ಶನಿವಾರ, ಡಿಸೆಂಬರ್ 21, 2024

ಡಿ.22 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ): ನಗರದ ತಾಳೂರು ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯಡಿ ವಿದ್ಯುತ್ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಡಿ.22 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯವಾಗುವ ಪ್ರದೇಶಗಳು: ಎಫ್-14 ರ ವ್ಯಾಪ್ತಿಯ ಗಣೇಶ ಕಾಲೋನಿ, ಸಿದ್ಗಿ ಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎAಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್‌ಎಲ್‌ಸಿ ಕಾಲೋನಿ. ಎಫ್-6 ರ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನ ಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ