ಸೋಮವಾರ, ಡಿಸೆಂಬರ್ 9, 2024

ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಡಿ.09(ಕರ್ನಾಟಕ ವಾರ್ತೆ): ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 080-22261789 ಗೆ ಕರೆಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ