ಶನಿವಾರ, ಡಿಸೆಂಬರ್ 7, 2024

ಅಲ್ಪಸಂಖ್ಯಾತರ ಸಮುದಾಯದ ಬಿಇಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಬಳ್ಳಾರಿ,ಡಿ.07(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindu.karnataka.gov.in ಮೂಲಕ ಡಿ.25 ರೊಳಗಾಗಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲ್ಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು. *ಜಿಲ್ಲಾ ಮತ್ತು ತಾಲ್ಲೂಕುವಾರು ಮಾಹಿತಿ ಕೇಂದ್ರದ ವಿವರ:* ಬಳ್ಳಾರಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (ಮೊ.8310321101), ಸಂಡೂರು ತೋಟಗಾರಿಕೆ ಇಲಾಖೆಯಲ್ಲಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ಮೊ.9036925966, 8660575061), ಸಿರುಗುಪ್ಪದ ಬಳ್ಳಾರಿ ರಸ್ತೆಯ ನಗರಸಭೆ ಆವರಣದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ(ಮೊ.9148889975) ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸಹಾಯವಾಣಿ ಸಂಖ್ಯೆ ಮೊ.8277799990 (24*7) ಗೆ ಸಂಪರ್ಕಿಸಬಹುದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ