ಶುಕ್ರವಾರ, ಜನವರಿ 24, 2025
ಫೆ.28 ರಿಂದ ಮಾ.03 ರ ವರೆಗೆ ‘ಪುಸ್ತಕ ಮೇಳ': ಲಾಂಛನ ವಿನ್ಯಾಸಕ್ಕೆ ಅವಕಾಶ
ಬಳ್ಳಾರಿ,ಜ.24(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ಫೆ.28 ರಿಂದ ಮಾ.03 ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ‘ಪುಸ್ತಕ ಮೇಳ'ವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸುತ್ತಿದ್ದು, ಮೇಳಕ್ಕೆ ಸಂಬAಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಅದನ್ನು ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ವಿಧಾನ ಸಭೆ ಸಚಿವಾಲಯದ ನಿರ್ದೇಶಕ ಬಿ.ಎಸ್.ಮಹಾಲಿಂಗೇಶ್ ಅವರು ತಿಳಿಸಿದ್ದಾರೆ.
ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಗೌರವಪೂರ್ವಕವಾಗಿ ಬಹುಮಾನ ನೀಡಲಾಗುವುದು. ಆಸಕ್ತರು ಈ ಕಾರ್ಯಕ್ರಮಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ ವಿಳಾಸ, ದೂರವಾಣಿ ಸಂಖ್ಯೆ, ಮುಂತಾದ ವಿವರಗಳೊಂದಿಗೆ ಫೆ.03 ರೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು-560001 ಇವರಿಗೆ ಕಳುಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ