ಶನಿವಾರ, ಡಿಸೆಂಬರ್ 21, 2024
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರ ಪ್ರವಾಸ
ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರು ಡಿ.22 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಡಿ.22 ರಂದು ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನ ಗಿರಿನಗರ ನಿವಾಸದಿಂದ ಹೊರಟು ರಸ್ತೆಯ ಮೂಲಕ ಸರ್ಕಾರಿ ವಾಹನದಲ್ಲಿ ಬಳ್ಳಾರಿಗೆ ಆಗಮಿಸಿ, ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಅಲ್ಲಂ ಭವನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ 10 ಗಂಟೆಗೆ ನಿರ್ಗಮಿಸಿ, 10.30 ಗಂಟೆಗೆ ಬಳ್ಳಾರಿ ತಾಲ್ಲೂಕಿನ ಹಗರಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡುವರು.
ನಂತರ ಬೆಳಿಗ್ಗೆ 11 ಗಂಟೆಗೆ ಅಲ್ಲಿಂದ ಹೊರಟು, ಬೆಂಗಳೂರಿಗೆ ಪ್ರಯಾಣಿಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ