ಶನಿವಾರ, ಡಿಸೆಂಬರ್ 21, 2024
ಡಿ.23 ರಂದು ರಾಷ್ಟಿçÃಯ ಗಣಿತ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಡಿ.23 ರಂದು ಬೆಳಿಗ್ಗೆ 10.15 ಗಂಟೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್(ಸರ್ಕಾರಿ ಬಾಲಕಿಯರ ಪ್ರೌಢಶಾಲೆ)ನಲ್ಲಿ ರಾಷ್ಟಿçÃಯ ಗಣಿತ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು.
ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರಾದ ಎ.ಭೈರಪ್ಪ ಅವರು ಅಧ್ಯಕ್ಷತೆ ವಹಿಸುವರು.
ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಂ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಬಳ್ಳಾರಿ ಕೇಂದ್ರದ ಎನ್‌ಐಸಿ ತಾಂತ್ರಿಕ ನಿರ್ದೇಶಕ ಸಿ.ವೆಂಕಟರಮಣ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ನಯೀಮೂರ್ ರೆಹಮಾನ್ ಕೆ.ಎಸ್., ಡಿಡಿಪಿಐ ಕಚೇರಿಯ ಗಣಿತ ವಿಷಯ ನಿರ್ವಾಹಕರಾದ ಬಸವರಾಜ.ಎಂ., ಸಂಪನ್ಮೂಲ ವ್ಯಕ್ತಿಯಾಗಿ ಮುನ್ಸಿಪಾಲ್ ಪಿಯು ಕಾಲೇಜಿನ ಉಪನ್ಯಾಸಕರಾದ ಡಾ.ಯು.ಶ್ರೀನಿವಾಸ್ ಮೂರ್ತಿ, ಕಾರ್ಯಕ್ರಮ ಸಂಯೋಜಕ ಹಾಗೂ ಜಿಪಂ ಜಿಲ್ಲಾ ಯೋಜನಾ ಸಂಯೋಜಕರಾದ ರಾಮಚಂದ್ರ ರೆಡ್ಡಿ ಜಿ.ಬಿ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ