ಶುಕ್ರವಾರ, ಜನವರಿ 31, 2025

ತಾಯಿ ಕಾರ್ಡ್ ನೀಡಿ, ಪ್ರತಿದಿನ ಕಬ್ಬಿಣಾಂಶ ಮಾತ್ರೆ ಸೇವನೆ ಖಚಿತಪಡಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಗರ್ಭಿಣಿ ಮಹಿಳೆ ಎಂದು ತಿಳಿದ ಕೂಡಲೇ ಉಚಿತವಾಗಿ ತಾಯಿಕಾರ್ಡ್ ಒದಗಿಸಬೇಕು. ಪ್ರತಿದಿನ ಒಂದರAತೆ ಆರು ತಿಂಗಳು ಅವಧಿಯಲ್ಲಿ ಕನಿಷ್ಠ 180 ಕಬ್ಬಿಣಾಂಶ ಮಾತ್ರೆಗಳನ್ನು ನುಂಗುತ್ತಿರುವ ಬಗ್ಗೆ ಮನೆ ಭೇಟಿ ಮೂಲಕ ನಿರಂತರ ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದರು. ಶುಕ್ರವಾರದಂದು ಜಿಲ್ಲಾ ಪಂಚಾಯತ್ ನ ವಿಡಿಯೋ ಸಂವಾದ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈದ್ಯರು ಆರೋಗ್ಯ ತಪಾಸಣೆ ಮಾಡಿದಾಗ ರಕ್ತದಲ್ಲಿ ಕಬ್ಬಿಣಾಂಶ ಪ್ರಮಾಣ ಕುರಿತು ಗರ್ಭಿಣಿ ಮಹಿಳೆಯರಿಗೆ ಮಾಹಿತಿ ನೀಡಬೇಕು. ಕಬ್ಬಿಣಾಂಶ ಹಾಗೂ ಕ್ಯಾಲ್ಸಿಯಂ ಮಾತ್ರೆಗಳನ್ನು ನುಂಗುವುದರಿAದ ಮಗುವಿನ ಬೆಳವಣಿಗೆ ಸರಿಯಾಗಿ ಆಗುವ, ಹೆರಿಗೆ ವೇಳೆ ರಕ್ತ ಕೊರತೆಯಾಗದಿರುವ ಕುರಿತು ತಿಳಿಸಬೇಕು ಎಂದರು. ಗರ್ಭಿಣಿಯರಿಗೆ ಪ್ರತಿದಿನ ಮನೆಗೆ ತೆರಳಿ ಪೌಷ್ಟಿಕ ಆಹಾರ ಒದಗಿಸಲು ಕಾರ್ಯಯೋಜನೆ ಹಾಕಿಕೊಂಡು ಗಂಡಾAತರ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗುವಂತೆ ವೈದ್ಯಾಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು. *ಸನ್ಮಾನ:* ಗರ್ಭಿಣಿಯರ ಆರೈಕೆಯನ್ನು ಸಿಬ್ಬಂದಿಯವರ ಮೂಲಕ ಉತ್ತೇಜಿಸಲು ಪ್ರತಿ ತಿಂಗಳು ಒಬ್ಬ ಪ್ರಾಥಮಿಕ ಸುರಕ್ಷಾಧಿಕಾರಿ, ಆಶಾ ಕಾರ್ಯಕರ್ತೆಯರನ್ನು ಗುರ್ತಿಸಿ ಸನ್ಮಾನಿಸಲು ನಿರ್ಧರಿಸಿ, ಪ್ರಸ್ತುತ ತಿಂಗಳು ಟಿ.ಅರುಣಜ್ಯೋತಿ ಹಾಗೂ ಎ.ಚೌಡಮ್ಮ ಅವರಿಗೆ ಸನ್ಮಾನಿಸಲಾಯಿತು. *ಹಾವು ಕಡಿತಕ್ಕೆ ಚಿಕಿತ್ಸೆ:* ಹಾವು ಕಡಿತದ ಸಂದರ್ಭದಲ್ಲಿ ಕಡಿತಕ್ಕೊಳಗಾದವರಿಗೆ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಾರ್ಗಸೂಚಿ ಅನ್ವಯ 10 ವಾಯಿಲ್ ಆಂಟಿವೆನಮ್ ಲಸಿಕೆ ತಪ್ಪದೇ ನೀಡಬೇಕು. *ಅಂಧತ್ವಮುಕ್ತ ಬಳ್ಳಾರಿ:* ಗ್ರಾಮೀಣ ಭಾಗದಲ್ಲಿ ಅಂಧತ್ವ ಗುರ್ತಿಸಿದ ಜನತೆಯನ್ನು ತಪ್ಪದೆ ಶಸ್ತçಚಿಕಿತ್ಸೆಗೆ ಒಳಪಡಿಸಬೇಕು. ಪ್ರಸ್ತುತ ವರ್ಷ 9884 ಜನರಿಗೆ ಶಸ್ತçಚಿಕಿತ್ಸೆ ಮಾಡಲಾಗಿದ್ದು, ಖಾಸಗಿ ಅಸ್ಪತ್ರೆಗಿಂತ ಸರಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಡಿಸಲು ಸೂಚಿಸಬೇಕು. ಶಾಲೆಗಳಲ್ಲಿ ಮಕ್ಕಳಿಗೆ ದೃಷ್ಟಿದೋಷ ಪರಿಣಾಮಕಾರಿ ಗುರ್ತಿಸಬೇಕು. ಬಳಿಕ ಕನ್ನಡಕ ವಿತರಿಸಬೇಕು. *ಅಂಗಾAಗ ದಾನ ನೋಂದಣಿ:* ಜಿಲ್ಲೆಯಲ್ಲಿ ಈಗಾಗಲೇ 7092 ಅಂಗಾAಗ ದಾನ ನೋಂದಣಿ ಮಾಡಿಸಿ ರಾಷ್ಟç ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಇನ್ನೂ ನೋಂದಣಿ ಸಹ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸುವಂತೆ ಜಿಪಂ ಸಿಇಒ ಅವರು ಸೂಚಿಸಿದರು. ಅಲ್ಲದೆ ಡೆಂಗ್ಯು ಮತ್ತು ಚಿಕುನ್‌ಗುನ್ಯಾ, ಕುಟುಂಬ ಕಲ್ಯಾಣ ವಿಧಾನಗಳು, ಕ್ಷಯರೋಗ ಕಾರ್ಯಕ್ರಮ, ತಾಯಿ ಮಗುವಿನ ಆರೈಕೆ, ಮಾನಸಿಕ ಆರೋಗ್ಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಬಸವರಾಜ್ ದಮ್ಮುರು, ಡಾ.ಅರುಣ್ ಕುಮಾರ್, ಡಾ.ಭರತ್, ಡಾ.ಮಂಜುನಾಥ ಜವಳಿ, ಡಾ.ಸುರೇಶ ಕುಮಾರ್, ಡಾ.ಪ್ರಿಯಾಂಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡಿಎನ್‌ಓ ಗಿರೀಶ್, ಡಿಪಿಎಮ್ ವೆಂಕೋಬ್ ನಾಯ್ಕ್, ಮನೋಹರ, ಆಶಾಪ್ರೇಮ ಸೇರಿದಂತೆ ಇತರರು ಇದ್ದರು. --------------

ಫೆ.02 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಫೆ.02 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಬಳ್ಳಾರಿ ನಗರದ ನೆಹರು ಕಾಲೋನಿ, ಎಸ್.ಎನ್.ಪೇಟೆಯ 1ನೇ, 2ನೇ, 4ನೇ, 5ನೇ ಮತ್ತು 6ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಡಿಅಆರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ಗಡಿಗಿ ಚೆನ್ನಪ್ಪ ವೃತ್ತ, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಮತ್ತು ರೈಲ್ವೇ ಸ್ಟೇಷನ್ ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಫೆ.02 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್‌ಜೆವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಫೆ.02 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ 220/110/11ಕೆ.ವಿ ಅಲ್ಲಿಪುರ ಸ್ವೀಕರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ, ಆಲದಹಳ್ಳಿ ಕೃಷಿ ಪ್ರದೇಶಗಳು. ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶಗಳು. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ ಗ್ರಾಮಗಳು. ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಳ್ಳಿ, ಹೊನ್ನಳ್ಳಿತಾಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ನಗರದ ವಡ್ಡರಬಂಡಿ ರಸ್ತೆಯ ರಾಧಿಕಾ ಲಾಡ್ಜ್ನ ಮುಂಭಾಗ ಸುಮಾರು 40-45 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥರಾಗಿ, ಯಾವುದೋ ಖಾಯಿಲೆಯಿಂದ ಜ.31 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.5 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಅಗಲವಾದ ಮುಖ, ತಲೆಯ ಮೇಲೆ ಕಪ್ಪು ಕೂದಲು ಹಾಗೂ ಮುಖದಲ್ಲಿ ಕಪ್ಪು ಮೀಸೆ ಹೊಂದಿರುತ್ತಾರೆ. ಕಪ್ಪು ಮತ್ತು ಕೆಂಪು ಮಿಶ್ರಿತ ಟೀ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸುತ್ತಾರೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಗುರುವಾರ, ಜನವರಿ 30, 2025

ಗಂಡಾAತರ ಗರ್ಭೀಣಿ ಮಹಿಳೆಯರ ಮೇಲೆ ನಿಗಾವಹಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿನ ಗಂಡಾAತರ ಗಂಡಾAತರ ಗರ್ಭೀಣಿ ಮಹಿಳೆಯರ ಮೇಲೆ ನಿರಂತರ ನಿಗಾ ವಹಿಸುವ ಮೂಲಕ ತಾಯಿ-ಶಿಶು ಮರಣ ಸಂಭAವಿಸದAತೆ ವೈದ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ತಡೆಗಟ್ಟುವಿಕೆ ಕುರಿತ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಂಡಾAತರ ಗರ್ಭಿಣಿ ಮಹಿಳೆಯರಿಗೆ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ, ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾಕಾರ್ಯಕರ್ತೆಯರು ಮನೆ ಭೇಟಿ ಸಂದರ್ಭದಲ್ಲಿ ಸೂಚಿಸಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆಗೆಯೂ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ತಾಯಂದಿರ ಆರೈಕೆ ಕುರಿತು ಕುಟುಂಬದ ಸದಸ್ಯರಿಗೆ ತಿಳಿ ಹೇಳಬೇಕು. ಮುಖ್ಯವಾಗಿ ಚೊಚ್ಚಲು ಗರ್ಭಿಣಿ ಅವಧಿಯಲ್ಲಿ ವೈದ್ಯಕೀಯ ಕಾರಣಗಳಿಂದ ಗುರ್ತಿಸಲ್ಪಡುವ ಗಂಡಾAತರ ಗರ್ಭಿಣಿ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ವಹಿಸಲು ಆದ್ಯತೆ ನೀಡಬೇಕು. ಮಗು ಜನನದ ಬಳಿಕ ತೂಕದ ಆಧಾರದ ಮೇಲೆಯೂ ಕಾಳಜಿ ವಹಿಸುವ ಮೂಲಕ ಜಾಗ್ರತೆ ವಹಿಸಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್.ಸಂಕನೂರು ಅವರು ಮಾತನಾಡಿ, ಹೆರಿಗೆಯಾದ ನಂತರವು ನಿಗಧಿತ ಕಾಲಾವಧಿಯೊಳಗೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಕಂಡುಬAದರೂ ಸಹ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕೇವಲ ದಿನನಿತ್ಯದ ಔಷಧಿಗಳ ಶಿಫಾರಸ್ಸು ಮಾಡಬಾರದು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಪ್ರತಿ ತಿಂಗಳು 9 ಮತ್ತು 24 ತಾರೀಖಿನಂದು ಆರೋಗ್ಯ ಕೇಂದ್ರಗಳಲ್ಲಿ ಗಭೀಣಿ ಮಹಿಳೆಯರಿಗಾಗಿಯೇ ನೀಡುವ ಊಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ., ಬಿಮ್ಸ್ ತಜ್ಞರಾದ ಡಾ.ಚಂದ್ರಶೇಖರ್, ಡಾ.ಶ್ರೀಕಾಂತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ----------

ಕ್ಷಯ ಪ್ರಕರಣ ಶೂನ್ಯಕ್ಕೆ ತರಲು ಶ್ರಮಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕ್ಷಯರೋಗ ಪ್ರಕರಣಗಳನ್ನು ಶೂನ್ಯಕ್ಕೆ ತಂದು, ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕ್ಷಯರೋಗ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಾಗಲೇ ರೋಗ ಪತ್ತೆಹಚ್ಚಲು ನಗರದ ವಿಮ್ಸ್, ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬಿನ್ಯಾಟ್ ಯಂತ್ರ ಹಾಗೂ ಟ್ರುನ್ಯಾಟ್ ಮಿಷನ್‌ಗಳಿದ್ದು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಅನುಷ್ಠಾನ ಮಾಡಲಾಗಿದೆ. ಇದರಿಂದ ಕ್ಷಯ ಪೀಡಿತರನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕ್ಷಯರೋಗ ಪೀಡಿತರನ್ನು ಶೂನ್ಯಕ್ಕೆ ತರಬೇಕು ಹಾಗೂ ವಿವಿಧೆಡೆ ಸಮುದಾಯದಲ್ಲಿ ಗ್ರಾಮವಾರು ಸಮೀಕ್ಷೆ ಕಾರ್ಯ ನಡೆಸಬೇಕು. ಕ್ಷಯರೋಗಕ್ಕೆ ಸಂಬAಧಿಸಿದAತೆ ಆಯುರ್ವೇದದಲ್ಲಿ ಚಿಕ್ಸಿತೆ ನೀಡಬೇಕು. ಇದಕ್ಕೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಈ ವರ್ಷದ ಘೋಷವಾಕ್ಯ ‘ಟಿಬಿಯನ್ನು ಸೋಲಿಸಿ ದೇಶವನ್ನು ಗೆಲ್ಲಿಸಿ’ ಎಂಬುದಾಗಿದೆ ಎಂದು ತಿಳಿಸಿದರು. ಜಾಥಾವು ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭಗೊAಡು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ತಲುಪಿತು. ಜಾಥಾದಲ್ಲಿ ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು, ಮಹಾವಿದ್ಯಾಲಯದ ಪ್ರಾಧ್ಯಾಪಕರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ದಾರಿ ಉದ್ದಕ್ಕೂ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುತ್ತಾ ಸಾಗಿದರು. ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸರಳಾದೇವಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಮಾಧವ ದಿಗ್ಗಾವಿ, ಸಹಾಯಕ ಆಡಳಿತಾಧಿಕಾರಿ ಶ್ರೀನಿವಾಸ್, ಎನ್‌ಎಸ್‌ಎಸ್ ಅಧಿಕಾರಿ ಡಾ.ದೊಡ್ಡಬಸಯ್ಯ, ಆಸ್ಪತ್ರೆಯ ಸ್ಥಾಯಿ ವೈದ್ಯಾಧಿಕಾರಿಗಳಾದ ಡಾ.ಕೊಟ್ರೇಶ್, ಡಾ.ರಾಜೇಶ್, ಡಾ.ರವಿ ಚವ್ಹಾಣ್, ಡಾ.ಶಿವು ಅರಕೇರಿ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು. ------------

ಜ.30ರಿಂದ ಫೆ.13ರ ವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿರಲಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜ.30 ರಿಂದ ಫೆ.13 ರ ವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ನಗರ ಮತ್ತು ಇತರೆ ಪ್ರದೇಶಗಳಲ್ಲಿ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ವ್ಯಾಪಕ ಮಾಹಿತಿ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಬೇಕು ಎಂದರು. ಅಭಿಯಾನದಲ್ಲಿ ಮಾಡುವ ಸರ್ವೇ ಕಾರ್ಯವು ಯೋಜನಾಧಾರಿತವಾಗಿರಬೇಕು. ಸಮೀಕ್ಷೆ ಕಾರ್ಯದಲ್ಲಿ ಸ್ಥಳೀಯ ಮುಖಂಡರು ಮತ್ತು ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಹಕಾರ ಪಡೆದುಕೊಳ್ಳಬೇಕು. ಅಂದಾಗ ಮಾತ್ರ ಪ್ರಕರಣಗಳನ್ನು ಗುರುತಿಸಲು ಸಾಧ್ಯ ಎಂದು ಅವರು ನಿರ್ದೇಶನ ನೀಡಿದರು. ಕೇವಲ ಆಶಾಕಾರ್ಯಕರ್ತೆಯರು ಬೆಳಿಗ್ಗೆ ಅಥವಾ ಸಂಜೆ ಸಮಯದಲ್ಲಿ ಮನೆ-ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಬೇಕು. ಒಟ್ಟಾರೆಯಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್ ಅವರು ಮಾತನಾಡಿ, ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿರುವುದಿಲ್ಲ. ಜಿಲ್ಲೆಯ ಸಂಡೂರು ಮತ್ತು ಕುರುಗೋಡು ಭಾಗಗಳಲ್ಲಿ ಹೆಚ್ಚು ಪ್ರಕರಣ ಕಂಡುಬರುತ್ತಿದ್ದು, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸುವುದೂ ಸೇರಿದಂತೆ ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಗುವುದು ಎಂದರು. ಪಾದಗಳ ಮತ್ತು ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ ಮಚ್ಚೆಗಳು, ತ್ವಚ್ಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ನಿಕ್ಷಯಮಿತ್ರ ಯೋಜನೆ, ನಾಯಿ ಕಡಿತ, ಹಾವು ಕಡಿತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುಧೀರ್ಘ ಚರ್ಚಿಸಲಾಯಿತು. ಬಳಿಕ ರಾಷ್ಟಿçÃಯ ಕುಷ್ಠರೋಗ ನಿರ್ಮೂಲನಾ ಕುರಿತು ಪ್ರತಿಜ್ಞೆಯನ್ನು ಸ್ವೀಕರಿಸಿದರು. ನಂತರ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಭಿತ್ತಿಚಿತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. -----------

ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಪ್ರಾಮುಖ್ಯತೆ ನೀಡೋಣ: ನ್ಯಾ.ಸಿದ್ಧಲಿಂಗ ಪ್ರಭು

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ರಾಷ್ಟಿçÃಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯ ನಡೆಯಿತು. ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿ ಸ್ವಚ್ಛತೆ ಕೈಗೊಂಡರು. ಈ ವೇಳೆ ಮಾತನಾಡಿದ ಪ್ರಧಾನ ಜಿಲ್ಲಾ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ ನೆನಪಿಗಾಗಿ ರಾಷ್ಟಿçÃಯ ಸ್ವಚ್ಛತಾ ದಿನವಾಗಿ ಆಚರಿಸಲಾಗುತ್ತದೆ. ಎಲ್ಲರೂ ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಪ್ರಾಮುಖ್ಯತೆ ನೀಡೋಣ ಎಂದು ಹೇಳಿದರು. ಬಳಿಕ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಅವರು ಮಾತನಾಡಿ, ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ನಂತರ ಮಹಾತ್ಮ ಗಾಂಧೀಜಿಯವರ ಹುತಾತ್ಮರ ದಿನದ ಅಂಗವಾಗಿ ಜಿಲ್ಲಾ ನ್ಯಾಯಾಲಯದಲ್ಲಿ ಭಜನೆ ಮತ್ತು ಮೌನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಮಾತನಾಡಿ, ಸ್ವಚ್ಛತೆಯು ಆರೋಗ್ಯಕರ ಮತ್ತು ಗುಣಮಟ್ಟದ ಜೀವನದ ಅವಿಭಾಜ್ಯ ಅಂಗವಾಗಿದ್ದು, ಹಾಗಾಗಿ ನಾವೆಲ್ಲರೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳೋಣ ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಜಿ.ಪ್ರಮೋದಾ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಅಮೀತ್ ಘಟ್ಟಿ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಈರಪ್ಪ ದವಳೇಶ್ವರ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಣ್ಣಹನಮಗೌಡ, 4ನೇ ಅಪರ ಸಿವಿಲ್ ನ್ಯಾಯಾಧೀಶರಾದ ರೂಪ ಚಿನಿವಾರ, 5ನೇ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. -----------

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ) ಕುಡುತಿನಿ ಪಟ್ಟಣದ ಬಳಿಗೇರೆ ತಿಪ್ಪೆ ಏರಿಯಾ ಹತ್ತಿರದ ನಿವಾಸಿ ಗುಡಿ ಅಮರೇಶಯ್ಯ ಎನ್ನುವ 58 ವರ್ಷದ ವ್ಯಕ್ತಿಯು 2023 ಸೆ.07 ರಂದು ಕಾಣೆಯಾಗಿರುವ ಕುರಿತು ಕುಡತಿನಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.3 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕುತ್ತಿಗೆ ಹಿಂಭಾಗದಲ್ಲಿ ಕಪ್ಪು ಮಚ್ಚೆ ಇದ್ದು ಹಾಗೂ ತಲೆಯ ಮುಂಭಾಗದಲ್ಲಿ ತಲೆ ಕೂದಲು ಇರುವುದಿಲ್ಲ, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಚೆಕ್ಸ್ ಲುಂಗಿ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಡುತಿನಿ ಪೋಲಿಸ್ ಠಾಣೆಯ ಪಿಎಸ್‌ಐ ದೂ.9480803078 ಅಥವಾ ಬಳ್ಳಾರಿ ಪೋಲಿಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಬುಧವಾರ, ಜನವರಿ 29, 2025

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ ತಂಬಾಕು ದುಷ್ಪರಿಣಾಮ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ತಂಬಾಕು ಬಳಕೆ ಗಣನೀಯ ನಿಯಂತ್ರಣಕ್ಕಾಗಿ ಶಾಲಾ ಕಾಲೇಜುಗಳು ಸೇರಿದಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ತಂಬಾಕಿನಿAದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಜಾರಿಗೆ ತರಬಹುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು. ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವು ಸಹ ತಂಬಾಕು ಉತ್ಪನ್ನಗಳನ್ನು ಉಪಯೋಗಿಸುತ್ತಿದ್ದಾರೆ. ಇದರಿಂದ ಅವರ ಭವಿಷ್ಯವು ಹಾಳಾಗುತ್ತಿದ್ದು, ಇದರ ಕುರಿತು ಜಿಲ್ಲಾ ಪಂಚಾಯತ್ ಹಾಗೂ ಇತರೆ ಇಲಾಖೆಗಳ ಸಹಕಾರದೊಂದಿಗೆ ಹಳ್ಳಿಗಳಲ್ಲಿಯೂ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು. ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಮುಂಭಾಗದಲ್ಲಿ ಕೋಟ್ಪಾ-2003ರ ಸೆಕ್ಷನ್-4 ಮತ್ತು ಸೆಕ್ಷನ್-6ಬಿ ನಾಮಫಲಕಗಳನ್ನು ಕಡ್ಡಾಯವಾಗಿ ಆಳವಡಿಸಬೇಕು ಎಂದು ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಹಲವಾರು ರೀತಿಯ ಕೈಗಾರಿಕೆಗಳಿವೆ. ಈಗಾಗಲೇ ಸಾಕಷ್ಟು ವಿವಿಧ ರೀತಿಯಲ್ಲಿ ಮಾಲಿನ್ಯವಾಗುತ್ತಿದ್ದು, ತಂಬಾಕು ಬಳಕೆಯಿಂದ ಶ್ವಾಸಕೋಶ ಸಂಬAಧಿತ ರೋಗಗಳು ಬರುತ್ತಿದ್ದು, ಕೈಗಾರಿಕೆ ವಲಯಗಳಲ್ಲಿಯೂ ಸಹ ತಂಬಾಕು ಕುರಿತಾಗಿ ಅರಿವು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಮಾತನಾಡಿ, ಬಳ್ಳಾರಿ ನಗರದ ಆಂಧ್ರಾಳ್ ಬೈಪಾಸ್ ರಸ್ತೆಯ ವಿಕ್ಟೋರಿಯಾ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಧೂಮಪಾನ ಪ್ರದೇಶ ಸ್ಥಾಪಿಸಿದ್ದು, ಆದರೆ ಸರಿಯಾಗಿ ನಿರ್ವಹಣೆ ಮಾಡಿರುವುದಿಲ್ಲ ಎಂದು ಸಭೆಗೆ ತಿಳಿಸಿದರು. ಈ ಕುರಿತು ಕೂಡಲೇ ನೋಟಿಸ್ ಜಾರಿ ಮಾಡಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ನಾಮಫಲಕ ಅಳವಡಿಸುವುದರ ಜೊತೆಗೆ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ಅಬಕಾರಿ ಇಲಾಖೆಯವರಿಗೆ ಸೂಚನೆ ನೀಡಿದರು. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಬೇಕು ಎಂದು ಸೂಚಿಸಿದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು, ಬಸ್‌ಗಳ ಮೇಲೆ ಅಂಟಿಸಲಾಗಿರುವ ತಂಬಾಕು ಉತ್ಪನ್ನಗಳಾದ ಪಾನ್ ಮಸಾಲ ಬಳಕೆಯ ಪ್ರಚೋದಕ ಜಾಹೀರಾತುಗಳನ್ನು ಹಾಕಲು ಅನುಮತಿ ಯಾರು ನೀಡಿದರು? ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಖಾಸಗಿಯವರಾಗಿದ್ದರೂ ಅವರೊಂದಿಗೆ ಚರ್ಚಿಸಿ ಕೂಡಲೇ ತೆರವುಗೊಳಿಸಲು ನಿರ್ದೇಶನ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಾಟಕ ಕಾರ್ಯಕ್ರಮವಾದ ‘ತಿಂಗಳು ಸೊಬಗು’ ಕಾರ್ಯಕ್ರಮದಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮನ್ವಯತೆ ಸಾಧಿಸಿ ಎಂದು ಅಪರ ಜಿಲ್ಲಾಧಿಕಾರಿಯವರು ಸಲಹೆ ನೀಡಿದರು. ಈ ಬಾರಿಯ ಜಿಲ್ಲೆಯ ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಈ ಕುರಿತು ಕ್ರಮ ವಹಿಸಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಕೋಟ್ಪಾ-2003ರ ಕಾಯ್ದೆಯ ಸೆಕ್ಷನ್-4, ಮತ್ತು ಸೆಕ್ಷನ್ 6ಎ ರ ಕಾನೂನಿನ ಬಗ್ಗೆ ಮತ್ತು ವಿಧಿಸುವ ದಂಡ, ಅಂಗಡಿಯವರು ಹಾಕಬೇಕಾದ ಬೋರ್ಡ್ಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ----------

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೀಸಲಾತಿವಾರು ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಈಗಾಗಲೇ ತಾತ್ಕಾಕಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗೆ ನಿಗಧಿತ ಅವಧಿಯೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಮೀಸಲಾತಿ ಮತ್ತು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ------------

ಜ.30 ರಂದು ಜಿಲ್ಲಾ ನ್ಯಾಯಾಲಯದಲ್ಲಿ ‘ಸ್ವಚ್ಛತಾ ದಿನಾಚರಣೆ’ ಕಾರ್ಯಕ್ರಮ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ “ಪರಿಸರವನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿಸೋಣ” ಎಂಬ ಘೋಷ ವಾಕ್ಯದೊಂದಿಗೆ ಜ.30 ರಂದು ಬೆಳಿಗ್ಗೆ 9 ಗಂಟೆಗೆ ನಗರದ ತಾಳೂರು ರಸ್ತೆಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ‘ಸ್ವಚ್ಛತಾ ದಿನಾಚರಣೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ. -----------

ಜ.30 ರಂದು ‘ಕ್ಷಯರೋಗ ಜಾಗೃತಿ ಜಾಥಾ’

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಘಟಕ ಇವರ ಸಹಯೋಗದಲ್ಲಿ ಜ.30 ರಂದು ಬೆಳಿಗ್ಗೆ 9.30 ಗಂಟೆಗೆ ‘ಕ್ಷಯರೋಗ ಜಾಗೃತಿ ಜಾಥಾ’ವನ್ನು ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಜಾಥಾಗೆ ಚಾಲನೆ ನೀಡುವರು. ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭವಾಗಿ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದವರೆಗೆ ನಡೆಯಲಿದೆ ಎಂದು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಫೆ.01 ರಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಲೋಕೋಪಯೋಗಿ ಇಲಾಖೆ ಬಳ್ಳಾರಿ ವಿಭಾಗದ ವತಿಯಿಂದ ಫೆ.01 ರಂದು ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಲೋಕೋಪಯೋಗಿ ಇಲಾಖೆ ಬಳ್ಳಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ. --------

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ನಡೆಯುವ “ಅಂತರಾಷ್ಟಿçÃಯ ಮಹಿಳಾ ದಿನಾಚರಣೆ” ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಚಲಿತ ವಿದ್ಯಮಾನಗಳಿಂದ ಮಹಿಳಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿರುವAತಹ ಹಾಗೂ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡAತಹ ಮತ್ತು ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ “ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ” ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಈ ವಿವಿಧ ಕ್ಷೇತ್ರಗಳಲ್ಲದೇ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ “ವೀರಮಹಿಳೆ” ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ. ಅರ್ಹ ಮಹಿಳೆಯರು ನಿಗದಿತ ನಮೂನೆ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ನಗರದ ಎಸ್‌ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ.05 ಕೊನೆಯ ದಿನವಾಗಿದೆ. *ಷರತ್ತುಗಳು:* 18 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 1 ರಿಂದ ಡಿಸೆಂಬರ್ 31ರ ಒಳಗೆ ಇರಬೇಕು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ. ----------

ಕೆಕೆಆರ್‌ಡಿಬಿ ಮಂಡಳಿಯಿAದ ಇತಿಹಾಸ ಕುರಿತು ಪುಸ್ತಕ ಪ್ರಕಟಣೆ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ):
ಯು ಕಲ್ಯಾಣ ಕರ್ನಾಟಕದ ಭಾಷೆ, ಸಾಹಿತ್ಯ, ಸಾಮರಸ್ಯ ಸಂಸ್ಕೃತಿ, ಶೋಷಿತರ-ಮಹಿಳೆಯರ ಸ್ಥಿತಿಗತಿ, ಸ್ವಾತಂತ್ರ‍್ಯ ಚಳುವಳಿ, ಸಾಮಾಜಿಕ ಚಳುವಳಿಗಳು, 371ನೇ ಕಲಂ ಹೋರಾಟ ಮತ್ತು ಅನುಷ್ಠಾನ, ಸಾಧಕ-ಬಾಧಕಗಳು, ಭವಿಷ್ಯದಲ್ಲಿ ಅಭಿವೃದ್ಧಿಪರ ಹಮ್ಮಿಕೊಳ್ಳಬೇಕಾದ ಯೋಜನೆಗಳ ಸೇರಿದಂತೆ ಒಟ್ಟಾರೆ ಇತಿಹಾಸದ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತಾರಾಷ್ಟಿçÃಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರಲು ಯೋಚಿಸಿದ್ದು, ಇದಕ್ಕಾಗಿ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನಿಸಿದೆ. ಪ್ರಾಚೀನ, ಮಧ್ಯಕಾಲಿನ, ಆಧುನಿಕ ರಾಜ್ಯಾಡಳಿತ ಸೇರಿದಂತೆ, ಸಂಸ್ಥಾನಿಕರ ಕಾಲಘಟ್ಟದ ಇತಿಹಾಸ, ರಾಜ್ಯಶಾಹಿ ವ್ಯವಸ್ಥೆಯಿಂದ ಪ್ರಜಾಶಾಹಿ ಭಾರತದಲ್ಲಿ ವಿಲೀನಘಟ್ಟ, ಏಕೀಕರಣ ಚಳುವಳಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಘಟ್ಟಗಳು, ಸಾಮಾಜಿಕ ಚಳುವಳಿಗಳು, ಸತ್ಯಶೋಧನಾ ಸಮಿತಿ ವರದಿ, ಫಜಲ್ ಅಲಿ ಆಯೋಗದ ವರದಿ, ಧರ್ಮಸಿಂಗ್ ಸಮಿತಿ ವರದಿ, ಬಚಾವತ್ ಆಯೋಗದ ವರದಿ, ನಂಜುAಡಪ್ಪ ಆಯೋಗದ ವರದಿಗ ಅಧ್ಯಯನ, ಮಾನವ ಅಭಿವೃದ್ಧಿ, ಮಾಧ್ಯಮ, ಪ್ರಾದೇಶಿಕ ಅಸಮತೋಲನೆ, ಈ ಭಾಗದ ಉಡುಗೆ ತೊಡುಗೆ, ಆಹಾರ, ಪರಿಸರ, ಖನಿಜಸಂಪತ್ತು, ಅಲೆಮಾರಿ, ಕಲೆ, ಅರಣ್ಯ, ವಿಜ್ಞಾನ, ತಂತ್ರಜ್ಞಾನ, ನೀರಾವರಿ, ಕೈಗಾರಿಕೆ, ವಾಣಿಜ್ಯ, ಸಾರಿಗೆ, ರಸ್ತೆ ಸಂಪರ್ಕ, ಕ್ರೀಡೆ ಕ್ಷೇತ್ರಗಳ ಕುರಿತು ರಾಷ್ಟç-ಅಂತರಾಷ್ಟಿçÃಯ ಮಟ್ಟದಲ್ಲಿ ಸಂಶೋಧನೆ ಮಾಡಿರುವ ವಿದ್ವಾಂಸರಿAದ ಒಂದು ನೂರು ಪುಸ್ತಕಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಸಿ ಪ್ರಕಟಿಸಲಾಗುತ್ತಿದೆ. ಈ ಯೋಜನೆಯಲ್ಲಿ ಸಂಶೋಧನಾತ್ಮಕ ಪುಸ್ತಕ ಬರೆಯುವ ಆಸಕ್ತಿ ಇರುವವರು ತಾವು ಪುಸ್ತಕ ಬರೆಯಬಹುದಾದ ಕ್ಷೇತ್ರ, ವಿಷಯ, ಶೀರ್ಷಿಕೆಗಳನ್ನು ಸ್ಪಷ್ಟವಾಗಿ ಬರೆದು ಐದು ಪುಟಗಳಿಗೆ ಮೀರದಂತೆ ಸಾರಲೇಖಗಳನ್ನು ಫೆಬ್ರವರಿ 20 ರೊಳಗೆ ಕಾರ್ಯದರ್ಶಿಗಳು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, 'ಅಭಿವೃದ್ಧಿ ಭವನ' ಐವಾನ-ಏ-ಶಾಹಿ, ಕಲಬುರಗಿ-585102 ವಿಳಾಸಕ್ಕೆ ಅಂಚೆ ಮೂಲಕ / ಖುದ್ದಾಗಿ ಅಥವಾ ಇಮೇಲ್ ವಿಳಾಸ kketihasa@gmail.com ಮೂಲಕವೂ ಸಲ್ಲಿಸಬಹುದು. ಸಾರಲೇಖವು ಆಯ್ದ ಕ್ಷೇತ್ರಗಳಲ್ಲಿ, ಆಯ್ದ ವಿಷಯಕ್ಕೆ ಸಂಬAಧಿಸಿದ ಇದುವರೆಗಿನ ಅಧ್ಯಯನಗಳು, ಸಿದ್ದಾಂತಗಳ ಅನ್ವಯ, ಅಧ್ಯಯನ ಕ್ಷೇತ್ರದ ಸಧ್ಯದ ಪರಿಸ್ಥಿತಿ, ಪ್ರಸ್ತುತ ಅಧ್ಯಯನಕ್ಕೆ ಬಳಸಿಕೊಳ್ಳುವ ಸಿದ್ದಾಂತ ಮತ್ತು ವಿಧಾನಗಳು, ಅವುಗಳ ಸಮರ್ಪಕತೆ, ಆಯ್ದುಕೊಂಡ ವಿಷಯದ ಅಧ್ಯಯನದ ಫಲಿತಗಳು, ಸಾಮಾಜಿಕ ಉಪಯೋಗಗಳು ಇವುಗಳನ್ನು ಒಳಗೊಂಡಿರಬೇಕು. ಸೂಚಕ ಪದಗಳು ಮತ್ತು ಅವಶ್ಯ ಸಂದರ್ಭಗ್ರAಥಗಳು ಕಡ್ಡಾಯವಾಗಿ ಇರಬೇಕು. ಸಲ್ಲಿಕೆಯಾದ ಸಾರಾಲೇಖಗಳನ್ನು ಪರಿಶೀಲನಾ ಸಮಿತಿ ಆಯ್ಕೆ ಮಾಡಲಿದ್ದು, ಸಮಿತಿಯ ನಿರ್ಣಯವೆ ಅಂತಿಮವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9844615020 ಗೆ ಸಂಪರ್ಕಿಸಬಹುದು ಎಂದು ಕೆಕೆಆರ್‌ಡಿಬಿ ಮಂಡಳಿಯ ಉಪ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಮಗುವಿಗೆ ದಡಾರ ರೂಬೆಲ್ಲಾ ಲಸಿಕೆ ತಪ್ಪದೇ ಹಾಕಿಸಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಮಗುವಿಗೆ ಒಂಬತ್ತು ತಿಂಗಳು ತುಂಬಿದ ನಂತರ ದಡಾರ ರೂಬೆಲ್ಲಾ ಲಸಿಕೆ ತಪ್ಪದೇ ಹಾಕಿಸಬೇಕು. ದಡಾರ(ಅಮ್ಮ) ದಿಂದಾಗುವ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಬೇಕು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಗುಗ್ಗರಹಟ್ಟಿ ವ್ಯಾಪ್ತಿಯ ಕಾಕರ್ಲತೋಟದ ಹನುಮಾನ ನಗರ, ವೆಂಕಟಮ್ಮ ಕಾಲೋನಿ, ಗುರಪ್ಪ ತೋಟ ಬಡಾವಣೆಗಳಲ್ಲಿ ದಡಾರ ರೂಬೆಲ್ಲಾ ಲಸಿಕೆ ಹಾಕಿಸಲು ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಡು ಭಾಷೆಯಲ್ಲಿ ಅಮ್ಮ, ತಟ್ಟು ಎಂದು ಕರೆಯುವ ದಡಾರವನ್ನು ನಿರ್ಮೂಲನೆ ಮಾಡಲು ಮತ್ತು ಮಕ್ಕಳಿಗೆ ದಡಾರ ಕಂಡುಬAದರೂ ಮಕ್ಕಳಿಗೆ ಗಂಭೀರ ಆರೋಗ್ಯ ಸಮಸ್ಯೆ ತರಬಹುದಾದುದನ್ನು ತಪ್ಪಿಸಲು ತಪ್ಪದೇ ದಡಾರ ಲಸಿಕೆ ಹಾಕಿಸಬೇಕು ಎಂದು ಜನತೆಗೆ ಮನವಿ ಮಾಡಿದರು. ತಪ್ಪು ನಂಬಿಕೆಗಳಿAದ ಲಸಿಕೆ ಪಡೆಯದ ಕುಟುಂಬಗಳ ಪಾಲಕರಿಗೆ ಜಾಗೃತಿ ನೀಡಿಲಾಗುತ್ತಿದೆ. ವಲಸೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ 12 ಮಾರಕ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಯಸ್ಸಿಗನುಸಾರವಾಗಿ ನೀಡುವ ಲಸಿಕೆಗಳನ್ನು ಹಾಕಲಾಗುತ್ತಿದ್ದು, ಪ್ರತಿ ಗುರುವಾರ ನಿಮ್ಮ ಹತ್ತಿರದ ನಗರ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಲಸಿಕೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ.ಆರ್.ಎಸ್.ಶ್ರೀಧರ ಅವರು ಮಾತನಾಡಿ ನೆರೆಯ ದೇಶಗಳಾದ ಪಾಕಿಸ್ಥಾನ, ಅಫಘಾನಿಸ್ಥಾನಗಳಲ್ಲಿ ಇಂದಿಗೂ ಪೋಲಿಯೊ ಪ್ರಕರಣಗಳು ಕಂಡು ಬರುತ್ತಿದ್ದು, ಇಂದು ಜನರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ದುಡಿಮೆ, ಪ್ರವಾಸ, ವ್ಯಾಪಾರ ಮುಂತಾದ ಉದ್ದೇಶಗಳಿಗೆ ಹೆಚ್ಚು ಪ್ರಯಾಣ ಮಾಡುತ್ತಿದ್ದು, ಈ ದಿಶೆಯಲ್ಲಿ ಎಲ್ಲ ಲಸಿಕೆಗಳನ್ನು ತಪ್ಪದೇ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಈ ಸಂಧರ್ಭದಲ್ಲಿ ಡಾ.ಕಾಶೀಪ್ರಸಾದ್, ಡಾ.ಶಗುಪ್ತಾ ಶಾಹೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಐಎಫ್‌ವಿ ಕೋಟೇಶ್ವರ ರಾವ್, ಬಿಹೆಚ್‌ಇಓ ಶಾಂತಮ್ಮ, ತಾಲ್ಲೂಕು ಆಶಾ ಮೇಲ್ವಿಚಾರಕಿ ನೇತ್ರಾ, ಸಿಬ್ಬಂದಿಯವರಾದ ಅಮೀನಾ ಬೀ, ನಿರಂಜನ್ ಪತ್ತಾರ್, ಈರಯ್ಯ, ಉಮಾ ಮಹೇಶ್ವರಿ.ಎನ್., ಮಂಜುಳಾ, ಉಮಾ ಮಹೇಶ್ವರಿ.ಈ., ಜ್ಯೋತಿ, ಅರುಣಾ, ಗಂಗಾಧರ್ ಸೇರಿದಂತೆ ಆಶಾ ಕಾರ್ಯಕರ್ತೆಯರು ತಾಯಂದಿರು ಉಪಸ್ಥಿತರಿದ್ದರು. ದಡಾರದ ಲಕ್ಷಣಗಳು: ದೇಹದ ಮೇಲೆ ನುಚ್ಚು ಗುಳ್ಳೆಗಳು, ಜ್ವರ, ಕೆಮ್ಮು, ಮೂಗಿನಿಂದ ಸುರಿಯುವುದು ಅಥವಾ ಕಣ್ಣು ಕೆಂಪಾಗುವುದು, ಅಪೌಷ್ಟಿಕತೆಯುಳ್ಳ ಮಕ್ಕಳಿಗೆ ಬೇಗ ರೋಗ ಉಲ್ಭಣವಾಗುವುದು. ವಾಂತಿ ಬೇಧಿ, ನ್ಯೂಮೋನಿಯಾ ಅಗಿ ಮಗು ಮರಣ ಹೊಂದಬಹುದಾದ ಸಂಭವವಿರುತ್ತದೆ. ----------

‘ಬAಜಾರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ ಕಲಾ ಮಳಾವೋ’- ಕಲಾವಿದರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಬಂಜಾರರ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ ಬೆಳೆಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ‘ಬಂಜಾರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ ಕಲಾ ಮಳಾವೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಂಜಾರ ಸಮುದಾಯದ ಬಹುಮುಖಿ ಕಲಾ ಪ್ರಕಾರಗಳಾದ ವಾಜಾ ವಾದ್ಯ ಕಲೆ, ಕಥನ ಗಾಯನ(ಸಣ್ಣ ವಾಜಾ), ಲೆಂಗಿ ನೃತ್ಯ, ನಂಗಾರಾ ಠೋಳಿ ಬಿಡಿಸುವ ನೃತ್ಯ, ಮಹಿಳೆಯರ ಸಾಂಪ್ರದಾಯಿಕ ನೃತ್ಯ, ಘೂಮರ್ ನೃತ್ಯ, ಮಹಿಳೆಯ ಜಾನಪದ ನೃತ್ಯ, ಮಹಿಳೆಯರ ಸಾಂಪ್ರದಾಯಿಕ ಗಾಯನ ಮತ್ತು ನೃತ್ಯ, ಬಂಜಾರ ಸುಗಮ ಸಂಗೀತ, ಬಾಲಕಿಯರ ನೃತ್ಯ, ಬಾಲಕರ ನೆಂಗಿ ನೃತ್ಯ, ಬಾಲಕರ ಮತ್ತು ಬಾಲಕಿಯರ ಆಧುನಿಕ ನೃತ್ಯ ಮತ್ತು ಮಹಿಳೆಯರ ಹವೆಲಿ, ಡಾವಲೋ ಪ್ರಕಾರಗಳಲ್ಲಿ ಭಾಗವಹಿಸಬಹುದು. ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಕೊಪ್ಪಳ ವಲಯ ಕಚೇರಿ ವಿಳಾಸಕ್ಕೆ ಕಳುಹಿಸಬೇಕು. ಈ ಹಿಂದೆ ನಿಗಮದಿಂದ ನಡೆದ ಎಲ್ಲಾ ಕಲಾ ಮಳವೋ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನ ಪಡೆದ ಕಲಾ ತಂಡಗಳ ಕಲಾವಿದರು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.08539-220842 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ವಲಯ ಕಚೇರಿಯ ವಲಯ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ: ಅರ್ಜಿ ಆಹ್ವಾನ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಕುಡತಿನಿ ಪಟ್ಟಣ ಪಂಚಾಯಿತಿ ವತಿಯಿಂದ 2021-22ನೇ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಯೋಜನೆಯ ಉಳಿತಾಯ ಮೊತ್ತದಡಿ ಪಟ್ಟಣ ಪಂಚಾಯಿತಿ ನಿಧಿಯಲ್ಲಿ ಶೇ.5 ರ ವೈಯಕ್ತಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಅನುದಾನದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯಿಂದ ಅರ್ಜಿ ಪಡೆದು ಎಲ್ಲಾ ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿ ಮಾಡಿ ಫೆ.12 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ಕುಡಿತಿನಿ ಕಚೇರಿಗೆ ಸಂಪಕಿಸಬಹುದು ಎಂದು ಕುಡತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಮಂಗಳವಾರ, ಜನವರಿ 28, 2025

ಬೆಂಬಲ ಯೋಜನೆಯಡಿ ಕಡಲೇಕಾಳು ಉತ್ಪನ್ನ ಖರೀದಿ

ಬಳ್ಳಾರಿ,ಜ.28(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಖರೀದಿಸಲಾಗುತ್ತಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.5,650 ರಂತೆ ರೈತರಿಂದ ಖರೀದಿಸಲಾಗುತ್ತದೆ. *ಖರೀದಿ ಕೇಂದ್ರಗಳು:* ಬಳ್ಳಾರಿ ನಗರದ ಎಸ್‌ಪಿ ವೃತ್ತದ ಹತ್ತಿರದ ಮಾರುತಿ ನಗರದ 2ನೇ ಕ್ರಾಸ್‌ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9900559927). ಸಿರುಗುಪ್ಪ ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಕಟ್ಟಡದ ಪಶು ಆಸ್ಪತ್ರೆ ಪಕ್ಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಮೊ.9845166601). *ಬೇಕಾದ ದಾಖಲೆ:* ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು. ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಕಡಲೇಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು. ನಿಗಧಿತ ಅವಧಿಯೊಳಗೆ ನೋಂದಾಯಿಸಿಕೊAಡ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್‌ನಿAದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಕಡಲೇಕಾಳು ಉತ್ಪನ್ನವನ್ನು 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ. ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ವಿವಿಧ ವಾರ್ಡ್, ಕೊಠಡಿ ಉದ್ಘಾಟಿಸಿದ ಶಾಸಕ ಬಿ.ಎಂ.ನಾಗರಾಜಆರೋಗ್ಯ ಇಲಾಖೆಯಲ್ಲಿ ದೊರಕುವ ಗುಣಮಟ್ಟ ಸೇವೆ ಪಡೆದುಕೊಳ್ಳಲು ಕರೆ

ಬಳ್ಳಾರಿ,ಜ.28(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ‘ನಿಮ್ಮ ಆರೋಗ್ಯ ನಮ್ಮ ಬದ್ದತೆ’ ಎಂಬ ಧ್ಯೇಯ ವಾಕ್ಯದಡಿ ಸಮುದಾಯಕ್ಕೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ ಅವರು ಹೇಳಿದರು. ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ 48.25 ಲಕ್ಷ ಅನುದಾನದಡಿ ಸಿರುಗುಪ್ಪ ತಾಲ್ಲೂಕಿನ ಕರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಲಾದ ಹೆಚ್ಚುವರಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಾರ್ಡ್, ವೈದ್ಯರ ಕೊಠಡಿ, ಚುಚ್ಚುಮದ್ದು ಕೊಠಡಿ, ಔಷಧಿ ವಿತರಣೆ ಕೊಠಡಿಗಳನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಸ್ಪತ್ರೆಗಳಲ್ಲಿ ಸುಸಜ್ಜಿತ ಉಪಕರಣಗಳು ನುರಿತ ವೈದ್ಯರು ಹಾಗೂ ಸಿಬ್ಬಂದಿ ಒದಗಿಸಿದ್ದು, ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಸುಸಜ್ಜಿತ ಕಟ್ಟಡಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ನಡೆಯುತ್ತಿವೆ. ಇದು ನಿಮ್ಮ ಆಸ್ಪತ್ರೆ ಎಂಬ ಭಾವನೆಯೊಂದಿಗೆ ಜನತೆಯು ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬೇಕು. ಇನ್ನು ಹೆಚ್ಚಿನ ರೀತಿಯಲ್ಲಿ ಮೂಲಭೂತ ಸೌಲಭ್ಯ ಒದಗಿಸುವ ಕಾರ್ಯಗಳಿಗೆ ಬೆಂಬಲಿಸಬೇಕು ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳು ಹತ್ತಿರದಲ್ಲೇ ದೊರೆಯುವುದರಿಂದ ಅನಗತ್ಯ ಆರ್ಥಿಕ ಹೊರೆ ತಪ್ಪಿಸುವ ಕಾರ್ಯ ಸರ್ಕಾರ ಮಾಡುತ್ತಿದೆ ಎಂದು ಅವರು ತಿಳಿಸಿದರು. ಹಳೆ ಕಟ್ಟಡಗಳನ್ನು ತೆರೆವುಗೊಳಿಸಿ ಹೊಸ ಕಟ್ಟಡಗಳ ನಿರ್ಮಾಣ ಮತ್ತು ಅಗತ್ಯ ಇರುವ ಆಸ್ಪತ್ರೆಗಳಿಗೆ ಸುಸಜ್ಜಿತ ಉಪಕರಣಗಳನ್ನು ಒದಗಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಕಾರ್ಯಕ್ಕೆ ನಿರಂತರವಾಗಿ ಕಾರ್ಯಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈಗಾಗಲೇ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇಲ್ಲದಂತೆ ಸರ್ಕಾರವು ಕ್ರಮವಹಿಸಿದ್ದು, ಅಗತ್ಯ ಇರುವ ಆರೋಗ್ಯ ಕೇಂದ್ರಗಳಿಗೆ ನಿಯಮಾನುಸಾರ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತಲಿದೆ. ಮುಂದಿನ ದಿನಗಳಲ್ಲಿ ಸಿರುಗುಪ್ಪ ತಾಲ್ಲೂಕಿನಲ್ಲಿಯೇ ಹೆರಿಗೆಗಾಗಿ ತಾಯಿ ಮಗುವಿನ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಶಾಸಕರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ..ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರ ಆರೈಕೆಗೋಸ್ಕರ ಹೆರಿಗೆ ದಿನಾಂಕದ 3 ದಿನ ಮೊದಲು ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ಗರ್ಭಿಣಿಯರಲ್ಲಿರುವ ಆರೋಗ್ಯ ಸಮಸ್ಯೆಗಳನ್ನು ಗುರ್ತಿಸಿ ಸರಳ ಹೆರಿಗೆ ಕೈಗೊಳ್ಳಲು ಅಥವಾ ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸಲು ಸಹಾಯಕವಾಗಲಿದೆ ಎಂದರು. ರಕ್ತಹೀನತೆ ಇರುವವರಿಗೆ ಎಫ್.ಸಿ.ಎಮ್ ಹಾಗೂ ಐರನ್ ಸುಕ್ರೋಸ್ ಚುಚ್ಚಮದ್ದು ಉಚಿತವಾಗಿ ನೀಡಲಾಗುತ್ತಿದ್ದು, ಪ್ರತಿ 9 ಮತ್ತು 24 ರಂದು ಪ್ರಧಾನಮಂತ್ರಿ ಮಾತೃತ್ವ ಅಭಿಯಾನದಡಿ ತಪಾಸಣೆಯೊಂದಿಗೆ ಪೌಷ್ಠಿಕ ಆಹಾರದ ಬೆಂಬಲವಾಗಿ ಊಟದ ವ್ಯವಸ್ಥೆ ಸಹ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಮ್ಮ, ಸ್ಥಳದಾನಿಗಳಾದ ರಂಗಾರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ವೀರೇಶ ಗೌಡ, ವಿರುಪಾಕ್ಷಿ ಗೌಡ, ಬದ್ರಿ ಗೌಡ, ಆಡಳಿತ ವೈದ್ಯಾಧಿಕಾರಿ ಡಾ.ಸುನಿಲ್, ಜನಾರೋಗ್ಯ ಸಮಿತಿ ಸದಸ್ಯರು ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಸನ್ಮಾನ: ಸ್ಥಳದಾನಿಗಳಾದ ರಂಗಾರೆಡ್ಡಿ ಹಾಗೂ ಕುಟುಂಬದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. -----------

ವಿವಿಧೆಡೆ ದಾಳಿ: ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ,ಜ.28(ಕರ್ನಾಟಕ ವಾರ್ತೆ): ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಸಿರುಗುಪ್ಪ ಪಟ್ಟಣದ ಆದೋನಿ ರೋಡ್, ದೇಶನೂರು ರಸ್ತೆ, ಸಿಂಧನೂರು ರಸ್ತೆ, ಬಳ್ಳಾರಿ ರಸ್ತೆ ಮತ್ತು ಇತರೆ ಸ್ಥಳಗಳಲ್ಲಿ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಇತ್ಯಾದಿ ಉದ್ದಿಮೆಗಳ ಮೇಲೆ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರಡಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಅಧಿಕಾರಿಗಳ ತಂಡದೊAದಿಗೆ ದಾಳಿ ನಡೆಸಲಾಗಿದೆ. ಒಟ್ಟು 03 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಶಿಕ್ಷಣ ಇಲಾಖೆಗೆ ಒಪ್ಪಿಸಿ ಸಂಬAಧಿಸಿದ ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಮತ್ತು ಪೋಸ್ಟರ್ ನೀಡಿ ಜಾಗೃತಿ ಮೂಡಿಸಲಾಯಿತು. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ತಹಶೀಲ್ದಾರ ವಿಶ್ವನಾಥ್, ಶಿಕ್ಷಣ ಇಲಾಖೆಯ ಸುರೇಶ್, ಕಂದಾಯ ನಿರೀಕ್ಷಕ ಬಿ.ಟಿ. ಮಂಜುನಾಥ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಆನಂದ್ ಮತ್ತು ಚಂದ್ರಕಳ ಹಾಜರಿದ್ದರು. ----------