ಸೋಮವಾರ, ಡಿಸೆಂಬರ್ 2, 2024

‘ಅಕ್ಕ ಕೆಫೆ’ ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಡಿ.02(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಯೋಜನೆಯಡಿ ರಚಿತವಾದಂತಹ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿAದ ಬಳ್ಳಾರಿ ನಗರದಲ್ಲಿ ‘ಅಕ್ಕ ಕೆಫೆ’ ಪ್ರಾರಂಭಿಸಲು ಆಸಕ್ತರಿದ್ದಲ್ಲಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು. ರಾಷ್ಟಿçÃಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡಲು ಅವಕಾಶ ಕಲ್ಪಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ‘ಅಕ್ಕ ಕೆಫೆ’ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು ಎಂದು ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ