ಶನಿವಾರ, ಜನವರಿ 25, 2025

ಬಳ್ಳಾರಿ: ಜ.26 ರಂದು 10*7 ಅಡಿಯ “ಭಾರತದ ಸಂವಿಧಾನ ಪೀಠಿಕೆ” ಉದ್ಘಾಟನಾ ಕಾರ್ಯಕ್ರಮ

ಬಳ್ಳಾರಿ,ಜ.24(ಕರ್ನಾಟಕ ವಾರ್ತೆ): 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ.26 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ ಪಕ್ಕದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಗ್ರೆನೇಟ್ ಕಲ್ಲಿನಲ್ಲಿ ಕೆತ್ತನೆ ಮಾಡಲಾದ 10*7 ಅಡಿಯ “ಭಾರತದ ಸಂವಿಧಾನ ಪೀಠಿಕೆ”ಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್ ಅವರು ಉದ್ಘಾಟನೆ ನೆರವೇರಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಇತರೆ ಸರ್ಕಾರೇತರ ಸಂಸ್ಥೆಗಳು, ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ