ಬುಧವಾರ, ಜನವರಿ 1, 2025
ಜ.03 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.01(ಕರ್ನಾಟಕ ವಾರ್ತೆ):
ಬಳ್ಳಾರಿ-ರೂಪನಗುಡಿ (ಧನಲಕ್ಷಿö್ಮÃ ಕ್ಯಾಂಪ್ ಹತ್ತಿರವರೆಗೂ) ರಸ್ತೆ ಆಗಲೀಕರಣ ಕಾಮಗಾರಿ ಪ್ರಾರಂಭವಾಗಿರುವುದರಿAದ ರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಜ.03 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯ ವರೆಗೆ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್‌ವಾಗುವ ಪ್ರದೇಶಗಳು:
ಎಫ್-52 ಶಂಕರಬAಡೆ ಐಪಿ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನ ಬೂದಿಹಾಳ್, ಬೆಂಚಿ ಕೊಟ್ಟಾಲ್, ಕಮ್ಮರಚೇಡು ಕೃಷಿ ಪ್ರದೇಶಗಳು. ಎಫ್-53 ಶಂಕರಬAಡೆ ಎನ್.ಜೆ.ವೈ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬರ‍್ರನಾಯಕನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ