ಶುಕ್ರವಾರ, ಜನವರಿ 17, 2025

ಜ.19 ರಂದು ಜಾಗೃತ್ 5ಕೆ ರನ್

ಬಳ್ಳಾರಿ,ಜ.17(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಜಿಲ್ಲಾ ಪೊಲೀಸ್ ವತಿಯಿಂದ ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಹಾಗೂ ಡ್ರಗ್ಸ್ಮುಕ್ತ ಕರ್ನಾಟಕದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ಜ.19 ರಂದು ಬೆಳಿಗ್ಗೆ 06.30 ಗಂಟೆಗೆ ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಿಂದ ಜಾಗೃತ್ 5ಕೆ ರನ್ ಆಯೋಜಿಸಲಾಗಿದೆ. ಜಾಗೃತ್ 5ಕೆ ರನ್ ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಿಂದ ಆರಂಭಗೊAಡು ಗಡಿಗಿ ಚನ್ನಪ್ಪ ವೃತ್ತ, ಹಳೇ ತಾಲ್ಲೂಕು ಕಚೇರಿ ರಸ್ತೆ, ಹೆಚ್.ಆರ್.ಗವಿಯಪ್ಪ (ಮೋತಿ ಸರ್ಕಲ್), ವಾಲ್ಮೀಕಿ ಸರ್ಕಲ್, ಕನಕದುರ್ಗಮ್ಮ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣ ಮುಖಾಂತರ ಮರಳಿ ಮುನಿಸಿಪಲ್ ಮೈದಾನದ ಆವರಣದವರೆಗೆ ನಡೆಯಲಿದೆ. ಸಾರ್ವಜನಿಕರು ಭಾಗವಹಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ