ಬುಧವಾರ, ಡಿಸೆಂಬರ್ 31, 2025

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅಧಿಕೃತ ಭೇಟಿ, ವಿವಿಧ ವಿಷಯಗಳ ಚರ್ಚೆ | ವಿವಿಧ ಆರೋಪಗಳಿಗೆ ಅಧಿಕಾರಿಗಳ ಸ್ಪಷ್ಟನೆ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಬಳ್ಳಾರಿ ಜಿಲ್ಲೆಗೆ (ಡಿ.25 ರಿಂದ 28 ರ ವರೆಗೆ) ಅಧಿಕೃತವಾಗಿ ಭೇಟಿ ನೀಡಿ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಇತರೆ ಅಧಿಕಾರಿಗಳೊಂದಿಗೆ ಜಿಲ್ಲೆಗೆ ಸಂಬAಧಿಸಿದAತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದು, ಕಾರ್ಯದರ್ಶಿಯವರ ಭೇಟಿ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿರುವುದಿಲ್ಲ ಎಂಬುದಾಗಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಆಗಮಿಸುವ ಪೂರ್ವ ನಿಗಧಿತ ಯೋಜನೆಗಳಿದ್ದಲ್ಲಿ ಈ ಕುರಿತು ಪೂರ್ವಭಾವಿಯಾಗಿಯೇ ಪತ್ರಿಕಾ ಪ್ರಕಟಣೆ ಮೂಲಕ ಪ್ರಚಾರ ನೀಡಿ ಮಾಹಿತಿ ನೀಡಲಾಗುತ್ತದೆ ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನಿ ಇಲಾಖೆಯ ಉಪನಿರ್ದೇಶಕರಾದ ದ್ವಿತೀಯ ಈ.ಸಿ ಅವರು ತಿಳಿಸಿದ್ದಾರೆ. ಯಾವುದೇ ವ್ಯಕ್ತಿ, ಸಂಘ ಅಥವಾ ಸಂಘಟನೆಗಳು ಯಾವುದೇ ಸಂದರ್ಭಗಳಲ್ಲಿಯೂ ತಮ್ಮ ಅಹವಾಲು, ಮನವಿ ಅಥವಾ ದೂರುಗಳನ್ನು ಸಲ್ಲಿಸಲು ಮುಕ್ತ ಅವಕಾಶಗಳಿವೆ. ಇದಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ, ಇಲಾಖಾ ಕಾರ್ಯದರ್ಶಿಗಳ ಈ ಭೇಟಿಯ ಸಂದರ್ಭದಲ್ಲಿ ಅಹವಾಲುಗಳನ್ನು ಸ್ವೀಕರಿಸುವ ಯಾವುದೇ ಪೂರ್ವನಿಯೋಜಿತ ಕಾರ್ಯಕ್ರಮ ನಿಗದಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಲಾಖಾ ಕಾರ್ಯದರ್ಶಿಗಳು ಅಹವಾಲುಗಳನ್ನು ಸ್ವೀಕರಿಸಿರುವುದಿಲ್ಲ ಮತ್ತು ಖಾಸಗಿ ಓಡಾಟಕ್ಕೆ ಸರ್ಕಾರಿ ವಾಹನ ಬಳಕೆ ಎಂಬುದಾಗಿ ಪ್ರಕಟವಾಗಿರುವ ಸುದ್ದಿಯು ತಪ್ಪು ಮಾಹಿತಿಯನ್ನು ಒಳಗೊಂಡಿದೆ ಎಂದು ಉಪನಿರ್ದೇಶಕರು ಹೇಳಿದ್ದಾರೆ. ಇಲಾಖಾ ಕಾರ್ಯದರ್ಶಿಗಳ ಈ ಪ್ರವಾಸವು ಪೂರ್ವ ನಿಗಧಿತ ಅಧಿಕೃತ ಪ್ರವಾಸವಾಗಿದ್ದು, ಈ ಪ್ರವಾಸ ಕಾರ್ಯಕ್ಕೆ ಇಲಾಖಾ ಕಾರ್ಯದರ್ಶಿಗಳಿಗೆ ಮಂಜೂರಾಗಿರುವ ಅಧಿಕೃತ ವಾಹನವನ್ನೇ ಬಳಸಲಾಗಿದೆ. ಈ ರೀತಿಯ ತಪ್ಪು ಮಾಹಿತಿಯನ್ನು ನೀಡಿರುವಂತಹ ಸಂಘಟನೆಯವರು, ಮಾರ್ಗ ಮಧ್ಯೆ ಇಲಾಖಾ ಕಾರ್ಯದರ್ಶಿಗಳನ್ನು ಭೇಟಿಯಾದ ಸಂದರ್ಭದಲ್ಲಿಯೂ ಯಾವುದೇ ಅಹವಾಲು ಅಥವಾ ಮನವಿಯನ್ನು ಸಲ್ಲಿಸಿರುವುದಿಲ್ಲ. ಯಾವುದೇ ವ್ಯಕ್ತಿ, ಸಂಘ ಅಥವಾ ಸಂಘಟನೆಗಳು ಯಾವುದೇ ಸಂದರ್ಭಗಳಲ್ಲಿಯೂ ತಮ್ಮ ಅಹವಾಲು, ಮನವಿ ಅಥವಾ ದೂರುಗಳನ್ನು ಸಲ್ಲಿಸಲು ಮುಕ್ತ ಅವಕಾಶವಿದೆ. ಇಲಾಖಾ ಕಾರ್ಯದರ್ಶಿಗಳ ಭೇಟಿಗೆ ಸಮಯ ಕೋರಿದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಭಾನುವಾರ ಮೆ.ಎನ್‌ಎಂಡಿಸಿ ಲಿ. ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ:2396 ಸಂಬAಧಿಸಿದAತೆ ವಿವಿಧ ವಿಷಯಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ತೋರಣಗಲ್ಲಿನ ಮೆ.ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಡೌನ್‌ಹಿಲ್ ಪೈಪ್ಸ್ ಕನ್ವೇಯರ್ ವ್ಯವಸ್ಥೆ ಚಾಲ್ತಿಯಲ್ಲಿರುವ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 0006 (ದೇವದಾರಿ) ಗೆ ಭೇಟಿ ನೀಡಿ ಕಬ್ಬಿಣದ ಅದಿರು ಉತ್ಪಾದನೆ, ಸಂಸ್ಕರಣೆ ಮತ್ತು ಡೌನ್‌ಹಿಲ್ ಪೈಪ್ಸ್ ಕನ್ವೇಯರ್ ಮೂಲಕ ಸಾಗಾಣಿಕೆಯ ವಿಧಾನಗಳ ಕುರಿತು ಪರಿಶೀಲಿಸಿದ್ದಾರೆ. ಮೆ.ಕೆಎಸ್‌ಎಂಸಿಎಲ್ (ಎಂಎAಎಲ್) ಕಚೇರಿಗೆ ಭೇಟಿ ನೀಡಿ ಕಚೇರಿಗೆ ಸಂಬAಧಿತ ವಿಷಯಗಳ ಕುರಿತು ಚರ್ಚಿಸಿದ ಅವರು, ಗಣಿಗಾರಿಕೆ, ಮಾದರಿಗಳ ಸಂಗ್ರಹಣೆ ಮತ್ತು ಮಾದರಿಗಳ ವಿಶ್ಲೇಷಣೆಗಾಗಿ ಪ್ರಯೋಗಾಲಯದ ವ್ಯವಸ್ಥೆ ಮತ್ತು ಇತರೆ ಸಂಬAಧಿತ ವಿಷಯಗಳ ಕುರಿತಂತೆ ಮೆ.ಕೆಎಸ್‌ಎಂಸಿಎಲ್ ಸಂಸ್ಥೆಯ ಅಧಿಕಾರಿಗಳೊಂದಿಗೆ ರೋಹಿಣಿ ಸಿಂಧೂರಿ ಅವರು ಚರ್ಚಿಸಿದ್ದಾರೆ. ಮಂಗಳವಾರ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಂಡೂರು ತಾಲ್ಲೂಕಿನ ಸುಬ್ಬರಾಯನಹಳ್ಳಿ ವ್ಯಾಪ್ತಿಯಲ್ಲಿರುವ ಮೆ.ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (ಕೆಎಸ್‌ಎಂಸಿಎಲ್/ ಎಂಎAಎಲ್) ದ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 2629 ರ ಪ್ರದೇಶಕ್ಕೆ ಭೇಟಿ ನೀಡಿ, ಕಬ್ಬಿಣದ ಅದಿರು ಉತ್ಪಾದನೆ, ಸಂಸ್ಕರಣೆ ಮತ್ತು ಸಾಗಾಣಿಕೆಯ ವಿಧಾನಗಳನ್ನು ಮತ್ತು ಇತರೆ ಸಂಬAಧಿತ ವಿಷಯಗಳ ಕುರಿತು ಪರಿಶೀಲನೆಯನ್ನು ನಡೆಸಿದ್ದಾರೆ. ಬಳಿಕ ಕಾರ್ಯದರ್ಶಿಗಳು ಮೆ.ಸಂಡೂರು ಮ್ಯಾಂಗ್‌ನೀಸ್ ಮತ್ತು ಐರನ್ ಓರ್ಸ್ ಲಿ., (ಸ್ಮಯೋರ್) ನ ಕಬ್ಬಿಣ ಮತ್ತು ಮ್ಯಾಂಗನೀಸ್ ಗಣಿ ಗುತ್ತಿಗೆ ಸಂಖ್ಯೆ: 2678/2580 ರ ಕಾಣಿಗೆ ಮರದ ಕೊಳ್ಳ (ಕೆಎಂಕೆ) ಬ್ಲಾಕ್ ಗೆ ಭೇಟಿ ನೀಡಿ ಮ್ಯಾಂಗನೀಸ್ ಅದಿರು ಉತ್ಪಾದನೆ, ಸಂಸ್ಕರಣೆ ಮತ್ತು ದಾಸ್ತಾನುಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ. ಮೆ.ಎನ್‌ಎಂಡಿಸಿ ಲಿ.ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 1111 (ಕುಮಾರಸ್ವಾಮಿ) ಗಣಿ ಗುತ್ತಿಗೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ಸೂಚನೆ ನೀಡಿದ್ದಾರೆ. ಎನ್‌ಎಂಡಿಸಿ ಸಂಸ್ಥೆಯ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 1111 ರಿಂದ ಈ ಸಂಸ್ಥೆಯವರು ಅರಣ್ಯ ವಿಮೋಚನೆ ಪಡೆದಿರುವ ರಸ್ತೆ ಮೂಲಕ ಮೆ.ಎನ್‌ಎಂಡಿಸಿ ಲಿ., ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 2396 ಗೆ ತೆರಳುವ ಮಾರ್ಗ ಮಧ್ಯೆ ರೈತ ಸಂಘದವರು ಮೆ.ಎನ್‌ಎಂಡಿಸಿ ಲಿ., ನÀ ಸೆಕ್ಯೂರಿಟಿ ಗೇಟ್ ಬಳಿಯಲ್ಲಿ ಇಲಾಖಾ ಕಾರ್ಯದರ್ಶಿಗಳ ವಾಹನ ತಡೆದು, ಸಂಘಟನೆಯ ಸದಸ್ಯ ಶ್ರೀಶೈಲ ಆಲದಹಳ್ಳಿ ಎಂಬುವವರು ಮೆ.ಕೆಐಓಸಿಎಲ್ ಲಿ., ನ ಗಣಿ ಗುತ್ತಿಗೆ ಸಂಖ್ಯೆ: 20 ರ ಅವಧಿ ವಿಸ್ತರಣೆಯನ್ನು ಮಾಡದಂತೆ ಅಹವಾಲನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಕಚೇರಿಗೆ ರವಾನಿಸಲಾಗಿದೆ ಎಂದು ಕಾರ್ಯದರ್ಶಿಯವರಿಗೆ ತಿಳಿಸಿದರು. ಎಫ್‌ಸಿ ಪಡೆದ ರಸ್ತೆಯಲ್ಲಿ ಎನ್‌ಎಂಡಿಸಿ ಲಿ., ಸಂಸ್ಥೆ ಸಾರ್ವಜನಿಕರಿಗೆ ಓಡಾಡಲು ಅವಕಾಶ ನೀಡದೇ ಇರುವುದರಿಂದ ಈ ಯಾರನ್ನೂ ರಸ್ತೆಯಲ್ಲಿ ತೆರಳಲು ಬಿಡುವುದಿಲ್ಲವೆಂದು ಕಾರ್ಯದರ್ಶಿಗಳ ಮುಂದಿನ ಪ್ರಯಾಣಕ್ಕೆ ತಡೆ ಒಡ್ಡಿದ್ದರು. ಕೇಂದ್ರೀಯ ಕೈಗಾರಿಕಾ ಸುರಕ್ಷತಾ ಪಡೆಯ ಸಿಬ್ಬಂದಿ, ಎನ್‌ಎಂಡಿಸಿ ಲಿ., ನ ಪ್ರತಿನಿಧಿಗಳು ಮತ್ತು ಇಲಾಖಾ ಅಧಿಕಾರಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳ ಮನವಿಗಳ ಹೊರತಾಗಿಯೂ ತೆರಳಲು ಅವಕಾಶ ಮಾಡಿಕೊಡಲು ಸಹಮತಿಸಿರುವುದಿಲ್ಲ. ಇಲಾಖೆಗೆ ಯಾವುದೇ ಸಂಘಟನೆಯವರು ಯಾವುದೇ ಸಂದರ್ಭದಲ್ಲಿಯೂ ಸರ್ಕಾರಕ್ಕೆ ಮತ್ತು ಕಚೇರಿಗೆ ಮನವಿ ಸಲ್ಲಿಸಬಹುದಾಗಿದೆ. ಆದರೆ ಇಲಾಖಾ ಕಾರ್ಯದರ್ಶಿಗಳ ಅಧಿಕೃತ ಭೇಟಿಯ ಸಂದರ್ಭದಲ್ಲಿ, ತಾವು ಯಾವುದೇ ಮನವಿ/ಅಹವಾಲನ್ನು ಸಲ್ಲಿಸಲು ಕಾಲಾವಕಾಶ ನೀಡುವಂತೆ ಇಲಾಖೆಯ ಯಾವುದೇ ಅಧಿಕಾರಿಯವರಿಗಾಗಲೀ ಅಥವಾ ಕಾರ್ಯದರ್ಶಿಗಳಿಗಾಗಲೀ ದೂರವಾಣಿ, ಮಿಂಚAಚೆ ಅಥವಾ ಪತ್ರ ಮೂಲಕ ಪ್ರಸ್ತಾವನೆ ಸಲ್ಲಿಸಿರುವುದಿಲ್ಲ. ಹಾಗೆಯೇ, ಮಾರ್ಗ ಮಧ್ಯೆ ತಡೆ ಒಡ್ಡಿದ ಸಂದರ್ಭದಲ್ಲಿಯೂ, ಯಾವುದೇ ಮನವಿ ಅಥವಾ ಅಹವಾಲನ್ನು ಸಲ್ಲಿಸುವ ಪ್ರಸ್ತಾಪವನ್ನು ಮಾಡಿರುವುದಿಲ್ಲ. ಮುಂದುವರೆಯಲು ರೈತ ಸಂಘಟನೆಯವರು ಅನುವು ಮಾಡಿ ಕೊಡದ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗ ಮೂಲಕ ಕಾರ್ಯದರ್ಶಿಯವರು ಪ್ರಯಾಣ ಮುಂದುವರೆಸಿದ್ದರು. ಬಳಿಕ ಎನ್‌ಎಂಡಿಸಿ ಲಿ. ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 2396 (ದೋಣಿಮಲೈ) ಗೆ ಸಂಬAಧಿಸಿದ ಕಬ್ಬಿಣದ ಅದಿರು ಮಾದರಿ ಸಂಗ್ರಹಣೆ, ತಯಾರಿಕೆ ಮತ್ತು ವಿಶ್ಲೇಷಣಾ ಪ್ರಯೋಗಾಲಯಗಳು ಮತ್ತು ರಣಜೀತಪುರ ರೈಲ್ವೇ ಸೈಡಿಂಗ್ಸ್ ನಲ್ಲಿನ ಖನಿಜ ದಾಸ್ತಾನು ಪ್ರದೇಶ ಮತ್ತು ಮೆಕ್ಯಾನಿಕನಲ್ ರಿಕ್ಲೆöÊಮರ್ ಲೋಡರ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಎನ್‌ಎಂಡಿಸಿ ಲಿ. ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ:1111 ಮತ್ತು 2396 ಗಳಿಗೆ ಸಂಬAಧಿತ ವಿಷಯಗಳ ಕುರಿತಂತೆ ಎನ್‌ಎಂಡಿಸಿ ಲಿ., ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಜ.01ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ | ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ಜಾಗೃತಿ ಹೊಂದುವುದು ಮುಖ್ಯ: ಶಶಿಧರ ಶೆಟ್ಟಿ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳ ಅರಿವು, ರಸ್ತೆಗಳಲ್ಲಿ ಸುರಕ್ಷಿತ ಸಂಚಾರ ಕುರಿತು ಜಾಗೃತಿ ಹೊಂದಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಅವರು ಹೇಳಿದರು. ಬುಧವಾರದಂದು ಎಲ್ಲಾ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸಲು ಮತ್ತು ರಸ್ತೆಗಳಲ್ಲಿ ಸುರಕ್ಷಿತವಾಗಿ ಸಂಚರಿಸುವ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯಾದಾದ್ಯಂತ ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಜ.01 ರಿಂದ 30 ರ ವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದಾಗಿ ಪ್ರತಿ ವರ್ಷ ಲಕ್ಷಾಂತರ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅತಿವೇಗ, ಕುಡಿದು ವಾಹನ ಚಲಾಯಿಸುವುದು. ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು, ಸಂಚಾರ ನಿಯಮಗಳ ಉಲ್ಲಂಘನೆ, ಅಜಾಗರೂಕ ಚಾಲನೆ ಮತ್ತು ಅರಿವಿನ ಕೊರತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ. ನಾಗರಿಕರಲ್ಲಿ ಜವಾಬ್ದಾರಿಯುತವಾದ ಅರಿವು ಮೂಡಿಸಲು ಈ ಅಭಿಯಾನದ ಉದ್ದೇಶವಾಗಿದೆ ಎಂದರು. ವಿಶೇಷವಾಗಿ ಶಾಲಾ-ಕಾಲೇಜು ಮಕ್ಕಳಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು. 18 ವರ್ಷದೊಳಗಿನ ಮಕ್ಕಳು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡುಬರುತ್ತಿದ್ದು, ವಾಹನ ನೀಡುವ ಪೋಷಕರ ಮೇಲೆ ಕ್ರಮ ಜರುಗಿಸಲಾಗುವುದು. ರಾಷ್ಟಿçÃಯ ಹೆದ್ದಾರಿ ರಸ್ತೆಯಲ್ಲಿ ಕೆಟ್ಟುನಿಂತ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸದೇ ರಸ್ತೆ ಬದಿಗೆ ಹಾಕಿ ರಿಪೇರಿ ಮಾಡಬೇಕು. ಈ ಎಲ್ಲಾ ರಸ್ತೆ ಸುರಕ್ಷತೆಯ ಬಗ್ಗೆ ಇರುವ ಎಲ್ಲಾ ವಿಷಯಗಳ ಕುರಿತು ಜನವರಿ-1 ರಿಂದ 30 ರವರೆಗೆ ನಡೆಯುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಮೂಲಕ ಎಲ್ಲಾರಿಗೂ ತಿಳುವಳಿಕೆ ನೀಡಲಾಗುವುದು. ಇದರ ಸಂಬAಧವಾಗಿ ಶಾಲಾ-ಕಾಲೇಜುಗಳು, ಪೊಲೀಸ್ ಠಾಣೆಗಳು, ಸರ್ಕಾರಿ ಕಚೇರಿಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನ ಕಾರ್ಯಕ್ರಮ, ಬೀದಿ ನಾಟಕ ಮತ್ತು ಜಾಥಾ ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು. ಸಾರಿಗೆ ಇಲಾಖೆ, ಪೊಲೀಸ್, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಸೇವೆಗಳು, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‌ಜಿಓ ಸಂಸ್ಥೆಗಳಲ್ಲಿ ಎಲ್ಲಾ ಶಾಲೆಗಳು, ಕಾಲೇಜುಗಳು, ಸಾರ್ವಜನಿಕ/ಖಾಸಗಿ ಸಂಸ್ಥೆಗಳು, ಸಮುದಾಯ ಕೇಂದ್ರಗಳು, ಕ್ಲಬ್, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ಪಿಎಲ್‌ವಿ ಮತ್ತು ಎನ್‌ಜಿಓ ಪ್ರತಿನಿಧಿಗಳನ್ನು ಒಳಗೊಂಡAತೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಅಭಿಯಾನ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು. ರಸ್ತೆ ನಿಯಮಗಳ ಪಾಲನೆ, ಅಪಘಾತ ತಡೆಗಟ್ಟುವಿಕೆ ಮತ್ತು ಸುರಕ್ಷಿತ ರಸ್ತೆ ಸಂಚಾರದ ಕುರಿತು ಜನಸಾಮಾನ್ಯರು, ಯುವಜನರು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ, ಬೀದಿ ನಾಟಕ ಮತ್ತು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಬೆAಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ಅವರು ಮಾತನಾಡಿ, ಅಪಘಾತಗಳನ್ನು ಕಡಿಮೆಗೊಳಿಸಲು ಎಲ್ಲರೂ ಒಗ್ಗೂಡಿ ಅರಿವು ಮೂಡಿಸುವ ಮೂಲಕ ಜಾಗೃತಿ ಹೊಂದಬೇಕಿದೆ. ಇದರಿಂದ ಅಪಘಾತಗಳನ್ನು ಶೂನ್ಯಕ್ಕೆ ತರಬಹುದಾಗಿದೆ ಎಂದು ತಿಳಿಸಿದರು. ಅಪಘಾತಗಳಿಂದಾಗಿ ಆಗುವ ಅಂಗವಿಲತೆ ವೈಫಲ್ಯವು ಕುಟುಂಬಗಳನ್ನು ಬಹಳಷ್ಟು ಸಂಕಷ್ಟಕ್ಕೇ ದೂಡಲಿದೆ. ಸಂಚಾರಿ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದರಿಂದ ಅಪಘಾತ ಘಟನೆಗಳನ್ನು ಕಡಿಮೆ ಮಾಡಬಹುದಾಗಿದ್ದು, ಇದರಿಂದ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದರು. ವಿಡಿಯೋ ಸಂವಾದದ ಬಳಿಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಇತರೆ ಪಾಲುದಾರ ಇಲಾಖೆಗಳ ಸಹಯೋಗದೊಂದಿಗೆ ಜ.01 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಹಮ್ಮಿಕೊಂಡಿರುವ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳ ಅಗತ್ಯ ಸಹಕಾರದೊಂದಿಗೆ ಅಭಿಯಾನ ಯಶಸ್ವಿಗೊಳಿಸಲಾಗುವುದು ಎಂದರು. ವಿಡಿಯೋ ಸಂವಾದದಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಹಾಗೂ ಇತರರು ಭಾಗವಹಿಸಿದ್ದರು. ------------

ಜನರಲ್ಲಿ ಆರೋಗ್ಯ ಅರಿವು ಮೂಡಿಸುವುದು ಅಗತ್ಯ: ರವಿ ಕುಮಾರ್

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಕಲಾತಂಡಗಳ ಮೂಲಕ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಸಮುದಾಯ ಆರೋಗ್ಯ ಅಧಿಕಾರಿ ರವಿ ಕುಮಾರ್ ಅವರು ಹೇಳಿದರು. ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಹಿತಿ ಶಿಕ್ಷಣ ಸಂವಹನ ವಿಭಾಗ ಬಳ್ಳಾರಿ, ಚಿಗುರು ಕಲಾತಂಡ ಇಬ್ರಾಹಿಂಪುರ ಇವರ ಸಹಯೋಗದಲ್ಲಿ ಬಿ.ಬೆಳಗಲ್ ತಾಂಡ ಗ್ರಾಮದಲ್ಲಿ ಆರೋಗ್ಯ ಅಭಿಯಾನದಡಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾನಪದ ಕಲಾ ಪ್ರದರ್ಶನ ಮೂಲಕ ಹಮ್ಮಿಕೊಂಡಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲಾತಂಡಗಳು ಆರೋಗ್ಯ ಜಾಗೃತಿ ಕುರಿತು ಇತರೆ ಗ್ರಾಮಗಳಲ್ಲಿ ಕೂಡ ವಿವಿಧ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳು ಹಾಗೂ ಇತರೆ ವಿಷಯಗಳ ಕುರಿತು ಅರಿವು ಮೂಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಹೆರಿಗೆ ತಾಯಂದಿರ ಆರೋಗ್ಯ, ಗರ್ಭಿಣಿ ಆರೋಗ್ಯ, ತಾಯಿ ಕಾರ್ಡ್, ಕುಷ್ಟರೋಗ, ರಕ್ತ ಹೀನತೆ, ತಾಯಿ ಎದೆ ಹಾಲಿನ ಮಹತ್ವ, ಬಾಲ್ಯ ವಿವಾಹ, ಆಂಬುಲೆನ್ಸ್ ಸೇವೆ, ಹದಿಹರಿಯದವರ ಆರೋಗ್ಯ ಸಮಸ್ಯೆಗಳು, ಲಸಿಕೆಗಳು ಹಾಗೂ ಇನ್ನಿತರೆ ವಿಷಯಗಳ ಕುರಿತು ಕಲಾವಿದರು ಅಭಿನಯ ಮತ್ತು ಜಾಗೃತಿ ಗೀತೆಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಆಶಾರಾಣಿ, ಆಶಾ ಕಾರ್ಯಕರ್ತರಾದ ಲಲಿತ ಬಾಯಿ, ತಿಪ್ಪಮ್ಮ, ಪಾರುಬಾಯಿ, ವಸಂತ ಬಾಯಿ, ಜ್ಯೋತಿಬಾಯಿ, ಗ್ರಾಮದ ಹಿರಿಯರಾದ ಲಚ್ಚನಾಯಕ, ಮಂಜುನಾಥ್ ನಾಯಕ, ಶಿವನಾಯಕ್, ಮೇಘನಾಯಕ್, ಚಿಗುರು ಕಲಾ ತಂಡದ ಕಲಾವಿದರಾದ ಹುಲುಗಪ್ಪ ಎಸ್.ಎಂ., ಎಚ್.ರಮೇಶ್, ಹೆಚ್.ಜಿ.ಸುಂಕಪ್ಪ, ಎರಿಸ್ವಾಮಿ, ಸೈಪುಲ್ಲ, ವೆಂಕಟೇಶ್, ಸರ್ವ ಮಂಗಳಮ್ಮ, ದಿವ್ಯ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಶಾಲೆಯ ಶಿಕ್ಷಕರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. -------------

ಜ.03 ರಂದು ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಸಿAಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ರಾಜಶೇಖರ.ಎಸ್ ಹಾಗೂ ರುದ್ರಣ ಹರ್ತಿಕೋಟೆ ಇವರ ನೇತೃತ್ವದಲ್ಲಿ ಜ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಿಳಿಸಿದ್ದಾರೆ. ------------

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ನೋಂದಣಿಗೆ ಆಹ್ವಾನ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಅಂತರಾಷ್ಟಿçÃಯ ವಾಣಿಜ್ಯ ಮೇಳ-2026ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಜನವರಿ 02 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬಿ.ಡಿ.ಎ.ಎ ಆವರಣದಲ್ಲಿ ಏರ್ಪಡಿಸಲಾಗಿದ್ದು, ಆಸಕ್ತರು ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿಗೆ ಆಹ್ವಾನಿಸಲಾಗಿದೆ. ಜಿಲ್ಲೆಯ ಆಸಕ್ತ ಸಾರ್ವಜನಿಕರು ಭಾಗವಹಿಸಲು ಜ.01 ರೊಳಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರು ಕಚೇರಿಯಲ್ಲಿ ನಿಗದಿತ ನಮೂನೆ ಅರ್ಜಿ ಪಡೆದು ಭರ್ತಿಮಾಡಿ ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ನಮೂನೆಯನ್ನು ಜ.01 ರ ಮಧ್ಯಾಹ್ನ 03 ಗಂಟೆಯೊಳಗಾಗಿ ಅಥವಾ ಹಳೆಯ ತಾಲ್ಲೂಕು ಕಚೇರಿ ಆವರಣದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಪ್ರತಿ ಸ್ಪರ್ಧೆಗೆ ಒಂದೇ ತಿನಿಸು ಮಾಡಲು ಅವಕಾಶವಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ವಿದ್ಯಾರ್ಥಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲು ಅವಕಾಶವಿಲ್ಲ. ಹಿಂದಿನ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದವರು ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆಯಲ್ಲಿ ಭಾಗವಹಿಸಬಹುದು. ಮನೆಯಲ್ಲೇ ತಯಾರಿಸಿದ ಸಿರಿಧಾನ್ಯದ ಖಾದ್ಯ ಪ್ರದರ್ಶಿಸುವುದಕ್ಕೆ ಬಳಸುವ ಸಾಮಗ್ರಿಗಳ ಮಾದರಿಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ, ಖಾರ ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ ಮತ್ತು ಮರೆತುಹೋದ ಖಾದ್ಯದ ತಿನಿಸನ್ನು ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟಕ್ಕೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಖಾದ್ಯದ ತಿನಿಸಿಗೆ ಬಹುಮಾನ ಕ್ರಮವಾಗಿ ರೂ.5000/-, 3000/- ಹಾಗೂ 2000/-ಗಳನ್ನು ನೀಡಲಾಗುವುದು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಬಳ್ಳಾರಿ ದೂ.08392-276224, ಸಿರುಗುಪ್ಪ ಮೊ.827792800, ಸಂಡೂರು ಮೊ.8277927999 ಗೆ ಸಂಪರ್ಕಿಸಬಹುದು. ಎಂದು ಜಂಟಿ ಕೃಷಿ ನಿರ್ದೆಶಕ ಕೆ.ಎಂ. ಸೋಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ: ಬಳ್ಳಾರಿ ನಗರ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಬಳ್ಳಾರಿ ನಗರ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಅಂತಿಮ ಮತದಾರರ ಪ್ರತಿಯನ್ನು ತಿದ್ದುಪಡಿಗಳೊಂದಿಗೆ ಪ್ರಕಟಿಸಲಾಗಿದ್ದು, ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪರಿಶೀಲನೆಗೆ ಲಭ್ಯವಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಬಳ್ಳಾರಿ ಮಹಾನಗರ ಪಾಲಿಕೆ: ಸ್ವಸಹಾಯ ಸಂಘಗಳಿAದ ಅರ್ಜಿ ಆಹ್ವಾನ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮ ತಾಂತ್ರಿಕೇತರ ಚಟುವಟಿಕೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ ಅನುಮೋದಿತ 19 ಪಾರ್ಕ್ಗಳನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿAದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಸ್ವಸಹಾಯ ಸಂಘದ ಸದಸ್ಯರು ಮಹಾನಗರ ಪಾಲಿಕೆಯ ವಲಯ ಕಚೇರಿ-2 ರಲ್ಲಿನ ಡೇ-ನಲ್ಮ್ ಶಾಖೆಯಿಂದ ನಿಗಧಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 14 ಸಂಜೆ 05.30 ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಮರಳಿ ಇದೇ ಶಾಖೆಗೆ ಸಲ್ಲಿಸಬೇಕು. ಮಹಿಳಾ ಸ್ವಸಹಾಯ ಸಂಘಗಳು ಆಸಕ್ತಿಯುಳ್ಳ ಪಾರ್ಕ್ಗಳವಾರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು. ಸೂಚನೆ: ಪಾಲಿಕೆ ವ್ಯಾಪ್ತಿಯ 19 ಪಾರ್ಕ್ಗಳ ವಿವರಗಳನ್ನು ವಲಯ ಕಚೇರಿ-02 ರಲ್ಲಿರುವ ಡೇ-ನಲ್ಮ್ ಶಾಖೆಯಿಂದ ಖುದ್ದಾಗಿ ಅಥವಾ ಪಾಲಿಕೆಯ ವೆಬ್‌ಸೈಟ್ www.ballaricity.mrc.gov.in ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮಂಗಳವಾರ, ಡಿಸೆಂಬರ್ 30, 2025

‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ’ 90 ದಿನಗಳ ವಿಶೇಷ ಅಭಿಯಾನ 2.0

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲಾ ತಾಲ್ಲೂಕು ನ್ಯಾಯಾಲಯಗಳು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲು ಜನವರಿ 02 ರಿಂದ ‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ’ 90 ದಿನಗಳ ವಿಶೇಷ ಅಭಿಯಾನ 2.0 ಹಮ್ಮಿಕೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನ ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿಯ ಸಹಯೋಗದೊಂದಿಗೆ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರವು “ರಾಷ್ಟçಕ್ಕಾಗಿ ಮಧ್ಯಸ್ಥಿಕೆ 2.0” ಅಭಿಯಾನವನ್ನು ರೂಪಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಧ್ಯಸ್ಥಿಕೆ ಸಂಧಾನ ಯೋಜನಾ ಸಮಿತಿಯಿಂದ “ರಾಷ್ಟçಕ್ಕಾಗಿ ಮಧ್ಯಸ್ಥಿಕೆ ಅಭಿಯಾನ 2.0” (ಭಾರತದ ಎಲ್ಲಾ ತಾಲ್ಲೂಕು ನ್ಯಾಯಾಲಯಗಳು, ಜಿಲ್ಲಾ ನ್ಯಾಯಾಲಯಗಳು ಮತ್ತು ಹೈಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು 90 ದಿನಗಳ ಮಧ್ಯಸ್ಥಿಕೆ ಅಭಿಯಾನ) ಕುರಿತು ಸಮಯವನ್ನು ಜನವರಿ 02 ರಿಂದ ನಿಗದಿಪಡಿಸಲಾಗಿದೆ. ಹಾಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜನವರಿ 02 ರಿಂದ 90 ದಿನಗಳ ವರೆಗೆ ‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ' ಅಭಿಯಾನದಂತೆ ಮಧ್ಯಸ್ಥಿಕೆ ಮುಖಾಂತರ ರಾಜಿಯಾಗಬಹುದಾದ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಪಡಿಸಲಿದ್ದು, ಈ ಅಭಿಯಾನಕ್ಕೆ ಎರಡೂ ಜಿಲ್ಲೆಯ ವಕೀಲರು ಮತ್ತು ಕಕ್ಷಿದಾರರು ಸಹ ಸಹಕಾರ ನೀಡಲಿರುವರು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಹರಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಕಾಲಾವಧಿಯನ್ನು ಜನವರಿ 09 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಸೇವಾಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ನಿಗಧಿತ ಅವಧಿಯ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅವಧಿ ಮೀರಿ ಬರುವ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ. 08392 – 275182 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸಂಬAಧಿಸಿದAತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 3302 ಮತದಾರರು ನೋಂದಣಿಯಾಗಿದ್ದಾರೆ. *ಮತದಾರರ ವಿವರ:* ಬಳ್ಳಾರಿ: ಗಂಡು-458, ಹೆಣ್ಣು-465 ಸೇರಿ ಒಟ್ಟು 923. ಬಳ್ಳಾರಿ ನಗರ: ಗಂಡು-588, ಹೆಣ್ಣು-636 ಸೇರಿ ಒಟ್ಟು 1224. ಕಂಪ್ಲಿ: ಗಂಡು-136, ಹೆಣ್ಣು-77 ಸೇರಿ ಒಟ್ಟು 213. ಕುರುಗೋಡು: ಗಂಡು-93, ಹೆಣ್ಣು-26 ಸೇರಿ ಒಟ್ಟು 119. ಸಂಡೂರು: ಗಂಡು-206, ಹೆಣ್ಣು-177 ಸೇರಿ ಒಟ್ಟು 383. ಸಿರುಗುಪ್ಪ: ಗಂಡು-294, ಹೆಣ್ಣು-146 ಸೇರಿ ಒಟ್ಟು 440. ಒಟ್ಟಾರೆ ಬಳ್ಳಾರಿ ಜಿಲ್ಲೆಯಲ್ಲಿ ಗಂಡು-1775, ಹೆಣ್ಣು-1527 ಸೇರಿ ಒಟ್ಟು 3302 ಮತದಾರರು ನೋಂದಾಯಿಸಿಕೊAಡಿದ್ದಾರೆ. ಅAತಿಮ ಮತದಾರರ ಪಟ್ಟಿಯ ಭೌತಿಕ ಪ್ರಕ್ರಿಯೆಯು ಸಂಬAಧಿಸಿದ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಯವರ ಕಚೇರಿ, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಆಯಾ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಲಭ್ಯವಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ. ಇದನ್ನು ಹೊರತುಪಡಿಸಿಯೂ ಸಹ ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. -------------

ಊರು ಹಬ್ಬ, ಜಾತ್ರೆ-ಉತ್ಸವಗಳಲ್ಲಿ ಆರೋಗ್ಯದ ಕಾಳಜಿ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಸಲಹೆ

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಸಾರ್ವಜನಿಕರು ಊರು ಹಬ್ಬ, ಜಾತ್ರೆ-ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳು ಸಂಭವಿಸದAತೆ ಆರೋಗ್ಯ ಇಲಾಖೆಯ ಜೊತೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. ಗ್ರಾಮ / ಪಟ್ಟಣಗಳಲ್ಲಿ ನಡೆಯುವ ಎಲ್ಲಾ ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳಲ್ಲಿನ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆಯ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅವರು ಹೇಳಿದ್ದಾರೆ. ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಪ್ರದೇಶದಲ್ಲಿ ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು. ಅಗತ್ಯ ಔಷಧಿ ದಾಸ್ತಾನುಗಳೊಂದಿಗೆ ಕರ್ತವ್ಯ ನಿರ್ವಹಿಸಲು ವೈದ್ಯರು/ಸಿಬ್ಬಂದಿಗಳನ್ನು ನೇಮಿಸಲಾಗುವುದು. ದೊಡ್ಡ ಜಾತ್ರೆಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ಪ್ರಾರಂಭಿಸಲಾಗುವುದು. ಕ್ಲೋರೋಸ್ಕೋಪ್ ಮೂಲಕ ಕುಡಿಯುವ ನೀರನ್ನು ಪರೀಕ್ಷೆ ಮಾಡಿ ನೀರು ಕುಡಿಯಲು ಯೋಗ್ಯವಿದೆ ಎಂದು ಖಾತರಿ ಆದ ನಂತರ ನೀರು ಕುಡಿಯಲು ಸರಬರಾಜು ಮಾಡಲು ತಿಳಿಸಲಾಗುವುದು ಎಂದಿದ್ದಾರೆ. ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಗುವುದು. ಆರೋಗ್ಯ ಇಲಾಖೆಯ ಸೇವೆಗಳು ಮತ್ತು ಆರೋಗ್ಯ ಮಾಹಿತಿಯ ಕುರಿತು ಕರ ಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ನೀಡಲಾಗುವುದು. ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಮುಂಚೆಯೇ ಆ ಪ್ರದೇಶದಲ್ಲಿ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ ಜೈವಿಕ ಪರೀಕ್ಷೆಗೆ ಒಳಪಡಿಸಲಾಗುವುದು. ದುರಸ್ಥಿಯಲ್ಲಿರುವ ಶುದ್ಧ ನೀರಿನ ಘಟಕಗಳನ್ನು ಅತೀ ಜರೂರಾಗಿ ಸರಿಪಡಿಸಿ ಗ್ರಾಮದ ಜನತೆಗೆ ಕುಡಿಯಲು ಶುದ್ಧ ಹಾಗೂ ಸ್ವಚ್ಛ ನೀರು ಸರಬರಾಜು ಮಾಡುವುದು. ಓವರ್ ಹೆಡ್ ಟ್ಯಾಂಕ್ ಅಥವಾ ಕೆರೆಯಿಂದ ಗ್ರಾಮಕ್ಕೆ ಸರಬರಾಜು ಆಗುವ ನೀರನ್ನು ಕ್ಲೋರಿನೇಷನ್ ಮಾಡಿದ ನಂತರ ಸರಬರಾಜು ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ. ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸ್ವಚ್ಚ ಹಾಗೂ ಶುದ್ಧ ಕ್ಲೋರಿನೇಷನ್ ಮಾಡಿದ ನೀರನ್ನು ನಿಗದಿತ ಸ್ಥಳಗಳಲ್ಲಿ ಟ್ಯಾಂಕರ್ ಗಳ ಮೂಲಕ ಸರಬರಾಜು ಮಾಡಲು ತಿಳಿಸಲಾಗುವುದು. ದೇವಸ್ಥಾನದ ಸುತ್ತ ಮುತ್ತಲಿನ ಆವರಣ ಪರಿಶೀಲನೆ ಮಾಡಿ ಕಸದ ವಿಲೇವಾರಿಗಾಗಿ ಕಸದ ಬುಟ್ಟಿಗಳ ವ್ಯವಸ್ಥೆ ಮಾಡುವ ಮೂಲಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಕುರಿತು ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ತಾಲೂಕ ಪಂಚಾಯತ್, ಜಿಲ್ಲಾ ಪಂಚಾಯತಿ ಅಧಿಕಾರಿಗಳು/ಸಿಬ್ಬಂದಿಗಳು ಕ್ರಮ ವಹಿಸುವರು ಎಂದಿದ್ದಾರೆ. ಜಾತ್ರೆಯಲ್ಲಿ ತೆರೆದಿಟ್ಟ ಸಿಹಿ ಪದಾರ್ಥ, ಕತ್ತರಿಸಿ ತೆರೆದಿಟ್ಟ ಹಣ್ಣುಗಳನ್ನು ಮುಚ್ಚಿಟ್ಟು ಮಾರಾಟ ಮಾಡದಂತೆ ಕ್ರಮ ವಹಿಸಲಾಗಿದೆ. ಜಾತ್ರೆ-ಹಬ್ಬದ ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. --------------

ಸೋಮವಾರ, ಡಿಸೆಂಬರ್ 29, 2025

ಡಿ.30 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 11 ಕೆವಿ ಫೀಡರ್ ನಿಂದ ವಿದ್ಯುತ್ ಸರಬರಾಜು ಆಗುವ ಎಫ್-07 ರ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಡಿ.30 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟೆ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಅಭಿಮತ | ಕುವೆಂಪು ಸಾಹಿತ್ಯ ಲೋಕದ ಅದಮ್ಯ ಚೇತನ

ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟçಕವಿ ಕುವೆಂಪು ಅವರು ವಿಶ್ವ ಮಾನವ ಸಂದೇಶ ಸಾರುವ ಮೂಲಕ ಕನ್ನಡ ಸಾಹಿತ್ಯ ಲೋಕದ ಅದಮ್ಯ ಚೇತನವಾಗಿದ್ದರು ಎಂದು ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟçಕವಿ ಕುವೆಂಪು ಜನ್ಮದಿನ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕವಿಗಳು ಸುಂದರ ಪ್ರಕೃತಿಯ ಮೂಲಕ ಸೂರ್ಯೋದಯ ಮತ್ತು ಸೂರ್ಯಸ್ಥಮಾನದಲ್ಲಿ ಸಾಹಿತ್ಯ ಕೃತಿಗಳನ್ನು ಬರೆಯುತ್ತಿದ್ದರು. ಕುವೆಂಪು ಅವರು ಸಹ ಪ್ರಕೃತಿಯ ವರ್ಣನೆಯಿಂದ ಸಮಾಜ ಪರಿವರ್ತನೆ ಮಾಡಿದವರು ಎಂದು ತಿಳಿಸಿದರು. ಕುವೆಂಪು ಅವರು 1904 ಡಿಸೆಂಬರ್ 29 ರಂದು ತಂದೆ ವೆಂಕಟಪ್ಪ ತಾಯಿ ಸೀತಮ್ಮ ಮಗನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಜನಿಸಿದ್ದರು. ಕುವೆಂಪು ಅವರು ದೇಶದಲ್ಲಿ ಎಲ್ಲಾ ಧರ್ಮ ಸೌಹರ್ದತೆಯಿಂದ ಬಾಳಬೇಕು. ವಿಭಿನ್ನತೆಯಲ್ಲಿ ಏಕತೆ ಹೊಂದಿ ಧರ್ಮ, ಸಂಸ್ಕೃತಿ, ಆಚಾರ-ವಿಚಾರ, ಜಾತಿಗಳಿಂದ ದೂರವಿದ್ದು ವಿಶ್ವ ಮಾನವನಾಗಬೇಕು ಎಂದು ಸಾರಿದವರು ಎಂದರು. ಈಗಿನ ಪೀಳಿಗೆ ಆದರ್ಶ ವ್ಯಕ್ತಿಗಳ ಜೀವನಾಧಾರಿತ ಪುಸ್ತಕಗಳಿಂದ ಉತ್ತಮ ಆದರ್ಶಗಳನ್ನು ಬೆಳೆಸಿಕೊಂಡು ಕುವೆಂಪು ರಂತೆ ಉತ್ತಮ ಹೆಸರನ್ನು ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಬುದ್ಧ, ಬಸವಣ್ಣರಂತಹ ವಿಶ್ವ ಮಾನವರ ಸಾಲಿನಲ್ಲಿ ಕುವೆಂಪು ಅವರು ಒಬ್ಬರು. ಅವರ ‘ಓ ನನ್ನ ಚೇತನ ಆಗು ನೀ ಅನಿಕೇತನ' ಕವನದಲ್ಲಿ ಎಲ್ಲರು ವಿಶ್ವಮಾನವರಾಗಬೇಕು ಎಂಬ ತತ್ವ ಅಡಗಿತ್ತು. ಜಾತಿ, ಮತ, ಧರ್ಮ ಎಲ್ಲವನ್ನೂ ಮೀರಿ ಬದುಕಬೇಕು ಎಂದು ಸಾರಿದವರು ಕುವೆಂಪು ಎಂದು ಹೇಳಿದರು. ಆಕಾಶವಾಣಿ ಉದ್ಘೋಷಕ ಅಮಾತಿ ಬಸವರಾಜ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸಾಂಸಾರಿಕ ಜೀವನದಲ್ಲಿ ಆಧ್ಯಾತ್ಮಿಕ ಗುರಿ ಸಾಧಿಸಿದವರು ಕುವೆಂಪು. ಕೌಟುಂಬಿಕ ಜೀವನಕ್ಕೆ ಮಹತ್ವ ಕೊಟ್ಟಿದ್ದರೂ ಅವರಿಗೆ ಆಧ್ಯಾತ್ಮಿಕತೆಯ ಬಗ್ಗೆ ಓಲವಿತ್ತು. ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರ ಮಾರ್ಗದಲ್ಲಿ ಆಧ್ಯಾತ್ಮಿಕ ಯಶಸ್ಸು ಸಾಧಿಸಿದವರು ಎಂದು ಹೇಳಿದರು. ಕುವೆಂಪು ಅವರ ಕನ್ನಡ ಸಾಹಿತ್ಯವನ್ನು ಗ್ರಹಿಸಲಾರದಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ಅನೇಕ ಚಳವಳಿಗಳಿಗೆ ಅವರೇ ಸ್ಪೂರ್ತಿಯಾಗಿದ್ದರು ಮತ್ತು ಅವರ ಮುಖ್ಯ ವಿಚಾರಧಾರೆಯಾದ ಮನುಜಮತ-ವಿಶ್ವಪಥ, ಸರ್ವೋದಯ-ಸಮನ್ವಯ ಪೂರ್ಣದೃಷ್ಟಿಯನ್ನು ಕುರಿತು ತಿಳಿಸಿಕೊಟ್ಟವರು ಎಂದರು. ಇಪ್ಪತ್ತನೇಯ ಶತಮಾನ ಕಂಡ ದೈತ್ಯ ಪ್ರತಿಭೆ ವರಕವಿ ದ.ರಾ.ಬೇಂದ್ರೆಯವರಿAದ ‘ಯುಗದ ಕವಿ ಜಗದ ಕವಿ' ಎನಿಸಿಕೊಂಡವರು ಕುವೆಂಪು. ಕನ್ನಡದ ಎರಡನೇಯ ರಾಷ್ಟçಕವಿ. ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಕನ್ನಡಕ್ಕೆ ತಂದುಕೊಟ್ಟವರು ಕುವೆಂಪು ಎಂದು ಅವರು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಜಡೇಶ್ ಎಮ್ಮಿಗನೂರು ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪೀಠಿಕೆ ಭೋದಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರ ಬಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಚೋರನೂರು ಕೊಟ್ರಪ್ಪ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು. -------------

ಬಳ್ಳಾರಿ: ಜ.01 ರಿಂದ 30 ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ): ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಇತರೆ ಪಾಲುದಾರ ಇಲಾಖೆಗಳ ಸಹಯೋಗದೊಂದಿಗೆ ಜ.01 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸಾರಿಗೆ ಇಲಾಖೆ, ಪೊಲೀಸ್, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಸೇವೆಗಳು, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‌ಜಿಓ ಸಂಸ್ಥೆಗಳಲ್ಲಿ ಎಲ್ಲಾ ಶಾಲೆಗಳು, ಕಾಲೇಜುಗಳು, ಸಾರ್ವಜನಿಕ/ಖಾಸಗಿ ಸಂಸ್ಥೆಗಳು, ಸಮುದಾಯ ಕೇಂದ್ರಗಳು, ಕ್ಲಬ್, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ಪಿಎಲ್‌ವಿ ಮತ್ತು ಎನ್‌ಜಿಓ ಪ್ರತಿನಿಧಿಗಳನ್ನು ಒಳಗೊಂಡAತೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ನಿರ್ದೇಶಿಸಲಾಗಿದೆ ಎಂದಿದ್ದಾರೆ. ರಸ್ತೆ ನಿಯಮಗಳ ಪಾಲನೆ, ಅಪಘಾತ ತಡೆಗಟ್ಟುವಿಕೆ ಮತ್ತು ಸುರಕ್ಷಿತ ರಸ್ತೆ ಸಂಚಾರದ ಕುರಿತು ಜನಸಾಮಾನ್ಯರು, ಯುವಜನರು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ, ಬೀದಿ ನಾಟಕ ಮತ್ತು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸಂಚಾರಿ ನಿಯಮಗಳ ಪಾಲನೆ ಸರಿಯಾಗಿ ಆಗುತ್ತಿಲ್ಲವಾದ್ದರಿಂದ ರಸ್ತೆಯ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅಪಘಾತಗಳನ್ನು ಕಡಿಮೆ ಮಾಡಲು ಜನರಲ್ಲಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ಶಾಲಾ-ಕಾಲೇಜು ಮಕ್ಕಳಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಹಮ್ಮಿಕೊಂಡಿರುವ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕರು, ಸಂಘ-ಸAಸ್ಥೆಗಳು ಸೇರಿದಂತೆ ಪ್ರತಿಯೊಬ್ಬರು ಶ್ರಮಿಸಬೇಕು. ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆಯವರು ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆ ಹಾಗೂ ಲಗೇಜುಗಳ ತಪಾಸಣೆ ನಡೆಸಬೇಕು. ಅಪ್ರಾಪ್ತರು ವಾಹನಗಳನ್ನು ಚಲಾಯಿಸುವಂತಿಲ್ಲ. ನಗರದಲ್ಲಿ ವಾಹನಗಳ ಸಂಖ್ಯೆಯು ಹೆಚ್ಚಾಗಿದ್ದು, ಅವುಗಳನ್ನು ಸರಿಯಾದ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು. ಅದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಸೂಕ್ತ ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಬೇಕು. 18 ವರ್ಷದೊಳಗಿನ ಮಕ್ಕಳು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡುಬರುತ್ತಿದ್ದು, ಅವರ ಪೋಷಕರ ಮೇಲೆ ಪ್ರಕರಣ ದಾಖಲಿಸಬೇಕು. ರಾಷ್ಟಿçÃಯ ಹೆದ್ದಾರಿ ರಸ್ತೆಯಲ್ಲಿ ಕೆಟ್ಟುನಿಂತ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸದೇ ರಸ್ತೆ ಬದಿಗೆ ಹಾಕಿ ರಿಪೇರಿ ಮಾಡಬೇಕು. ಈ ಎಲ್ಲಾ ರಸ್ತೆ ಸುರಕ್ಷತೆಯ ಬಗ್ಗೆ ಇರುವ ಎಲ್ಲಾ ವಿಷಯಗಳ ಕುರಿತು ಜನವರಿ-1 ರಿಂದ 30 ರವರೆಗೆ ನಡೆಯುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಮೂಲಕ ಎಲ್ಲಾರಿಗೂ ತಿಳುವಳಿಕೆ ನೀಡುವ ಸಂಬAಧವಾಗಿ ಶಾಲಾ-ಕಾಲೇಜುಗಳು, ಪೊಲೀಸ್ ಠಾಣೆಗಳು, ಸರ್ಕಾರಿ ಕಚೇರಿಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನ ಕಾರ್ಯಕ್ರಮ, ಬೀದಿ ನಾಟಕ ಮತ್ತು ಜಾಥಾ ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಬೇಕು ಎಂದು ಅವರು ತಿಳಿಸಿದ್ದಾರೆ. ------------

ಬಾಲ್ಯ ವಿವಾಹದಿಂದ ದೈಹಿಕ- ಮಾನಸಿಕ ಆರೋಗ್ಯದ ಮೇಲೆ ಪರಿಣಾಮ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ): ಬಾಲ್ಯ ವಿವಾಹವು ಹದಿಹರೆಯದ ಗರ್ಭಧಾರಣೆ ಮತ್ತು ಹೆರಿಗೆ ಸಮಯದಲ್ಲಿ ಅಪಾಯ ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಸಂಡೂರು ತಾಲ್ಲೂಕಿನ ಬಂಡ್ರಿ ಮತ್ತು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗ್ರಾಮಗಳಿಗೆ ಭೇಟಿ ನೀಡಿ ಗರ್ಭೀಣಿ ತಾಯಂದಿರಿಗೆ 18 ವರ್ಷದೊಳಗೆ ಗರ್ಭ ಧರಿಸಿದರೆ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದ ಅವರು, ಬಾಲ್ಯವಿವಾಹದಿಂದ ಹೆಚ್‌ಐವಿ/ಏಡ್ಸ್ ನಂತಹ ಲೈಂಗಿಕವಾಗಿ ಹರಡುವ ರೋಗಗಳ ಅಪಾಯ ಸಹ ಹೆಚ್ಚಿಸುತ್ತದೆ ಎಂದು ತಿಳಿಸಿದರು. *ಶಿಕ್ಷಣದ ಮೇಲೆ ಪರಿಣಾಮ:* ಬಾಲ್ಯ ವಿವಾಹದಿಂದಾಗಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಾಗುತ್ತದೆ, ಇದರಿಂದ ಹುಡುಗಿಯರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಭವಿಷ್ಯದ ಉದ್ಯೋಗ ಮತ್ತು ಆರ್ಥಿಕ ಅವಕಾಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು. *ಮಾನಸಿಕ ಆರೋಗ್ಯದ ಮೇಲೆ ಪರಿಣಾಮ:* ಬಾಲ್ಯ ವಿವಾಹವು ಖಿನ್ನತೆ, ಆತಂಕ ಮತ್ತು ಆಘಾತದ ನಂತರದ ಒತ್ತಡದ ಅಸ್ವಸ್ಥತೆಗಳಂತಹ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದರು. *ಸಮಾಜದ ಮೇಲೆ ಪರಿಣಾಮ:* ಬಾಲ್ಯ ವಿವಾಹವು ಲಿಂಗ ಅಸಮಾನತೆ ಮತ್ತು ಬಡತನದ ಚಕ್ರವನ್ನು ಮುಂದುವರೆಸುತ್ತದೆ. ಇದು ದೇಶದ ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ. *ಪೂರ್ವಜರ ಆಸ್ತಿಯಲ್ಲಿ ಪಾಲು ತಪ್ಪಿಸುವುದು:* ಗ್ರಾಮೀಣ ಪ್ರದೇಶಗಳಲ್ಲಿ, ಕೆಲವು ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಿದರೆ, ಅವರು ತಮ್ಮ ಆಸ್ತಿಯಲ್ಲಿ ಪಾಲು ಕೇಳುವುದಿಲ್ಲ ಎಂದು ಭಾವಿಸುತ್ತಾರೆ, ಇದು ಸಹ ಬಾಲ್ಯ ವಿವಾಹಕ್ಕೆ ಕಾರಣವಾಗುತ್ತದೆ. *ಬಾಲ್ಯ ವಿವಾಹ ನಿಷೇಧ ಕಾಯ್ದೆ 2006:* ಈ ಕಾಯ್ದೆಯು ಹುಡುಗಿಯರಿಗೆ ಕಾನೂನುಬದ್ಧ ವಿವಾಹದ ವಯಸ್ಸನ್ನು 18 ಮತ್ತು ಹುಡುಗರಿಗೆ 21 ಎಂದು ನಿಗದಿಪಡಿಸುತ್ತದೆ. ಇದು ಬಾಲ್ಯ ವಿವಾಹಗಳನ್ನು ಆಚರಿಸುವ ಅಥವಾ ಉತ್ತೇಜಿಸುವವರಿಗೆ ದಂಡ ವಿಧಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 ಇದು ವೈವಾಹಿಕ ಸ್ಥಿತಿ ಏನೇ ಇರಲಿ, ಅಪ್ರಾಪ್ತ ವಯಸ್ಕರೊಂದಿಗಿನ ಲೈಂಗಿಕ ಸಂಬAಧವನ್ನು ಶಾಸನಬದ್ಧ ಅತ್ಯಾಚಾರವೆಂದು ಗುರುತಿಸುತ್ತದೆ. ಶಿಕ್ಷಣ ಹಕ್ಕು ಕಾಯ್ದೆ 2009, ಇದು 14 ವರ್ಷದವರೆಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಖಾತ್ರಿಗೊಳಿಸುತ್ತದೆ, ಇದು ಮದುವೆಗಳನ್ನು ವಿಳಂಬಗೊಳಿಸಲು ಸಹಾಯ ಮಾಡುತ್ತದೆ ಎಂದರು. *ವರದಕ್ಷಿಣೆ ನಿಷೇಧ ಕಾಯ್ದೆ, 1961:* ಇದು ಬಾಲ್ಯ ವಿವಾಹಗಳಿಗೆ ಉತ್ತೇಜನ ನೀಡುವ ವರದಕ್ಷಿಣೆ ಬೇಡಿಕೆಗಳನ್ನು ಪರಿಹರಿಸುತ್ತದೆ. ಬಾಲ್ಯ ವಿವಾಹ ತಡೆಗೆ ಪ್ರಯತ್ನಗಳು ಬೇಟಿ ಬಚಾವೋ, ಬೇಟಿ ಪಡಾವೋ ಕಾಯ್ದೆಯು ಇದು ಲಿಂಗ ಸಮಾನತೆ ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಸಾಂಕ್ರಾಮಿಕ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಸಂಡೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್, ಆಡಳಿತ ವೈದ್ಯಾಧಿಕಾರಿಗಳು ಸೇರಿದಂತೆ ತಾಯಂದಿರು ಹಾಜರಿದ್ದರು. ------------

ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ನವೀಕರಣ

ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗದಿಂದ 2026ನೇ ಸಾಲಿಗಾಗಿ ಜ.01 ರಿಂದ ಡಿ.31 ರವರೆಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ಮಾನ್ಯತೆ ಇರುವಂತೆ ಫಲಾನುಭವಿಗಳು ನವೀಕರಣ ಮಾಡಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ. ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ನವೀಕರಣ ಮಾಡಿಕೊಳ್ಳಲು ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2025 ನೇ ಸಾಲಿನಲ್ಲಿ ವಿತರಿಸಲಾಗಿರುವ ಅಂದರೆ 2025ರ ಡಿ.31ರ ವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್ ಗಳನ್ನು ನವೀಕರಿಸದೇ 2026 ರ ಫೆ.28ರ ವರೆಗೆ ಮಾನ್ಯತೆ ನೀಡಲಾಗಿದ್ದು, ಆ ದಿನಾಂಕದವರೆಗೆ ವಿಕಲಚೇತನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. 2025 ನೇ ಸಾಲಿನಲ್ಲಿ ವಿತರಣೆ ಮಾಡಿದ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಗಳನ್ನು 06 ಜನವರಿ 2026 ರಿಂದ 28 ಫೆಬ್ರವರಿ 2026 ರೊಳಗೆ ಎಲ್ಲಾ ಸೂಕ್ತ ದಾಖಲಾತಿಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಪಾಸ್ ಶುಲ್ಕ ರೂ.660 ಗಳನ್ನು ಪಾವತಿಸಿ, ಬಳ್ಳಾರಿ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಸಂಡೂರು ಬಸ್ ನಿಲ್ದಾಣಗಳಲ್ಲಿ ವಿಕಲಚೇತನ ಫಲಾನುಭವಿಗಳು ನವೀಕರಣ ಮಾಡಿಸಿಕೊಳ್ಳಬಹುದಾಗಿದೆ. 2026 ರ ಫೆ.28 ರ ನಂತರ ಬರುವ ಬಸ್ ಪಾಸ್‌ಗಳನ್ನು ನವೀಕರಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಜ.05 ರಂದು ಅಂಚೆ ಕಚೇರಿ ದೂರುಗಳ ಕುರಿತು ‘ಡಾಕ್ ಅದಾಲತ್’

ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ): ಅಂಚೆ ಇಲಾಖೆ ಬಳ್ಳಾರಿ ವಿಭಾಗದ ವತಿಯಿಂದ ಜನವರಿ 05 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ‘ಡಾಕ್ ಅದಾಲತ್’ ಏರ್ಪಡಿಸಲಾಗಿದೆ. ಅಂಚೆ ಕಚೇರಿಗಳಿಗೆ ಸಂಬAಧಿಸಿದAತೆ ಅಂಚೆ ವಿಷಯಗಳ ಕುರಿತು ಕುಂದು-ಕೊರತೆಗಳಿದ್ದಲ್ಲಿ ತಮ್ಮ ಕುಂದು-ಕೊರತೆಗಳನ್ನು ವಿವರವಾಗಿ ಬರೆದು ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ಬಳ್ಳಾರಿ-583102 ಈ ವಿಳಾಸಕ್ಕೆ ಜನವರಿ 02 ರ ಸಂಜೆ 04 ಗಂಟೆಯೊಳಗೆ ಅಥವಾ ಇದಕ್ಕೂ ಮುಂಚಿತವಾಗಿ ಕಳುಹಿಸಬೇಕು. ಕುಂದು-ಕೊರತೆಗಳನ್ನು doballari.ka@indiapost.gov.in ಗೆ ಸಹ ಕಳುಹಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಬಳ್ಳಾರಿ ಮಹಾನಗರ ಪಾಲಿಕೆ: ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

ಬಳ್ಳಾರಿ,ಡಿ.27(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮಾಲೀಕರು ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮುದ್ರಣದಾರರು ಜಾಹೀರಾತು ಮುದ್ರಿಸುವ ಸಮಯದಲ್ಲಿ ಶೇಕಡ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಹಾಗಾಗಿ ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ಹಾಗೂ ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಮಾಲೀಕರು ಪ್ರಧಾನವಾಗಿ ಶೇಕಡ 60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಕನ್ನಡ ಭಾಷೆ ನಾಮಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ಭಾಷೆ ನಾಮಫಲಕ ಮೇಲ್ಭಾಗದಲ್ಲಿರುವಂತೆ ಹಾಗೂ ದೊಡ್ಡದಾಗಿರುವಂತೆ ಅಳವಡಿಸಬೇಕು. ಜನವರಿ 05 ರೊಳಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರು ನಾಮಫಲಕಗಳು ಹಾಗೂ ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಪ್ರಧಾನವಾಗಿ ಕನ್ನಡ ಬಳಸಬೇಕು. ತಪ್ಪಿದ್ದಲ್ಲಿ ಅಂತಹ ನಾಮಫಲಕ, ಮುದ್ರಣ ಜಾಹೀರಾತುಗಳನ್ನು ತೆರವುಗೊಳಿಸಿ ನಿಯಮಾನುಸಾರ ದಂಡವಿಧಿಸಿ ಉದ್ದಿಮೆಗಳನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಶುಕ್ರವಾರ, ಡಿಸೆಂಬರ್ 26, 2025

ಡಿ.28 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ26(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದಿAದ ವಿದ್ಯುತ್ ಲೈನ್ ನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಡಿ.28 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-6 ವ್ಯಾಪ್ತಿಯ ನಗರದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ. ಎಫ್-10 ವ್ಯಾಪ್ತಿಯ ಅಶೋಕ ನಗರ, ಅವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ್ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ

ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.8000 ರಂತೆ ಖರೀದಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವು ಖರೀದಿ ಏಜೆನ್ಸಿಯಾಗಿದೆ. *ಖರೀದಿ ಕೇಂದ್ರಗಳ ವಿವರ:* ಬಳ್ಳಾರಿ ನಗರದ ಎಸ್.ಪಿ ವೃತ್ತದ ಬಳಿಯ ಮಾರುತಿ ನಗರದ 2ನೇ ಕ್ರಾಸ್ ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ದೂ.08392266489, ಮೊ.9035829283). ಬಳ್ಳಾರಿ ನಗರದ ಹರಿಶ್ಚಂದ್ರ ಘಾಟ್ ರಸ್ತೆಯ ಮಿಲ್ಲರ್ ಪೇಟೆಯ ನಂ:124 ರ ಟಿಎಪಿಸಿಎಂಎಸ್ (ಮೊ.9535151619, 6361665722). ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ (ಮೊ.9449664453). *ಬೇಕಾದ ದಾಖಲೆ:* 2025-26ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ, ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಗೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು. ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ತರುವುದು. ತೊಗರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಪ್ರಕಟಣೆಗೊಂಡ 80 ದಿನಗಳೊಳಗೆ ನೋಂದಣಿ ಮಾಡಿಸಬೇಕು ಹಾಗೂ ನೋಂದಣಿ ಚೀಟಿ ಪಡೆದುಕೊಳ್ಳಬೇಕು. ನಿಗಧಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಹಾಗೂ ಫ್ರೂಟ್ಸ್ ತಂತ್ರಾAಶದಲ್ಲಿ ಲಭ್ಯವಾಗುವ ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಷ್ಟು ತೊಗರಿ ಉತ್ಪನ್ನವನ್ನು 2026 ರ ಜನವರಿ 01 ರಿಂದ 90 ದಿನಗಳವರೆಗೆ ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗ ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------------

ಜ.06 ರಂದು ಇ-ಹರಾಜಿನ ಅರಿವು ಕಾರ್ಯಾಗಾರ

ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ): ರಾಜ್ಯ ಅಬಕಾರಿ ಇಲಾಖೆಯು ನೂತನವಾಗಿ ಪರಿಚಯಿಸಲು ಉದ್ದೇಶಿಸಿರುವ ಸಿಎಲ್-2ಎ ಮತ್ತು ಸಿಎಲ್-9ಎ ಅಬಕಾರಿ ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರು ಹಾಗೂ ಆಕಾಂಕ್ಷಿಗಳಿಗೆ ಅರಿವು ಮೂಡಿಸಲು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ 2026ರ ಜನವರಿ 6ರಂದು ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಆಕಾಂಕ್ಷಿಗಳು ಭಾರತ ಸರ್ಕಾರದ ಎಂ.ಎಸ್.ಟಿ.ಸಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿ ಶುಲ್ಕ ಹಾಗೂ ಇ.ಎಂ.ಡಿ ಮೊತ್ತ ಪಾವತಿಸಿ ಹರಾಜಿನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇ-ಹರಾಜಿನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಿ. ಮಾದೇಶ್ ಅವರು ತಿಳಿಸಿದ್ದಾರೆ. -------------

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಸಂತೋಷ ರೆಡ್ಡಿ.ಆರ್

ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ಕೇವಲ ಶಿಕ್ಷಣದಲ್ಲಿ ಮಾತ್ರವಲ್ಲದೆ, ಕ್ರೀಡೆಗಳಲ್ಲಿಯೂ ಆಸಕ್ತಿ ಹೊಂದಬೇಕು ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸಂತೋಷ ರೆಡ್ಡಿ.ಆರ್ ಅವರು ಹೇಳಿದರು. ಕೇಂದ್ರ ಸರ್ಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ಬಳ್ಳಾರಿ ಕಚೇರಿ ವತಿಯಿಂದ ಲಿಯಾ ಯೂತ್ ಅಸೋಸಿಯೇಷನ್ ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಜಯಚಂದ್ರ ರೆಡ್ಡಿ.ಇ ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ದೈಹಿಕ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು ಎಂದರು. ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀ. ಓಟ ಸ್ಪರ್ಧೆ, ಗುಂಡು ಎಸೆತ, ಹಗ್ಗ-ಜಗ್ಗಾಟ, ಬ್ಯಾಟ್‌ಮಿಟನ್ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳ ವಿಜೇತರು: 100 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮವಾಗಿ ಪೂಜ, ಪಜಲ್, ದ್ವಿತೀಯವಾಗಿ ಸ್ಪಂದನ, ಟಿ.ಗಣೇಶ, ತೃತೀಯವಾಗಿ ಗಾಯಿತ್ರಿ, ರವಿ. ಕಬ್ಬಡಿ ಸ್ಪರ್ಧೆಯಲ್ಲಿ ಪ್ರಥಮವಾಗಿ ಶ್ರಯನ್, ಪೂಜ, ದ್ವಿತೀಯವಾಗಿ ಜಗನ್, ಉಮ್ಮಿ ಅರನಿ. ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮವಾಗಿ ಶ್ರೀಕಾಂತ, ಉಮ್ಮಿಅರನಿ, ದ್ವಿತೀಯವಾಗಿ ಕುಮಾರ, ರುಷಿಕ್. ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಗಾಯಿತ್ರಿ, ದ್ವಿತೀಯ ರಿಷಿಕ್. ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ, ದ್ವಿತೀಯ ಶಶಿ. ಶಾಟ್ ಪುಟ್ ಸ್ಪರ್ಧೆಯಲ್ಲಿ ಪ್ರಥಮ ಕುಮಾರ, ದ್ವಿತೀಯ ಪುಷ್ಪಲತಾ. ಬಾಸ್ಕೇಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಕಿರಣ, ದ್ವಿತೀಯ ಪಜಲ್. ಕ್ರೀಡಾಕೂಟದ ವಿವಿಧ ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸ್ವತಂತ್ರ ಕಾಲೇಜಿನ ಕಾಲೇಜಿನ ಸಿಇಒ ಕೆ.ವೇಣುಗೋಪಾಲ, ಎಜಿಎಂ ವೆಂಕಟಕೃಷ್ಣ, ಪ್ರಾಂಶುಪಾಲ ತಿಪ್ಪಾರೆಡ್ಡಿ.ಪಿ., ಎನ್.ಐ.ಎಫ್.ಎ.ಎ ಸಂಸ್ಥಾಪಕ ಅಧ್ಯಕ್ಷ ಆರ್.ಕೆ.ಅಬ್ರಹಾಂ ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ---------------

ಬುಧವಾರ, ಡಿಸೆಂಬರ್ 24, 2025

ಬಳ್ಳಾರಿಯಲ್ಲಿ ರಾಷ್ಟಿçÃಯ ಗ್ರಾಹಕರ ದಿನಾಚರಣೆ | ಗ್ರಾಹಕರ ಹಕ್ಕು, ಜವಾಬ್ದಾರಿ ಅರಿವು ಹೊಂದಿ: ನ್ಯಾ. ರಾಜೇಶ್ ಎನ್.ಹೊಸಮನೆ

ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ): ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಜವಾಬ್ದಾರಿ ಮತ್ತು ಅರಿವು ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಆಹಾರ ಸುರಕ್ಷತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಡಿಜಿಟಲ್ ನ್ಯಾಯದ ಮೂಲಕ ಕಾರ್ಯಕ್ರಮ ಮತ್ತು ತ್ವರಿತ ನ್ಯಾಯ ವಿತರಣೆ’’ ಎಂಬ ಘೋಷವಾಕ್ಯದಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟಿçÃಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ರಾಷ್ಟಿçÃಯ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ಜಾರಿಗೆ ಬಂದ ಹಿನ್ನೆಲೆಯಲ್ಲಿ ಪ್ರತಿವರ್ಷ ಡಿ.24ರಂದು ರಾಷ್ಟಿçÃಯ ಗ್ರಾಹಕ ದಿನವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಗ್ರಾಹಕ ಕಾಯ್ದೆ, ಹಕ್ಕುಗಳ ಕುರಿತು ಜಾಗೃತಿ ಹೊಂದಬೇಕು ಎಂದರು. ಸಮಾಜದಲ್ಲಿ ಡಿಜಿಟಲ್ ಖರೀದಿ ಹೆಚ್ಚಾಗಿದ್ದು, ಆನ್‌ಲೈನ್ ಮೂಲಕ ಅತಿ ಹೆಚ್ಚು ವಂಚನೆಗಳು ಆಗುತ್ತಿವೆ. ಈ ಕುರಿತು ಎಚ್ಚರಿಕೆಯಿಂದ ವ್ಯವಹರಿಸಬೇಕು ಎಂದು ಕಿವಿಮಾತು ಹೇಳಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ ಅವರು ಮಾತನಾಡಿ, ಕೇಂದ್ರ ಸರ್ಕಾರ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು 1986ರ ಗ್ರಾಹಕ ಸಂರಕ್ಷಣಾ ಕಾಯಿದೆ 2019ರಡಿ ಗ್ರಾಹಕರ ಹಕ್ಕುಗಳನ್ನು ಒದಗಿಸಲಾಗಿದೆ. ಹಣ ನೀಡಿ ಪಡೆಯುವ ಪ್ರತಿಯೊಂದು ವಸ್ತುವಿನ ಗುಣಮಟ್ಟ, ಬೆಲೆ, ದಿನಾಂಕ, ಮುಕ್ತಾಯಗೊಳ್ಳುವ ದಿನ ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಶೀಲಿಸುವ ಮೂಲಕ ವಸ್ತುವಿನ ಗುಣಮಟ್ಟ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು. ಗ್ರಾಹಕರಿಗಿರುವ ಹಕ್ಕು, ಕಾಯ್ದೆಗಳ ಕುರಿತು ಶಾಲೆ, ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದರು. ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಅವರು ಮಾತನಾಡಿ, ಗ್ರಾಹಕರು ಮೋಸದ ಬಗ್ಗೆ ಸಂಶಯ ಕಂಡುಬAದಲ್ಲಿ ಅದನ್ನು ಖಚಿತಪಡಿಸಿಕೊಳ್ಳುವ ಹಕ್ಕಿದೆ. ಹಾಗಾಗಿ ಪ್ರತಿ ತೂಕದ ಯಂತ್ರಗಳನ್ನು ಪರಿಶೀಲನೆ ಮಾಡಿ ವಸ್ತುಗಳ ಖರೀದಿ ಮಾಡಬೇಕು. ಪದಾರ್ಥಗಳ ನಿವ್ವಳ ತೂಕವನ್ನು 1ಕೆಜಿ ಗೆ ಎಷ್ಟು ಗ್ರಾಂ ಬರುತ್ತದೆ ಮತ್ತು ವಸ್ತುಗಳ ಮೇಲೆ ಬರೆದಿರುವ ವಿಷಯವನ್ನು ಗ್ರಾಹಕರು ತಿಳಿದಿರಬೇಕು ಎಂದು ಹೇಳಿದರು. ಹಿರಿಯ ವಕೀಲರಾದ ಅಂಕಲಯ್ಯ ಅವರು ಮಾತನಾಡಿ, ಗ್ರಾಹಕರು ಯಾವುದೇ ವಸ್ತು, ಸರಕುಗಳನ್ನು ಖರೀದಿಸುವ ಸಂದರ್ಭದಲ್ಲಿ ವಸ್ತುವಿನ ಗುಣಮಟ್ಟ, ಅವಧಿ ಇವನ್ನೆಲ್ಲಾ ಕಡ್ಡಾಯವಾಗಿ ಪರಿಶೀಲಿಸಿ ರಶೀದಿ ಪಡೆದುಕೊಳ್ಳಬೇಕು. ಖರೀದಿಸಿದ ವಸ್ತುವಿನ ಗುಣಮಟ್ಟ ಕಳಪೆ ಮತ್ತು ದೋಷಪೂರಿತವಾಗಿದರೆ ಅಂತಹ ಸಂದರ್ಭದಲ್ಲಿ ಗ್ರಾಹಕರು ರಶೀದಿಯನ್ನು ಗ್ರಾಹಕರು ಆಯೋಗಕ್ಕೆ ಕಳುಹಿಸಿ ದೂರು ಸಲ್ಲಿಸಿದರೆ ಗ್ರಾಹಕರಿಗೆ ಸೂಕ್ತ ಪರಿಹಾರ ಒದಗಿಸಬಹುದು ಎಂದು ಹೇಳಿದರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ ಅವರು ಮಾತನಾಡಿ, ಗ್ರಾಹಕರು ಗ್ರಾಹಕರ ಹಕ್ಕುಗಳ ಬಗ್ಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಬಳ್ಳಾರಿಯ ಹಿರಿಯ ವಕೀಲರಾದ ಎನ್.ಪ್ರಕಾಶ್ ಅವರು, ‘ಡಿಜಿಟಲ್ ನ್ಯಾಯದ ಮೂಲಕ ಕಾರ್ಯಕ್ರಮ ಮತ್ತು ತ್ವರಿತ ನ್ಯಾಯ ವಿತರಣೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ, ಮಾರಾಟಗಾರರು ಗ್ರಾಹಕರನ್ನು ದೇವರೆಂದು ತಿಳಿಯುತ್ತಾರೆ. ಡಿಜಿಟಲೀಕರಣದ ಮೂಲಕ ದೇಶ-ವಿದೇಶಗಳಿಂದ ವಸ್ತುಗಳನ್ನು ಖರೀದಿ ಮಾಡಲಾಗುತ್ತಿದೆ. ನಾವು ನೀಡಿದ ಹಣಕ್ಕೆ ಕಳಪೆ ಗುಣಮಟ್ಟ ವಸ್ತುಗಳು ಬಂದಲ್ಲಿ ದೂರು ಸಲ್ಲಿಸಬಹುದು ಮತ್ತು ಆನ್‌ಲೈನ್ ಪೇಮೆಂಟ್ ಮಾಡುವಾಗ ಜಾಗರೂಕರಾಗಿಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಬಳ್ಳಾರಿ ಅನೌಪಚಾರಿಕ ಪಡಿತರ ಪ್ರಾದೇಶ ಸಹಾಯಕ ನಿರ್ದೇಶಕಿ ಹೆಚ್.ಹೊನ್ನಮ್ಮ, ನ್ಯಾಯ ಬೆಲೆ ಅಂಗಡಿಯ ಏಜೆಂಟರು, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು. ---------------

ತಾರಾನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಹೆಚ್‌ಓ ಭೇಟಿ | ಐದು ವರ್ಷದೊಳಗಿನ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸಿ: ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಪೋಲಿಯೋ ವೈರಸ್‌ನಿಂದ ಜೀವನ ಪರ್ಯಂತ ಅಂಗವಿಲಕತೆ ಉಂಟು ಮಾಡುವುದನ್ನು ತಡೆಯಲು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಸಹ ಮತ್ತೆ ಈಗಲು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಸಾರ್ವಜನಿಕರಲ್ಲಿ ವಿನಂತಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆಯುತ್ತಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬುಧವಾರ ತಾರಾನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡುವ ಮೂಲಕ ಕಾರ್ಯಕ್ರಮ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಆರೋಗ್ಯ ಕಾರ್ಯಕರ್ತರು, ಪೋಷಕರು ಯಾವ ಮಗುವು ಪೋಲಿಯೋ ಹನಿಯಿಂದ ವಂಚಿತವಾಗದAತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಪೋಲಿಯೋ ವೈರಸ್ ಅನ್ನು ತಡೆಗಟ್ಟಲು ನವಜಾತ ಶಿಶುವಿನಿಂದ 5 ವರ್ಷದ ಒಳಗಿನ ಪ್ರತಿ ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಈ ಲಸಿಕೆಯನ್ನು ದೇಶದಲ್ಲೆಡೆ 5 ವರ್ಷದ ಒಳಗಿನ ಪ್ರತಿ ಮಗುವಿಗೂ ಒಂದೇ ದಿನ ಒಂದೆ ಬಾರಿಗೆ ಹಾಕುವುದರಿಂದ ಪೋಲಿಯೋ ರೋಗಾಣುವನ್ನು ನಾಶ ಮಾಡಲು ಸಹಕಾರಿಯಾಗುತ್ತದೆ. ಹಾಗಾಗಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆಯನ್ನು ಹಾಕಿಸಲು ವಿನಂತಿಸಿದರು. 1994 ರಿಂದ ಅಭಿಯಾನದ ರೂಪದಲ್ಲಿ ಪೋಲಿಯೋ ಲಸಿಕೆ ಹಾಕುವ ಕಾರ್ಯವನ್ನು ಕೈಗೊಂಡು ನಮ್ಮ ದೇಶದಲ್ಲಿ ಕಳೆದ 14 ವರ್ಷಗಳಿಂದ ಯಾವುದೇ ಪ್ರಕರಣ ವರದಿಯಾಗದಂತೆ ಸರ್ಕಾರವು ಲಸಿಕೆ ಹಾಕುವ ಕಾರ್ಯ ಮಾಡುತ್ತಿದ್ದು, ಸಾರ್ವಜನಿಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆಗಳನ್ನು ಹಾಕಿಸಲು ಕೋರಿದರು. ಇತ್ತೀಚಿನ ವರ್ಷಗಳಲ್ಲಿ ಲಸಿಕೆಗಳಿಂದಾಗಿ, ಮಕ್ಕಳಿಗೆ ಬಾಲ್ಯದಲ್ಲಿ ಕಾಡುವ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಯುವ ಕಾರ್ಯವನ್ನು ಸರ್ಕಾರ ಮಾಡುತ್ತಿದ್ದು, ಜನತೆ ಲಸಿಕೆಗಳ ಬಗ್ಗೆ ಯಾವುದೇ ಸಂಶಯ ವ್ಯಕ್ತಪಡಿಸದೇ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲಾ ಲಸಿಕೆಗಳನ್ನು ಹಾಕಿಸಲು ವಿನಂತಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಆಶಾಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು. ---------------

ಡಿ.29 ರಂದು ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟçಕವಿ ಕುವೆಂಪು ಜನ್ಮದಿನ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣÀದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳ್ಳಾರಿಯ ಆಕಾಶವಾಣಿ ಉದ್ಗೋಷಕರಾದ ಅಮಾತಿ ಬಸವರಾಜ ಅವರು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಜಡೇಶ್ ಎಮ್ಮಿಗನೂರು ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. --------------

ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಜ.01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾಳಮ್ಮ ಬೀದಿಯ ಕಾಳಮ್ಮ ಕಮಠೇಶ್ವರ ದೇವಸ್ಥಾನ ಸಭಾಂಗಣÀದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆ ಅಧ್ಯಕ್ಷ ಚಂದ್ರಕಾAತ ಸ.ಸೋನಾರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹೊಸಪೇಟೆಯ ಶ್ರೀ ಅಕ್ಷಯ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ವೆಂಕಟೇಶ್ ಬಡಿಗೇರ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅಮಾತಿ ಬಸವರಾಜ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. --------------

ಡಿ.27 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆ.ವಿಯ ಉತ್ತರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಡಿ.27 ರಂದು ಬೆಳಿಗ್ಗೆ 09 ಗಂಟೆಯಿAದ 04 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಫೀಡರ್ ಮಾರ್ಗದ ಕಪ್ಪಗಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಎಫ್-2 ಫೀಡರ್ ಮಾರ್ಗದ ಗಾಂಧಿನಗರ, ಬಿ.ಎಸ್ ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯ ಕಾಲೋನಿ. ಎಫ್-4 ಫೀಡರ್ ಮಾರ್ಗದ ಆಟೋ ನಗರ, ಎಸ್.ಆರ್.ಎಮ್ ಲೇಔಟ್, ಕನಕದಾಸ ನಗರ, ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶ. ಎಫ್-7 ಫೀಡರ್ ಮಾರ್ಗದ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಪ್ರದೇಶ. ಎಫ್-8 ಫೀಡರ್ ಮಾರ್ಗದ ಬಸವೇಶ್ವರ ನಗರ, ಎಂ.ಅರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ. ಎಫ್-9 ಫೀಡರ್ ಮಾರ್ಗದ ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 6ನೇ, 5ನೇ, ಮತ್ತು 4ನೇ, 3ನೇ ಅಡ್ಡರಸ್ತೆ, ಡಿಎಅರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಡಿಸಿ ಕಚೇರಿ. ಎಫ್-10 ಫೀಡರ್ ಮಾರ್ಗದ ವಾಟರ ಬೂಸ್ಟರ್. ಎಫ್-11 ಫೀಡರ್ ಮಾರ್ಗದ ರಾಘವೇಂದ್ರ ಕಾಲೋನಿ 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ತಾರಾನಾಥ ಆಸ್ಪತ್ರೆ. ಎಫ್-12 ಫೀಡರ್ ಮಾರ್ಗದ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲ್ಲಿ ದುರ್ಗಾ, ಕುಬೇರ ಲೇಔಟ್. ಎಫ್-13 ಫೀಡರ್ ಮಾರ್ಗದ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯ ನಗರ, ಶಿವಲಿಂಗ ನಗರ, ಶಾಸ್ತಿçà ನಗರ, ಬಸವನಕುಂಟೆ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ. ಎಫ್-14 ಫೀಡರ್ ಮಾರ್ಗದ ಗಣೇಶ ಕಾಲೋನಿ, ಸಿದ್ಗಿ ಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎAಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್.ಎಲ್.ಸಿ. ಕಾಲೋನಿ. ರಾಯಲ್ ಕಾಲೋನಿ. ಎಫ್-15 ಫೀಡರ್ ಮಾರ್ಗದ ವಾಜಪೇಯಿ ಲೇಔಟ್, ಕನಕ ರ್ದುಗಮ್ಮ ಬಡಾವಣೆ, ಬೃಂದಾವನ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಡಿ.27 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110/11ಕೆ.ವಿ ಬಿಸಲಹಳ್ಳಿ ಉಪ-ಕೇಂದ್ರದÀ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಡಿ.27 ರಂದು ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-52 ಶಂಕರಬAಡೆ ಐಪಿ ಫಿಡರ್ ಮಾರ್ಗದ ತಿರುಮಲ ನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಬರ‍್ರನಾಯಕನಹಳ್ಳಿ ಕೃಷಿ ಪ್ರದೇಶಗಳು. ಎಫ್-53 ಶಂಕರಬAಡೆ ಎನ್.ಜೆ.ವೈ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಮಿಂಚೇರಿ, ಬರ‍್ರನಾಯಕನಹಳ್ಳಿ ಗ್ರಾಮಗಳು. ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಮಾರ್ಗದ ಬಿಸಲಹಳ್ಳಿ, ಜನತಾನಗರ, ಟಿ.ಬೂದಿಹಾಳ್ ಕುಡಿಯುವ ನೀರಿನ ಸ್ಥಾವರ ಗ್ರಾಮಗಳು. ಎಫ್-55 ಅಸುಂಡಿ ಐಪಿ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಗೋಡೆಹಾಳ್, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು. ಎಫ್-56 ಕಮ್ಮರಚೇಡು ಎನ್.ಜೆ.ವೈ ಮಾರ್ಗದ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ಗೋಡೆಹಾಳ್, ತಗ್ಗಿನ ಬೂದಿಹಾಳ್, ಅಸುಂಡಿ ಗ್ರಾಮಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸೂಚನೆ: ಉಪ-ಕೇಂದ್ರದ ಎಲ್ಲಾ ಕೃಷಿ ಮಾರ್ಗಗಳಿಗೆ ಅಂದು ಬೆಳಿಗ್ಗೆ 04 ರಿಂದ 09 ಗಂಟೆಯವರೆಗೆ ವಿದ್ಯುತ್ ಸರಬರಾಜು ಸರಬರಾಜು ಮಾಡಲಾಗುವುದು. ಬಾಕಿ ಉಳಿದ ವಿದ್ಯುತ್ ಸರಬರಾಜನ್ನು ನಿರ್ವಹಣೆ ನಂತರ ಪೂರೈಸಲಾಗುವುದು. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಡಿ.28 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗ ವ್ಯಾಪ್ತಿಯ 110/11ಕೆ.ವಿಯ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಡಿ.28 ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಎನ್.ಜೆ.ವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ ವಿಜಯನಗರ ಕ್ಯಾಂಪ್ ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-11 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-10 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್/ಗ್ರಾಮಗಳು, ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್. ಎಫ್-4 ಐ.ಪಿ ಸೆಟ್ ಕರ‍್ಲಗುಂದಿ ಫೀಡರ್ ಮಾರ್ಗದ ಕರ‍್ಲಗುಂದಿ ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಚಿ, ಶ್ರೀಧರಗಡ್ಡ, ವಿಜಯನಗರ ಕ್ಯಾಂಪ್ ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ, ಎಸ್‌ಆರ್‌ಕೆ ಲೇಔಟ್ 1, 2, ಪಿಪಲ್ ಟ್ರೀ ಸ್ಕೂಲ್, ಬಸವೇಶ್ವರ ಲೇಔಟ್, ಎನ್‌ಆರ್ ರಾಮಮೂರ್ತಿ ಮತ್ತು ಡಾಕ್ಟರ್ ಕ್ಯಾಂಪ್. ಎಫ್-10 ಸಿಟಿ ಫೀಡರ್ ಮಾರ್ಗದ ವಕ್ರಾಣಿ ಕ್ಯಾಂಪ್. *ಕೃಷಿ ಪ್ರದೇಶಗಳು:* ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶಗಳು. ಎಫ್-02 ಗುಡುದೂರು ಐಪಿ ಮಾರ್ಗದ ಗುಡುದೂರು, ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್, ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮಗಳು. ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಕರೆ | ಸುಭಿಕ್ಷ ರಾಷ್ಟç ನಿರ್ಮಾಣಕ್ಕೆ ಯುವಜನತೆ ಕೊಡುಗೆ ನೀಡಬೇಕು

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಶಿಕ್ಷಣ ಎನ್ನುವುದು ಒಂದು ನಿರಂತರ ಯಾತ್ರೆ ಮತ್ತು ಅಮೂಲ್ಯ ಸಂಪತ್ತು. ವಿದ್ಯಾರ್ಥಿಗಳು ಜ್ಞಾನ ಬೆಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ, ಸುಭಿಕ್ಷ ರಾಷ್ಟç ನಿರ್ಮಾಣದಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಕರೆ ನೀಡಿದರು. ಬಳ್ಳಾರಿ-ಸಿರುಗುಪ್ಪ ರಸ್ತೆ ಮಾರ್ಗದ ಮೌಂಟ್ ವ್ಯೂ ಕ್ಯಾಂಪಸ್ ನಲ್ಲಿ ಬುಧವಾರ ಆಯೋಜಿಸಿದ್ದ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಣ ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗಬಾರದು. ಅದು ಜ್ಞಾನ ಸಂಪಾದನೆಗೆ ಅನುವು ಮಾಡಿಕೊಡುವ ಸಾಧನವಾಗಬೇಕು. ವಿದ್ಯಾರ್ಥಿಗಳು ಕಲಿತ ವಿದ್ಯೆಯನ್ನು ದೇಶದ ಏಳಿಗೆಗಾಗಿ ಧಾರೆ ಎರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಯುವ ಸಮೂಹ ಕೇವಲ ಬೌದ್ಧಿಕವಾಗಿ ಬೆಳೆದರೆ ಸಾಲದು, ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಕೂಡ ಅಳವಡಿಸಿಕೊಳ್ಳುವುದು ಅಷ್ಟೇ ಮುಖ್ಯ. ಭಾರತೀಯ ಪರಂಪರೆಯು ನಮಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸಿಕೊಟ್ಟಿದೆ. ಈ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ ಎಂದರು. “ಎದ್ದೇಳಿ, ಎಚ್ಚರಗೊಳ್ಳಿ ಮತ್ತು ಗುರಿ ಸಾಧಿಸುವವರೆಗೆ ನಿಲ್ಲಬೇಡಿ” ಸ್ವಾಮಿ ವಿವೇಕಾನಂದರ ಈ ವಾಕ್ಯದಿಂದ ಸ್ಫೂರ್ತಿ ಪಡೆದು, ನಮ್ಮ ಜ್ಞಾನವನ್ನು ಕಾರ್ಯರೂಪಕ್ಕೆ ತರಬೇಕು ಮತ್ತು ರಾಷ್ಟçವನ್ನು ಅಭಿವೃದ್ಧಿ ಹೊಂದಿದ ರಾಷ್ಟçವನ್ನಾಗಿ ಮಾಡಲು ನಮ್ಮ ಕೌಶಲ್ಯಗಳನ್ನು ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಭಾರತವನ್ನು ಸದೃಢ ಮತ್ತು ಸುಭಿಕ್ಷ ರಾಷ್ಟçವನ್ನಾಗಿ ಮಾಡುವಲ್ಲಿ ಯುವಜನತೆಯ ಪಾತ್ರ ಪ್ರಮುಖವಾಗಿದೆ. ಕಿಷ್ಕಿಂದೆಯAತಹ ಪವಿತ್ರ ಮಣ್ಣಿನಲ್ಲಿ ಸ್ಥಾಪಿತವಾಗಿರುವ ಈ ವಿಶ್ವವಿದ್ಯಾಲಯವು ಯುವಶಕ್ತಿಗೆ ಸರಿಯಾದ ಮಾರ್ಗದರ್ಶನ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕದಂತಹ ಭಾಗದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟುವುದು ಸವಾಲಿನ ಕೆಲಸ. ಈ ಸವಾಲುಗಳ ನಡುವೆಯೂ ವಿಶ್ವವಿದ್ಯಾಲಯವು ಎರಡು ವರ್ಷ ಪೂರೈಸಿ ಪ್ರಥಮ ಘಟಿಕೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು. ರಾಜ್ಯದಲ್ಲಿ ಪ್ರಸ್ತುತ 29 ಖಾಸಗಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕೇವಲ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಗೆ ಆದ್ಯತೆ ನೀಡದೆ, ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಈ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಪೂರಕ ವಾತಾವರಣ ನಿರ್ಮಿಸಬೇಕು. ವಿಶೇಷವಾಗಿ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜಾಗತಿಕ ಮಟ್ಟದ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಹಾದಿ ಸುಗಮವಾಗುತ್ತಿದೆ. ಇಲ್ಲಿನ ಹೆಣ್ಣು ಮಕ್ಕಳಿಗೆ ಉಜ್ವಲ ಭಷ್ಯವಿದೆ. ಅವರಿಗೆ ಉನ್ನತ ಶಿಕ್ಷಣ ನೀಡಲು ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಅಂತಾರಾಷ್ಟಿçÃಯ ಮಟ್ಟದ ವಿಶ್ವವಿದ್ಯಾಲಯಗಳು ತಲೆ ಎತ್ತುತ್ತಿವೆ. ಈ ಪೈಪೋಟಿಯ ನಡುವೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸಂಸ್ಥೆಗಳು ಯಶಸ್ವಿಯಾಗಬೇಕು ಎಂದು ಆಶಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಹಿಂದುಳಿದ ತಾಲ್ಲೂಕುಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವ ಸರ್ಕಾರದ ನಿರ್ಧಾರವು ಅತ್ಯಂತ ಪ್ರಶಂಸನೀಯವಾಗಿದ್ದು, ಇದು ಈ ಭಾಗದ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ನೆಲದಲ್ಲೇ ಉನ್ನತ ಶಿಕ್ಷಣ ಲಭಿಸುವಂತಾಗಬೇಕು. ಕೇವಲ ಪದವಿ ಪಡೆಯುವುದು ಶಿಕ್ಷಣದ ಉದ್ದೇಶವಾಗಬಾರದು. ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣದ ಜೊತೆಗೆ ಕೌಶಲಗಳನ್ನು ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡುವಂತಾಗಬೇಕು ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ವಳ ಬಳ್ಳಾರಿಯ ಸುವರ್ಣಗಿರಿ ವಿರಕ್ತ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಲಾಯಿತು. ಇದೇ ವೇಳೆ ಶೈಕ್ಷಣಿಕ ಸಾಧನೆಯಲ್ಲಿ ಉನ್ನತ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಿಂಧನೂರು ಶಾಸಕ ಬಾದರ್ಲಿ ಹಂಪನಗೌಡ, ಟಿ.ಇ.ಎಚ್.ಆರ್.ಡಿ ಟ್ರಸ್ಟ್ ಅಧ್ಯಕ್ಷ ಡಾ.ಎಸ್.ಜೆ.ವಿ.ಮಹಿಪಾಲ್, ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಯಶವಂತ್ ಭೂಪಲ್, ಕುಲಪತಿ ಪ್ರೊ.ಟಿ.ಎನ್.ನಾಗಭೂಷಣ, ಸಹಕುಲಾಧಿಪತಿ ವೈ.ಜೆ.ಪೃಥ್ವಿರಾಜ್, ಕುಲಸಚಿವ ಡಾ.ಯು.ಈರಣ್ಣ, ಕುಲಪತಿ(ಮೌಲ್ಯಮಾಪನ) ಡಾ.ರಾಜು ಜಾಡರ್, ಹಣಕಾಸು ಅಧಿಕಾರಿ ವೈ.ನಮ್ರತಾ ಸೇರಿದಂತೆ ಬೋಧಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. --------------

ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆ ನಡೆಸಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ | ಎಲ್ಲಾ ಇಲಾಖೆ ಮತ್ತು ಸಂಘ-ಸAಸ್ಥೆಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಇಲಾಖೆಗಳು, ಸಂಘ-ಸAಸ್ಥೆಗಳು, ವಾಣಿಜ್ಯ ಮತ್ತು ನಿಗಮ ಮಂಡಳಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಪತ್ರ ವ್ಯವಹಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ಮತ್ತು ಅನುಷ್ಠಾನದ ಬಗ್ಗೆ ಕನ್ನಡ ಜಾಗೃತಿ ಸಮಿತಿಯು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ ಅಧಿಕೃತವಾಗಿ ನಮಗೆ ವರದಿ ನೀಡಬೇಕು. ಈ ಕಾನೂನನ್ನು ಪಾಲಿಸದೇ ಇರುವ ಸಂಸ್ಥೆಗಳು ಅಥವಾ ಇಲಾಖೆಗಳ ವಿರುದ್ಧ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಎಲ್ಲಾ ಇಲಾಖೆಗಳು, ನಗರ ಸ್ಥಳಿಯ ಸಂಘ-ಸAಸ್ಥೆಗಳು, ವಾಣಿಜ್ಯ ಮಂಡಳಿ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕನ್ನಡ ಅನುಷ್ಠಾನ ಮತ್ತು ಬಳಕೆಯ ಬಗ್ಗೆ ಪ್ರತಿ ತಿಂಗಳು ಮಾಸಿಕ ವರದಿ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಕಚೇರಿಯ ನಾಮಫಲಕ, ವಾಣಿಜ್ಯ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ, ಮಾರ್ಗಸೂಚಿ, ವಿಭಾಗಗಳು, ವ್ಯವಹಾರ ಕಡತಗಳಲ್ಲಿ ಕನ್ನಡ ಬಳಕೆಯ ಬಗ್ಗೆ ಪರಿಶೀಲನೆ ಮಾಡಬೇಕು ಹಾಗೂ ಪಾಲಿಸದೇ ಇರುವ ಸಂಸ್ಥೆಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗೆ ಸೂಚಿಸಿದರು. ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ವಿವಿಧ ಸ್ಥಳಗಳಲ್ಲಿ ಅಳವಡಿಸುವ ಜಾಹಿರಾತು ಬ್ಯಾನರ್‌ಗಳು ಕನ್ನಡ ಬಳಕೆ, ಪ್ಲಾಸ್ಟಿಕ್ ಗುಣಮಟ್ಟ ವಿವಿಧ ರೀತಿಯಲ್ಲಿ ಪರಿಶೀಲಿಸಿ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಬೇಕು. ಹೋಟೆಲ್ ಮತ್ತು ಕಾರ್ಖಾನೆಗಳಲ್ಲಿ ಕನ್ನಡ ನಾಮಫಲಕ ಮತ್ತು ಮಾರ್ಗಸೂಚಿಗಳ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಬೇಕು. ಕನ್ನಡ ಬಳಕೆ ಇಲ್ಲವಾದಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಬೇಕು. ಮೊದಲ ತ್ರೆöÊಮಾಸಿಕದಲ್ಲಿ ಕನ್ನಡ ಜಾಗೃತಿ ವಾರ ಸಪ್ತಾಹ ಮತ್ತು 15 ದಿನಗಳ ಕನ್ನಡ ಅಭಿಯಾನ ಕೈಗೊಳ್ಳಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳು, ವಿಚಾರಗೋಷ್ಠಿ, ಕನ್ನಡ ಸಂವಾದ, ವಿಚಾರ ಸಂಕೀರ್ಣ ಮತ್ತು ವಿವಿಧ ಜಯಂತಿ ದಿನಾಚರಣೆಗಳಲ್ಲಿ ವಿವಿಧ ಸ್ಪರ್ಧೆ ನಡೆಸಿ ಕನ್ನಡ ಪುಸ್ತಕಗಳನ್ನು ನೀಡಲಾಗುತ್ತಿದೆ. ಗಡಿನಾಡು ಪ್ರದೇಶಗಳಲ್ಲಿ ಆಚರಿಸುವ ಕನ್ನಡ ಉತ್ಸವ ಕಾರ್ಯಕ್ರಮಕ್ಕೆ ಪ್ರೋತ್ಸಾಹ ಧನ ಸಹ ನೀಡಲಾಗುತ್ತಿದ್ದು, ಹೆಚ್ಚಿನ ಕನ್ನಡ ಚಟುವಟಿಕೆ ನಡೆಸಲು ರೂಪುರೇಷೆ ಸಿದ್ಧಪಡಿಸಿ ಹೆಚ್ಚಿನ ಅನುದಾನಕ್ಕಾಗಿ ಪ್ರಾಧಿಕಾರಕ್ಕೆ ಸಲ್ಲಿಸಲಾಗುವುದು ಎಂದರು. ಕನ್ನಡ ಜಾಗೃತಿ ಸಮಿತಿ ಸಭೆ ಕಡ್ಡಾಯವಾಗಿ ಕರೆಯಿರಿ: ಆಡಳಿತದಲ್ಲಿ ಕನ್ನಡ ಕಡ್ಡಾಯ ಅನುಷ್ಠಾನಕ್ಕಾಗಿ ಪರಾಮರ್ಶೆ ನಡೆಸಲು ಪ್ರತಿ ಮೂರು ತಿಂಗಳಿಗೊಮ್ಮೆ ತಾಲ್ಲೂಕು ಮತ್ತು ಪಂಚಾಯತಿ ಮಟ್ಟದಲ್ಲಿ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷÀತ್ತಿನ ಅಧ್ಯಕ್ಷ ನಿಷ್ಠಿ ರುದ್ರಪ್ಪ ಅವರು ಮಾತನಾಡಿ, ಕನ್ನಡ ಕಡ್ಡಾಯದ ಸರ್ಕಾರದ ನಿಯಮಾವಳಿಗಳನ್ನು ಅಧಿಕಾರಿಗಳು ಪಾಲಿಸಬೇಕು. ಬ್ಯಾಂಕುಗಳಲ್ಲಿ ಕನ್ನಡ ವ್ಯವಹಾರ ನಡಿತಿಲ್ಲ. ಕನ್ನಡ ಕಡ್ಡಾಯಗೊಳಿಸಬೇಕೆಂದು ನಿಯಮಗಳಿದ್ದರೂ ಬ್ಯಾಂಕುಗಳು ಇದನ್ನು ಪಾಲಿಸುತ್ತಿಲ್ಲ. ಕನ್ನಡೇತರರ ನೇಮಕಾತಿಯಿಂದ ಈ ಸಮಸ್ಯೆ ಇನ್ನು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳಲ್ಲಿ ಶೀಘ್ರವೇ ಕನ್ನಡ ಕೋಶ ಎಂಬ ಕಾರ್ಯಕ್ರಮವನ್ನು ನಡೆಸಬೇಕು. ಬ್ಯಾಂಕರ್ಸ್ ಸಭೆ ಕರೆದು ಕನ್ನಡ ಅನುಷ್ಠಾನಕ್ಕೆ ನಿರ್ದೇಶನ ನೀಡಬೇಕು ಎಂದು ಸಭೆಗೆ ತಿಳಿಸಿದರು. ಬ್ಯಾಂಕಿAಗ್ ಕ್ಷೇತ್ರದಲ್ಲಿ ಕನ್ನಡವನ್ನು ಅನುಷ್ಠಾನಗೊಳಿಸಬೇಕಾದರೆ ಕನ್ನಡಿಗರು ಇಲ್ಲಿರಬೇಕು. ಇದಕ್ಕಾಗಿ ಕನ್ನಡಿಗರು ನೇಮಕಾತಿ ಹೊಂದುವAತೆ ಸ್ಥಳೀಯ ಸಂಪನ್ಮೂಲಗಳಿAದ ಸೂಕ್ತ ತರಬೇತಿ ನೀಡುವತ್ತ ಜಿಲ್ಲಾಡಳಿತ ಗಮನಹಿರಸಬೇಕು ಎಂದರು. ಜಿಲ್ಲೆಯ ಕೈಗಾರಿಕಾ ವಲಯ, ಬ್ಯಾಂಕ್ ಮತ್ತು ಇತರೆ ಸಂಸ್ಥೆಗಳಲ್ಲಿ ಅನ್ಯಭಾಷಿಕರೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸ್ಥಳಿಯ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಭೆಯ ಗಮನಕ್ಕೆ ತಂದರು. ಜಿಲ್ಲಾ ಮಟ್ಟದ ನ್ಯಾಯಾಲಗಳು ಮತ್ತು ಅರೆಕಾಲಿಕ ನ್ಯಾಯಾಲಗಳು ಸೇರಿದಂತೆ ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ವಿಚಾರಣೆಗೆ ಒಳಪಡುವ ಕಂದಾಯ ಪ್ರಕರಣಗಳ ಕುರಿತಂತೆ ನ್ಯಾಯಾಲಯದ ತೀರ್ಪುಗಳನ್ನು ಕನ್ನಡದಲ್ಲಿಯೆ ಹೊರಡಿಸಬೇಕು. ಜಿಲ್ಲೆಯಲ್ಲಿರುವ ಗಡಿನಾಡು ಕನ್ನಡ ಶಾಲೆಗಳ ಅಭಿವೃದ್ಧಿ ಮತ್ತು ಕೇಂದ್ರ ಸರಕಾರದ ಕೇಂದ್ರಿಯ ವಿದ್ಯಾಲಯಗಳು ಮತ್ತು ಸಿಬಿಎಸ್‌ಇ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಡ್ಡಾಯವಾಗಿ ಬೋಧನೆ ಮತ್ತು ಕನ್ನಡ ಭಾಷೆ ಮಾತನಾಡಬೇಕು. ಇದರ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಕನ್ನಡ ಜಾಗೃತಿ ಸಮಿತಿಯ ಸದಸ್ಯರು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಡಾ.ಎ.ಸಿ ದಾನಪ್ಪ, ಅಂಬಿಗರ ಮಂಜುನಾಥ, ರಾಧಾ, ಡಾ.ತಿಪ್ಪೇರುದ್ರ, ಅಲಂ ಭಾಷಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು. -------------

ಡಿ.27 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಬಿಸಿಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವುದರಿAದ ಡಿ.27 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಬ್ಯಾಂಕ್-1 ಫೀಡರ್‌ನ ಎಫ್-63 ಮತ್ತು ಎಫ್-64 ಫೀಡರ್ ವ್ಯಾಪ್ತಿಯ ರೂಪನಗುಡಿ ರಸ್ತೆ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಎ.ಪಿ.ಎಂ.ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದಲ್ಲಿ ಲಾರಿ ಕ್ಲಿನರ್ ಆಗಿ ಕೆಲಸ ಮಾಡುತ್ತಿದ್ದ ಮಹಾರಾಷ್ಟçದ 36 ವಷÀðದ ಗೋಕುಲ್ ರಾಮ್‌ದಾಸ್ ಜಾಧವ್ ಎನ್ನುವ ವ್ಯಕ್ತಿಯು ನ.25 ರಂದು ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ ಅಂದಾಜು 5.5 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡ ಕುತ್ತಿಗೆಯ ಮೇಲೆ ಹಳೆಯ ಗಾಯದ ಗುರುತು ಹಾಗೂ ಗಡ್ಡ ಬಿಟ್ಟಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬ್ರೌನ್ ಬಣ್ಣದ ಪುಲ್ ಶರ್ಟ್, ಸಾಧಾರಣ ಕೆಂಪು ಬಣ್ಣದ ರೆಡಿಮೆಡ್ ಪುಲ್ ಡ್ರಾಯರ್ ಧರಿಸಿರುತ್ತಾನೆ. ಮರಾಠಿ, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.948080396 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ): ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ 36 ವಷÀðದ ಎ.ಕಿರಣ್ ಎನ್ನುವ ವ್ಯಕ್ತಿಯು ಡಿ.10 ರಂದು ನಗರದ ಬಿಮ್ಸ್ ಆಸ್ಪತ್ರೆ ಎದುರು ಇರುವ ಟಚಪ್ ಕಟಿಂಗ್ ಶಾಪ್‌ಗೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೇಳಿ ಮರಳಿ ಬಾರದೇ ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ ಅಂದಾಜು 5.6 ಅಡಿ, ಕೋಲು ಮುಖ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಗಡ್ಡ ಮೀಸೆ ಬಿಟ್ಟಿರುತ್ತಾನೆ. ಎಡಗೈ ಗೆ ಇಂಗ್ಲಿಷ್‌ನಲ್ಲಿ ಎ ಎಂದು ಹಚ್ಚೆ ಹಾಕಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಚಕ್ಸ್ ಶರ್ಟ್, ಬೂದಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, 9480803047, ಪಿಎಸ್‌ಐ ಮೊ.94808203085 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮಂಗಳವಾರ, ಡಿಸೆಂಬರ್ 23, 2025

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಬಳ್ಳಾರಿ ಪ್ರವಾಸ

ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ): ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ ಅವರು ಡಿ.24 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.24 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11.45 ಕ್ಕೆ ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಹೆಲಿಪ್ಯಾಡ್ ಗೆ ಆಗಮಿಸುವರು. ಬಳಿಕ ಮಧ್ಯಾಹ್ನ 12 ರಿಂದ 1.30 ಗಂಟೆಯವರೆಗೆ ಸಿರುಗುಪ್ಪ ರಸ್ತೆಯ ಮೌಂಟ್ ವ್ಯೂ ಕ್ಯಾಂಪಸ್ ನಲ್ಲಿ ಏರ್ಪಡಿಸಿರುವ ಕಿಷ್ಕಿಂದ ವಿದ್ಯಾಲಯದ 1ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 02.30 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. -----------

ರೈತರ ಸೇವೆ ಸ್ಮರಣೀಯ: ಮೇಯರ್ ಪಿ.ಗಾದೆಪ್ಪ

ಬಳ್ಳಾರಿ,ಡಿ.23(ಕರ್ನಾಟಕ ವಾರ್ತೆ): ಯಾವುದೇ ಆಸೆ ಇಲ್ಲದೇ ದೇಶಕ್ಕಾಗಿ, ಜನರಿಗಾಗಿ ಕಷ್ಟಪಟ್ಟು ದುಡಿದು ಬೆಳೆ ಬೆಳೆಯುವ ರೈತರ ಸೇವೆ ಸ್ಮರಣೀಯವಾಗಿದೆ ಎಂದು ಬಳ್ಳಾರಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರೂ ಆಗಿರುವ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ ಅವರು ಹೇಳಿದರು. ಕೃಷಿ ಇಲಾಖೆಯ ಆತ್ಮ ಯೋಜನೆ, ಕೃಷಿ ವಿಜ್ಞಾನ ಕೇಂದ್ರ ಹಗರಿ ಹಾಗೂ ಬಳ್ಳಾರಿ ತಾಲ್ಲೂಕು ಕೃಷಿಕ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಅಂತರಾಷ್ಟಿçÃಯ ರೈತ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕಿಸಾನ್ ಗೋಷ್ಠಿ ಕಾರ್ಯಕ್ರಮ ಹಾಗೂ ರೈತ, ರೈತ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೈತರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವ ಸಮರ್ಪಣೆ ಮಾಡುವುದಕ್ಕಾಗಿ ರೈತರ ದಿನಾಚರಣೆ ಆಚರಿಸಲಾಗುತ್ತದೆ ಎಂದರು. ಕೃಷಿ ಮಹಾವಿದ್ಯಾಲಯದ ಪಶು ವಿಜ್ಞಾನದ ಪ್ರಾಧ್ಯಾಪಕ ಡಾ.ರಮೇಶ್ ಅವರು ಮಾತನಾಡಿ, ರೈತರು ಸುಸ್ಥಿರ ಕೃಷಿ ಕಡೆ ಗಮನ ನೀಡಿ, ಹೆಚ್ಚಿನ ಇಳುವರಿ ಪಡೆಯುವ ಮೂಲಕ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು. ಭೂಮಿಯ ಒಡಲನ್ನು ರಕ್ಷಿಸುವುದಕ್ಕಾಗಿ ನೈಸರ್ಗಿಕ ಕೃಷಿಯ ಮೇಲೆ ಅವಲಂಬಿತರಾಗಬೇಕು ಎಂದು ರೈತರಿಗೆ ತಿಳಿಸಿದರು. ಹಗರಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ರವಿ ಅವರು ಮಾತನಾಡಿ, ಮಣ್ಣು ರೈತರ ಕಣ್ಣು. ಮಣ್ಣಿಂದಲೇ ಜಗದ ಉಗಮ. ಮಣ್ಣನ್ನು ನಾವು ಮುಂದಿನ ಪೀಳಿಗೆಯವರೆಗೂ ಕಾಪಾಡಬೇಕು. ಅತಿಯಾದ ರಾಸಾಯನಿಕ ಬಳಕೆಯನ್ನು ತಪ್ಪಿಸಿ ಸುಸ್ಥಿರ ಕೃಷಿಯೆಡೆಗೆ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು. ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶ ಹಸಿವು ಮುಕ್ತ ಮಾಡುವಲ್ಲಿ ರೈತರ ಪಾತ್ರ ಬಹುಮುಖ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಹಗರಿಯ ಕೃಷಿ ಕಾಲೇಜಿನ ಪ್ರಭಾರ ಅಧಿಕಾರಿ ಡಾ. ರವಿಶಂಕರ್ ಅವರು ಮಣ್ಣಿನ ಮಹತ್ವ, ನೀರು ಮತ್ತು ಮಣ್ಣು ಸಂರಕ್ಷಣೆ ಕುರಿತು ವಿಷಯ ಮಂಡನೆ ಮಾಡಿದರು. ಕೃಷಿ ಅಧಿಕಾರಿ ಬಸವರಾಜ ಸಿಂಧಿಗೇರಿ, ಕೃಷಿ ಇಲಾಖೆಯಡಿ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪ್ರಗತಿಪರ ರೈತರಾದ ಕಾರೇಕಲ್ಲು ವೀರಾಪುರದ ಭೋಗಾರೆಡ್ಡಿ, ಎತ್ತಿನ ಬೂದಿಹಾಳು ಗ್ರಾಮದ ಗಾಳೆಪ್ಪ, ದಮ್ಮೂರು ಗ್ರಾಮದ ನಿತೀಶ್ ಹಾಗೂ ಇಬ್ರಾಹಿಂಪುರದ ರವಿಕುಮಾರ್ ಇವರು ತಮ್ಮ ಕೃಷಿ ಅನುಭವವನ್ನು ರೈತರಲ್ಲಿ ಹಂಚಿಕೊAಡರು. ತದನಂತರ ರೈತರೆಲ್ಲರೂ ಕೃಷಿ ವಿಜ್ಞಾನ ಕೇಂದ್ರ ಹಗರಿಯ ಕುಸುಬೆ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಫ್ಯಾಕ್ಟ್ ಕಂಪನಿಯವರು ಡ್ರೋನ್ ಮೂಲಕ ನ್ಯಾನೋ ಯೂರಿಯಾವನ್ನು ಕುಸುಬೆ ಬೆಳೆಗೆ ಸಿಂಪಡಿಸುವುದನ್ನು ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶಿಸಿದರು ಹಾಗೂ ಫ್ಯಾಕ್ಟ್ ಸೇಲ್ಸ್ ಮ್ಯಾನೇಜರ್ ರೇವಂತ್ ಮಣ್ಣು ಮಾದರಿ ಸಂಗ್ರಹಿಸುವ ವಿಧಾನ ತೋರಿಸಿಕೊಟ್ಟರು. ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದಿಂದ 05 ರೈತ, ರೈತ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಕ್ಕಬೇವಿನಹಳ್ಳಿ ಗ್ರಾಮದ ಲಕ್ಷಿö್ಮಪುತ್ರಪ್ಪ, ಕುಂಬಳಪ್ಪ ತಂಬ್ರಳ್ಳಿ ಗ್ರಾಮ, ಕಾರೇಕಲ್ಲು ವೀರಾಪುರದ ರಾಜಶೇಖರ ರೆಡ್ಡಿ, ದಮ್ಮೂರು ಗ್ರಾಮದ ನಿರ್ಮಲ ಹಾಗೂ ಬಾದನಹಟ್ಟಿ ಗ್ರಾಮದ ಚಾನಾಳು ಕವಿತಾ ಇವರಿಗೆ ಸನ್ಮಾನಿಸಿ ಪ್ರಶಸ್ತಿಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಕೃಷಿ ವಿಸ್ತರಣಾ ವಿಜ್ಞಾನಿ ಡಾ.ನವೀನ್, ಫ್ಯಾಕ್ಟ್ ಕಂಪನಿಯ ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಪಳನಿಸ್ವಾಮಿ, ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಗೋಡೆಹಾಳ್ ಸತ್ಯನಾರಾಯಣರೆಡ್ಡಿ, ಸಮಿತಿ ಖಜಾಂಚಿ ವೈ.ಲಿಂಗಾರಾಜು, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವೈ.ಗಿರಿಗೋವಿಂದಪ್ಪ, ಕೆ.ರಾಮಣ್ಣ, ಎಸ್.ಸಮುದ್ರರಾಜ್, ವೈ.ಗೋಪಾಲರೆಡ್ಡಿ, ಕೃಷಿ ಅಧಿಕಾರಿಗಳಾದ ಜಂಬಣ್ಣ, ಜ್ಯೋತಿ, ಗಾಯಿತ್ರಿ, ಆತ್ಮ ಯೋಜನೆಯ ಸಿಬ್ಬಂದಿಗಳಾದ ಕವಿತಾ ಕುಮಾರಿ, ವಾಣಿ ಕೋರಪ್ಪಳ, ಶಿಲ್ಪಾ, ಕೃಷಿ ಸಂಜೀವಿನಿ ಸಿಬ್ಬಂದಿ ಮಣಿಕೃಷ್ಣ ಸೇರಿದಂತೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕಿನ ರೈತರು ಭಾಗವಹಿಸಿದ್ದರು. -----------