ಸೋಮವಾರ, ಡಿಸೆಂಬರ್ 23, 2024

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ): ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಜಿಂದಾಲ್ ಟೌನ್ ಶಿಪ್ ವಿ.ವಿ ನಗರದ ಚೆನ್ನಬಸಪ್ಪ ಎನ್ನುವ 37 ವರ್ಷದ ವ್ಯಕ್ತಿ ಡಿ.02 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ವ್ಯಕ್ತಿಯ ಮೈಮೇಲೆ ನೀಲಿ ಬಣ್ಣದ ಶರ್ಟ್, ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ವ್ಯಕ್ತಿಯು ಕನ್ನಡ, ಹಿಂದಿ, ತೆಲುಗು ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆ ದೂ.08395-250100, ಪಿಎಸ್‌ಐ ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ