ಗುರುವಾರ, ಜನವರಿ 23, 2025
ಜ.26 ರಂದು ಜಿಲ್ಲಾಡಳಿತದಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆ
ಬಳ್ಳಾರಿ,ಜ.23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಜ.26 ರಂದು ಬೆಳಿಗ್ಗೆ 09 ಗಂಟೆಗೆ ಬಿಮ್ಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸುವರು.
ಇದಕ್ಕೂ ಮುನ್ನ ಸಚಿವರು, ಅಂದು ಬೆಳಿಗ್ಗೆ 08.15 ಕ್ಕೆ ಡಾ.ರಾಜ್ ಕುಮಾರ್ ಉದ್ಯಾನವನದ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು. ಬಳಿಕ ಬೆಳಿಗ್ಗೆ 09.05 ಕ್ಕೆ ಪಥ ಸಂಚಲನ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕಾರ ಮಾಡುವರು. ನಂತರ ಗಣರಾಜ್ಯೋತ್ಸವದ ಸಂದೇಶ ನೀಡುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಸಭಾ ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಂದು, ಸಂಜೆ 05.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ