ಮಂಗಳವಾರ, ಜನವರಿ 21, 2025
ಜ.22 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.21(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ವ್ಯಾಪ್ತಿಯ 220/11ಕೆ.ವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜ.22 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-77 ರ ವ್ಯಾಪ್ತಿಯ ಓಪಿಡಿ, ಶಾಂತಿ ನಗರ, ಕೊಳಗಲ್ ರಸ್ತೆ, ವಿಮ್ಸ್ ಕ್ಯಾಂಪಸ್ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಉಪ ವಿಭಾಗ-2 ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ