ಶುಕ್ರವಾರ, ಡಿಸೆಂಬರ್ 13, 2024
ಜೀನ್ಸ್ ಗಾರ್ಮೆಂಟ್ ಕಾರ್ಖಾನೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷಿö್ಮÃ ಚೌಧರಿ
ಬಳ್ಳಾರಿ,ಡಿ.13(ಕರ್ನಾಟಕ ವಾರ್ತೆ):
ಬಳ್ಳಾರಿ-ಬೆಂಗಳೂರು ರಸ್ತೆಯ ಫೋಲಾಕ್ ಜೀನ್ಸ್ ಗಾರ್ಮೆಂಟ್ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷಿö್ಮÃ ಚೌಧರಿ ಅವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ನಿಗಧಿತ ವೇಳೆಗೆ ವೇತನ, ಪಿಎಫ್ ಸೌಲಭ್ಯ ಜಮೆಯಾಗುತ್ತಿದೆಯೇ ಎಂದು ಮಹಿಳಾ ಕಾರ್ಮಿಕರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಮಹಿಳಾ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಕನಿಷ್ಠ ಮೂಲಸೌಕರ್ಯ ಒದಗಿಸಬೇಕು. ಸಕಾಲದಲ್ಲಿ ಅವರಿಗೆ ವೇತನ ಮತ್ತು ಪಿಎಫ್ ಪಾವತಿಸಬೇಕು ಎಂದು ಕಾರ್ಖಾನೆಯ ಮಾಲೀಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾಂತೇಶ ಸೇರಿದಂತೆ ಕಾರ್ಖಾನೆಯ ಮಾಲೀಕರು, ಮಹಿಳಾ ಕಾರ್ಮಿಕರು ಹಾಗೂ ಇತರರು ಇದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ