ಶುಕ್ರವಾರ, ಜನವರಿ 17, 2025

ಜ.18 ರಂದು ವಿದ್ಯುತ್ ಗ್ರಾಹಕರ ಸಂವಾದ ಮತ್ತು ಕುಂದುಕೊರತೆ ಸಭೆ

ಬಳ್ಳಾರಿ,ಜ.17(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರಿಗಾಗಿ ವಿದ್ಯುತ್ ಸಂಬAಧಿತ ದೂರು, ಸಮಸ್ಯೆ ಮತ್ತು ಅರಿವು ಮೂಡಿಸುವ ಸಲುವಾಗಿ ಜ.18 ರಂದು ಬಳ್ಳಾರಿ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಮತ್ತು ಕುಂದುಕೊರತೆ ಸಭೆ ಏರ್ಪಡಿಸಲಾಗಿದ್ದು, ಸಮಸ್ಯೆ ಇರುವಂತಹ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ