ಬುಧವಾರ, ಜನವರಿ 1, 2025
ಜ.02 ರಂದು ‘ಮಕ್ಕಳೊಂದಿಗೆ ಮುಕ್ತ ಸಂವಾದ ಮತ್ತು ಆಹವಾಲು ಸ್ವೀಕಾರ ಕಾರ್ಯಕ್ರಮ’
ಬಳ್ಳಾರಿ,ಜ.01(ಕರ್ನಾಟಕ ವಾರ್ತೆ):
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜ.02 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ‘ಮಕ್ಕಳೊಂದಿಗೆ ಮುಕ್ತ ಸಂವಾದ ಮತ್ತು ಆಹವಾಲು ಸ್ವೀಕಾರ ಕಾರ್ಯಕ್ರಮ’ ಏರ್ಪಡಿಸಲಾಗಿದೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಎಸ್‌ಜೆಪಿಯು ಘಟಕದ ನೊಡೆಲ್ ಅಧಿಕಾರಿಯೂ ಆದ ಎಎಸ್ಪಿ ರವಿಕುಮಾರ್.ಕೆ.ಪಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್., ಶಾಲಾ ಶಿಕ್ಷಣಾ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಜಿಲ್ಲಾ ಕಾರ್ಮಿಕಾಧಿಕಾರಿ ಸಿದ್ದಪ್ಪ ಖೈನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಲಾಲಪ್ಪ.ಎ.ಕೆ., ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಾಣಾಧಿಕಾರಿ ರಾಮಕೃಷ್ಣ ನಾಯಕ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮÃ ಮೈದೂರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ಹೆಚ್.ಸಿ.ರಾಘವೇಂದ್ರ ಭಟ್ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ