ಸೋಮವಾರ, ಡಿಸೆಂಬರ್ 2, 2024
ಅನಾಮಧೇಯ ಮೃತ ದೇಹ ಪತ್ತೆ; ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಡಿ.02(ಕರ್ನಾಟಕ ವಾರ್ತೆ):
ನಗರದ ರೈಲ್ವೇ ನಿಲ್ದಾಣದ ಹಿಂದುಗಡೆಯ ವಸತಿ ಗೃಹದ ಬಳಿಯಲ್ಲಿನ ರೈಲ್ವೇ ಸ್ಕೂಲ್ ಹತ್ತಿರ ದೀರ್ಘಾವಧಿ ಖಾಯಿಲೆಯಿಂದ ಬಳಲುತ್ತಿದ್ದ, ಅಂದಾಜು 45 ರಿಂದ 50 ವರ್ಷದ ಅನಾಮಧೇಯ ವ್ಯಕ್ತಿಯ ಮೃತ ದೇಹವು ನ.26 ರಂದು ದೊರೆತ್ತಿದ್ದು, ಈ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ಮೃತನ ಚಹರೆ:
ಎತ್ತರ 5.5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಮತ್ತು ಬಿಳಿ ಕೂದಲು, ಕಪ್ಪು ಬಿಳಿ ಮೀಸೆ ಇರುತ್ತದೆ.
ಮೃತ ದೇಹದ ಮೈಮೇಲೆ ಹಳದಿ ಬಣ್ಣದ ತುಂಬು ತೋಳಿನ ಶರ್ಟ್, ಗ್ರೇ ಕಲರ್ ಪ್ಯಾಂಟ್ ಧರಿಸಿರುತ್ತಾನೆ. ಹಣೆಯ ಮೇಲೆ ಒಂದು ಹಳೆ ಗಾಯದ ಗುರುತು ಇರುತ್ತದೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಗಾಂಧಿನಗರ ಪೊಲೀಸ್ ಠಾಣೆ ದೂ.08392-272192, ಪಿಐ ಮೊ.9480803046 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ