ಶುಕ್ರವಾರ, ಡಿಸೆಂಬರ್ 20, 2024

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ: ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಡಿ.20(ಕರ್ನಾಟಕ ವಾರ್ತೆ): ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ (ಪುಡ್‌ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿ.29 ರೊಳಗಾಗಿ ಸೇವಾ-ಸಿಂಧು ಪೋರ್ಟಲ್‌ನ https://sevasindhu.karnataka.gov.in ಲಿಂಕ್ ಮೂಲಕ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಿದವರು ಉದ್ದೇಶ ಬದಲಾವಣೆ ಮಾಡಲು ಇಚ್ಚಿಸಿದ್ದಲ್ಲಿ https://swdcorp.karnataka.gov.in/ADCLPortal ನಲ್ಲಿ ನೇರ ಸಾಲ ಯೋಜನೆಯಡಿ ಕುರಿಸಾಕಾಣಿಕೆ ಉದ್ದೇಶಕ್ಕೆ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಯಡಿ ಪುಡ್‌ಕಾರ್ಟ್ ಉದ್ದೇಶಕ್ಕೆ ಎಂದು ಬದಲಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕರ ಶಾಲೆಯ ಎದುರುಗಡೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ