ಮಂಗಳವಾರ, ಡಿಸೆಂಬರ್ 10, 2024

ಕರ್ನಾಟಕ ಭೋವಿ ಅಭಿವೃದ್ದಿ ನಿಗಮ: ಸಾಮಾಜಿಕ ನ್ಯಾಯದ ನಾಯಕತ್ವ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಡಿ.10(ಕರ್ನಾಟಕ ವಾರ್ತೆ): ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಸಾಮಾಜಿಕ ನ್ಯಾಯದ ಕಾನೂನು ಕುರಿತು ಜಾಗೃತಿ ಮೂಡಿಸುವ ನಾಯಕತ್ವದ ತರಬೇತಿ ನೀಡಿ ಸಮುದಾಯಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನಾಗಿ ರೂಪಿಸಲು ಪರಿಶಿಷ್ಟ ಜಾತಿ ಭೋವಿ ಜನಾಂಗದ ಯುವಕ ಮತ್ತು ಯುವತಿಯರಿಗೆ ಸಾಮಾಜಿಕ ನ್ಯಾಯದ ನಾಯಕತ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿ ಡಿ.31 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಬೆಳಗಲ್ ಕ್ರಾಸ್‌ನ ಸೆಂಟ್ ಜೋಸೆಫ್ ಬಾಲಕಿಯರ ಪ್ರೌಢಶಾಲೆಯ ಎದುರುಗಡೆಯ ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ