ಸೋಮವಾರ, ಡಿಸೆಂಬರ್ 23, 2024

ಡಿ.24 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಂಬAಧ ಡಿ.24 ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತ್ ಹಳೇ ನಜೀರ್ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಯಾದವ್ ಅವರು ಸಭಯೆ ಅಧ್ಯಕ್ಷತೆ ವಹಿಸುವರು. ಈ ವೇಳೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಸಂಬAದಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ