ಶನಿವಾರ, ಜನವರಿ 18, 2025

ಜ.21 ರಂದು ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಕಾರ್ಯಗಾರ

ಬಳ್ಳಾರಿ,ಜ.18(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಮುನಿಸಿಪಾಲ್ ಕಾಲೇಜ್ ಮೈದಾನದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಕಾರ್ಯಾಗಾರ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸುವರು. ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಘನ ಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವಿ.ಗಾದೆಪ್ಪ, ಉಪಾಧ್ಯಕ್ಷರಾದ ಎಸ್.ಕೆ.ವಿಶಾಲಾಕ್ಷಿ, ರಾಜ್ಯ ಪ್ರತಿನಿಧಿ ಕೃಷಿಕ ಸಮಾಜದ ಸುರೇಶ ನಂದಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಎಂ.ಹನುಮAತಪ್ಪ, ಕೃಷಿ ಇಲಾಖೆಯ ಕಾರ್ಯದರ್ಶಿ ರವಿಶಂಕರ್.ಜೆ., ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ.ಕೆ.ವಿ., ಕೃಷಿ ಇಲಾಖೆಯ ಕೃಷಿ ಆಯುಕ್ತ ಪಾಟೀಲ್ ಯಲನಗೌಡ ಶಿವನಗೌಡ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಮಹೇಶ್.ಬಿ.ಶಿರೂರ್, ಕೃಷಿ ಇಲಾಖೆಯ ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮೊಹಮ್ಮದ ಪರವೇಜ ಬಂಥನಾಳ ಸೇರಿದಂತೆ ಇತರರು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಕೆ.ಎಂ., ಉಪ ಕೃಷಿ ನಿರ್ದೇಶಕ ಮಂಜುನಾಥ ಎಸ್.ಎನ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಎಲ್ಲಾ ರೈತ ಮತ್ತು ಇತರೆ ಸಂಘ-ಸAಸ್ಥೆಗಳು, ಪ್ರಗತಿ ಪರ ರೈತರು ಮತ್ತು ಮಹಿಳಾ ರೈತರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ