿನಗಳಲ್ಲಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರು ಕೈಜೋಡಿಸಬೇಕು ಎಂದರು. *ಬಾಕ್ಸ್* ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಇಂದ್ರಾಣಿ.ವಿ ಮಾತನಾಡಿ, ನಿಕ್ಷಯ್ ವಾಹನವು ಜನರ ಮನೆ ಬಾಗಿಲಿಗೆ ತೆರಳಿ ಮೊಬೈಲ್ ಎಕ್ಸ್-ರೇ ಮೂಲಕ ತತ್‌ಕ್ಷಣದಲ್ಲಿ ವರದಿ ನೀಡುವ ಸಾಮರ್ಥ್ಯ ಹೊಂದಿದ ವಾಹನವಾಗಿದೆ. ರೋಗಗಳ ಲಕ್ಷಣಗಳಿರುವ ದುರ್ಬಲ ವ್ಯಕ್ತಿಗಳನ್ನು ಪತ್ತೆ ಹಚ್ಚಿ, ತಪಾಸಣೆಗೊಳಪಡಿಸಿ ಕ್ಷಯರೋಗ, ಹೆಚ್‌ಐವಿ, ಸಕ್ಕರೆ ಖಾಯಿಲೆ, ರಕ್ತದೊತ್ತಡ ಖಾಯಿಲೆಗಳಿದ್ದಲ್ಲಿ ಗುರುತಿಸಿ ಸೂಕ್ತ ಚಿಕಿತ್ಸೆಗೆ ಒದಗಿಸಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ಜಿಲ್ಲೆಯ 08 ಕ್ಷಯಮುಕ್ತ ಗ್ರಾಮ ಪಂಚಾಯತ್‌ಗಳಿಗೆ ಸನ್ಮಾನಿಸಿದ ಬಳಿಕ ನಿಕ್ಷಯ ಮಿತ್ರ ಯೋಜನೆಯಡಿ ರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸಿದ ದಾನಿಗಳನ್ನು ಸನ್ಮಾನಿಸಲಾಯಿತು. ನಿಕ್ಷಯ್ ವಾಹನಕ್ಕೆ ಗಣ್ಯರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಹಾಗೂ ನಿಕ್ಷಯ್ ವಾಹನದಲ್ಲಿನ ಮೊಬೈಲ್ ಎಕ್ಸ್-ರೇ ಕುರಿತು ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಲಾಯಿತು. ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಅಭಿಯಾನ ಎನ್ನುವ ಸೆಲ್ಫಿ ಬೂತ್ ತೆರೆದಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಕ್ಷಯರೋಗ ಸಲಹೆಗಾರರಾದ ಡಾ.ಸಲ್ಮಾ ವರದ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪ ಮೇಯರ್ ಡಿ.ಸುಖುಂ, ಮಾಜಿ ಮೇಯರ್ ರಾಜೇಶ್ವರಿ, ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ