ಶುಕ್ರವಾರ, ಜನವರಿ 31, 2025
ಫೆ.02 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.31(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್‌ಜೆವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಫೆ.02 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ 220/110/11ಕೆ.ವಿ ಅಲ್ಲಿಪುರ ಸ್ವೀಕರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ, ಆಲದಹಳ್ಳಿ ಕೃಷಿ ಪ್ರದೇಶಗಳು. ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶಗಳು.
ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ ಗ್ರಾಮಗಳು. ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಳ್ಳಿ, ಹೊನ್ನಳ್ಳಿತಾಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ