ಸೋಮವಾರ, ಡಿಸೆಂಬರ್ 9, 2024
ಮಹಿಳೆ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಡಿ.09(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲ್ಲೂಕಿನ ತಾಳೂರು ಗ್ರಾಮದ ನಿವಾಸಿ ಕವಿತಾ ಎನ್ನುವ 26 ವರ್ಷದ ಮಹಿಳೆ ಡಿ.07 ರಂದು ಕಾಣೆಯಾಗಿರುವ ಕುರಿತು, ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಮಹಿಳೆ ಚಹರೆ ಗುರುತು: ಎತ್ತರ 5.2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮಹಿಳೆಯ ಮೈಮೇಲೆ ಹಸಿರು ಮತ್ತು ಕಪ್ಪು ಮಿಶ್ರೀತ ಬಣ್ಣದ ಸೀರೆ ಹಾಗೂ ಹಸಿರು ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಸಿರಿಗೇರಿ ಪೊಲೀಸ್ ಠಾಣೆ ದೂ.08392-24426, ಮೊ.9480803056 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ