ಬುಧವಾರ, ಜನವರಿ 22, 2025

ಜ.25 ರಂದು ‘ರಾಷ್ಟಿçÃಯ ಮತದಾರರ ದಿನ’ ಕಾರ್ಯಕ್ರಮ

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗ, ಬಳ್ಳಾರಿ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ರೈಲ್ವೇ ನಿಲ್ದಾಣ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ‘ರಾಷ್ಟಿçÃಯ ಮತದಾರರ ದಿನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್.ಪಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ