ಮಂಗಳವಾರ, ಜನವರಿ 28, 2025
ಸಿರುಗುಪ್ಪ: ಜ.29 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.28(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜು ಆಗುವ ಎಫ್-1 ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜ.29 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಸಿರುಗುಪ್ಪ ಪಟ್ಟಣದ ಅದೋನಿ ರಸ್ತೆ, ಬೈಪಾಸ್ ರಸ್ತೆ, ಸಿಂಧನೂರು ರಸ್ತೆ, ದೇಶನೂರು ರಸ್ತೆ, ಟಿಪ್ಪು ಸುಲ್ತಾನ್ ಸರ್ಕಲ್, ಬಸ್‌ಸ್ಟಾö್ಯಂಡ್ ಏರಿಯಾ ಸದಾಶಿವ ನಗರ, ಕಬರಸ್ಥಾನ್ ರಸ್ತೆ ಮತ್ತು ಪಾರ್ವತಿ ನಗರದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.
ಸೂಚನೆ: ಆದೋನಿ ರಸ್ತೆಯ ಮಾರ್ಗದಲ್ಲಿ ತುರ್ತು ನಿರ್ವಾಹಣೆ ಕಾರ್ಯ ಮುಗಿಯುವವರೆಗೂ ಅಥವಾ ಮುಗಿದ ತಕ್ಷಣ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಚಾಲನೆ ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಗ್ರಾಹಕರು ವಿದ್ಯುತ್ ಮಾರ್ಗಗಳ ಹತ್ತಿರ ಯಾವುದೇ ತರಹದ ಕೆಲಸ ಮಾಡಬಾರದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ